Wednesday, April 30, 2025
Google search engine
Home#ಬೆಳ್ತಂಗಡಿ ಶಾಸಕ ಹರೀಶ್ ಪುಂಜಾ #ಅಕ್ರಮ ಕಲ್ಲುಗಣಿಗಾರಿಕೆ ಹಾಗೂ ಸ್ಪೋಟಕಗಳ ಸಂಗ್ರಹ ಪತ್ತೆ ಆರೋಪಿಗಳ ಜೂತೆ  ಶಾಸಕರ  ಮೇಲು ಬಿತ್ತು ಕೇಸ್..!

ಅಕ್ರಮ ಕಲ್ಲುಗಣಿಗಾರಿಕೆ ಹಾಗೂ ಸ್ಪೋಟಕಗಳ ಸಂಗ್ರಹ ಪತ್ತೆ ಆರೋಪಿಗಳ ಜೂತೆ  ಶಾಸಕರ  ಮೇಲು ಬಿತ್ತು ಕೇಸ್..!

ಬೆಳ್ತಂಗಡಿ : ತಾಲೂಕಿನ  ಪೊಲೀಸ್ ಠಾಣಾ ವ್ಯಾಪ್ತಿಯ ಮೇಲಂತಬೆಟ್ಟು ಎಂಬಲ್ಲಿ ನಡೆಯುತ್ತಿದ್ದ, ಅಕ್ರಮ ಕಲ್ಲುಗಣಿಗಾರಿಕೆ ಹಾಗೂ ಸದ್ರಿ ಗಣಿಗಾರಿಕೆಗಾಗಿ ಶೇಖರಿಸಲಾಗಿದ್ದ, ಅಪಾಯಕಾರಿ ಸ್ಪೋಟಕಗಳ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಗಳಾದ ಪ್ರಮೋದ್‌ ಉಜಿರೆ ಹಾಗೂ ಶಶಿರಾಜ್‌ ಶೆಟ್ಟಿ (35) ಎಂಬವರುಗಳ ವಿರುದ್ಧ, ಬೆಳ್ತಂಗಡಿ ಠಾಣೆಯಲ್ಲಿ ದಿನಾಂಕ 18.05.2024 ರಂದು ಅ.ಕ್ರ: 56/2024, ಕಲಂ: 9B(1)(b) Explosive act 1884 ಕಲಂ 5 The Explosives Substance Act-1908 ರಂತೆ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪೈಕಿ ಶಶಿರಾಜ್‌ ಶೆಟ್ಟಿ ಎಂಬಾತನನ್ನು ವಶಕ್ಕೆ ಪಡೆಯಲಾಗಿರುತ್ತದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಧಿತ ಪ್ರಮುಖ ಆರೋಪಿ ಹಾಗೂ ಬೆಳ್ತಂಗಡಿ ಠಾಣಾ ವ್ಯಾಪ್ತಿಯ ರೌಡಿಶೀಟರ್ ಆಗಿರುವ ಶಶಿರಾಜ್‌ ಪರವಾಗಿ, ಬೆಳ್ತಂಗಡಿ ವಿಧಾನಸಭಾ ಶಾಸಕರಾದ ಹರೀಶ್ ಪೂಂಜಾರವರು, ಇತರ ಕೆಲವು ಜನರೊಂದಿಗೆ, ದಿನಾಂಕ 18.05.2024 ರಂದು ರಾತ್ರಿ, ಬೆಳ್ತಂಗಡಿ ಠಾಣೆಗೆ ಭೇಟಿ ನೀಡಿ, ಆರೋಪಿಯು ಶಾಸಕರ ಪಕ್ಷದ ಕಾರ್ಯಕರ್ತನಾಗಿದ್ದು, ಆತನನ್ನು ಕಾನೂನುಬಾಹಿರವಾಗಿ ಬಿಡುಗಡೆ ಮಾಡುವಂತೆ ಠಾಣಾಧಿಕಾರಿಗಳಿಗೆ ಒತ್ತಡ ಹಾಕಿ, ಅವ್ಯಾಚವಾಗಿ ಬೈದು ಬೆದರಿಸಿರುತ್ತಾರೆ ಹಾಗೂ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ, ಪೊಲೀಸ್ ಇಲಾಖೆಯ ಬಗ್ಗೆ ಮತ್ತು ಪೊಲೀಸ್ ಅಧಿಕಾರಿಗಳ ಬಗ್ಗೆ ಅಸಂವಿಧಾನಿಕ ಶಬ್ದಗಳಲ್ಲಿ ಮಾತನಾಡಿ, ದುರ್ವರ್ತನೆ ತೋರಿರುತ್ತಾರೆ.

ಈ ಬಗ್ಗೆ ಶಾಸಕರಾದ ಹರೀಶ್ ಪೂಂಜಾರವರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಅ.ಕ್ರ. 57/2024 , ಕಲಂ:353, 504 IPC ರಂತೆ ಪ್ರಕರಣ ದಾಖಲಿಸಲಾಗಿರುತ್ತದೆ.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...