
ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಡಾ.ಧನಂಜಯ ಸರ್ಜಿ ಅವರು ಪತ್ನಿ ನಮಿತಾ ಸರ್ಜಿ ಅವರು ಮಂಗಳೂರಿನಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾಗಿರುವಂತಹ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಈ ಸಂದರ್ಭ ಪ್ರಭಾಕರ್ ಭಟ್ ಅವರು ಚುನಾವಣೆಯಲ್ಲಿ ವಿಜಯಶಾಲಿ ಆಗಲಿ ಎಂದು ತುಂಬು ಹೃದಯದಿಂದ ಡಾ.ಧನಂಜಯ ಸರ್ಜಿ ಅವರಿಗೆ ಹರಸಿದರು ಎಂದು ತಮ್ಮ ಸಂತೋಷವನ್ನು ಹಂಚಿಕೊಂಡಿದ್ದಾರೆ.