Wednesday, April 30, 2025
Google search engine
Homeಬೆಂಗಳೂರುಪೊಲೀಸರನ್ನು ನಾವು ರಕ್ಷಣೆ ಮಾಡಬೇಕಾಗಿದೆ  ಇಲ್ಲವಾದಲ್ಲಿ ಅವರು ಸೇವೆ ಸಲ್ಲಿಸುವುದಾದರೂ ಹೇಗೆ ..! ಹೈಕೋರ್ಟ್ ಕಳವಳ..!

ಪೊಲೀಸರನ್ನು ನಾವು ರಕ್ಷಣೆ ಮಾಡಬೇಕಾಗಿದೆ  ಇಲ್ಲವಾದಲ್ಲಿ ಅವರು ಸೇವೆ ಸಲ್ಲಿಸುವುದಾದರೂ ಹೇಗೆ ..! ಹೈಕೋರ್ಟ್ ಕಳವಳ..!


ಅಕ್ರಮ ಗಣಿಗಾರಿಕೆ ಹಾಗೂ ಸ್ಫೋಟಕಗಳ ಅಕ್ರಮ ದಾಸ್ತಾನು ಮಾಡಿದ್ದ ಆರೋಪದಲ್ಲಿ ಬಂಧಿತ ವ್ಯಕ್ತಿಯ ಬಿಡುಗಡೆಗೆ ಒತ್ತಾಯಿಸಿ ಪೊಲೀಸ್ ಠಾಣೆ ಮುಂದೆ ಪ್ರತಿಭಟಿಸಿದ್ದಲ್ಲದೇ, ಪೊಲೀಸರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರನ್ನು ಹೈಕೋರ್ಟ್  ತೀವ್ರ ತರಾಟೆಗೆ ತೆಗೆದುಕೊಂಡಿದೆ.

ನ್ಯಾಯಾಲಯದ ಕೆಲಸವನ್ನು ನೀವು ಮಾಡಬೇಡಿ :


ಹರೀಶ್ ಪುಂಜಾ ವಿರುದ್ಧ ದಾಖಲಾಗಿದ್ದ 2 FIRಗಳನ್ನು ಪ್ರಶ್ನಿಸಿ  ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ನ್ಯಾಯಪೀಠ, ಪೊಲೀಸರು ಯಾವುದೇ ವ್ಯಕ್ತಿಯನ್ನು ಬಂಧಿಸಿದಾಗ ಸ್ಥಳೀಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮೊರೆ ಹೋಗಬಹುದು. ಅಕ್ರಮ ಬಂಧನ ಮಾಡಿದಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದು.

ಅದು ಬಿಟ್ಟು ಜನಪ್ರತಿನಿಧಿ ಎಂಬ ಕಾರಣಕ್ಕೆ ‌ಪೋಲಿಸ್ ಠಾಣೆ ಮುಂದೆ ಹೋಗಿ ಪ್ರತಿಭಟನೆ ನಡೆಸುವುದು ಎಷ್ಟು ಸರಿ?, ಅಲ್ಲದೆ, ಶಾಸಕರು ಕಾನೂನು ಮಾಡುವ ಕೆಲಸವನ್ನು ಮಾಡಬೇಕು. ಅದರ ಬದಲಾಗಿ ನ್ಯಾಯಾಲಯದ ಕೆಲಸದಲ್ಲಿ ಮಾಡುವುದಕ್ಕೆ ಮುಂದಾಗುವುದು ಎಷ್ಟು ಸರಿ ಎಂದು ನ್ಯಾಯಾಲಯ  ಪ್ರಶ್ನಿಸಿದೆ.


ಮ್ಯಾಜಿಸ್ಟ್ರೇಟ್ ನ್ಯಾಯಾಧೀಶರಿದ್ದಾರೆ, ನ್ಯಾಯಾಲಯದ ಕಾರ್ಯವನ್ನು ನೀವು ಮಾಡುವುದಕ್ಕೆ ಮುಂದಾಗಬೇಡಿ. ನಿಮ್ಮ ಕೆಲಸ ಕಾನೂನು ಮಾಡುವುದನ್ನು ಮಾಡಿ, ನ್ಯಾಯಾಲಯ ತನ್ನ ಕಾರ್ಯ ಮಾಡುವುದಕ್ಕೆ ಬಿಡಿ ಎಂದು ನ್ಯಾಯಾಲಯ ಸಲಹೆ ನೀಡಿದೆ.

ಹಾಗೆಯೇ ಪ್ರಸಕ್ತ ದಿನಗಳಲ್ಲಿ ಪೊಲೀಸ್‌ ರ ವಿರುದ್ಧ ಧರಣಿ ಮಾಡುವುದು, ಕಲ್ಲು ಎಸೆಯುವುದು, ಕರ್ತವ್ಯಕ್ಕೆ ಅಡ್ಡಿಪಡಿಸುವುದು ಸಾಮಾನ್ಯವಾಗಿದೆ. ಯಾವುದೋ ಒಂದು ಪ್ರಕರಣದಲ್ಲಿ ಪೊಲೀಸರಿಂದ ಒಬ್ಬರಿಗೆ ತೊಂದರೆ ಆಗಬಹುದು. ಆದರೆ, ಪೊಲೀಸರನ್ನು ನಾವು ರಕ್ಷಣೆ ಮಾಡಬೇಕಾಗಿದೆ. ಇಲ್ಲವಾದಲ್ಲಿ ಅವರು ಸೇವೆ ಸಲ್ಲಿಸುವುದಾದರೂ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದೆ.


ಈ ರೀತಿಯ ಪ್ರಕರಣದಲ್ಲಿ ಯಾವುದೇ ನ್ಯಾಯಾಲಯ ಆರೋಪಿತರ ಪರವಾಗಿ ಆದೇಶಿಸಿರುವ ಭಾರತದ ಯಾವುದೇ ನ್ಯಾಯಾಲಯದಲ್ಲಿ ವಿದೇಶ ನ್ಯಾಯಾಲಯಗಳಲ್ಲಿ ಒಂದೇ ಒಂದು ಆದೇಶ ನೀಡಿರುವ ಉದಾಹರಣೆ ಇದಿಯೇ? ಇದ್ದರೆ ಸಲ್ಲಿಸಿ ಅದರ ಆಧಾರದಲ್ಲಿ ಮುಂದಿನ ವಿಚಾರಣೆ ನಡೆಸಿ ಆದೇಶಿಸಲಾಗುವುದು ಎಂದು ನ್ಯಾಯಾಲಯ ಅಭಿಪ್ರಾಯಪಡಿಸಿದೆ.


ವಾದ ಆಲಿಸಿದ ನ್ಯಾಯಾಲಯ ಸರಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಅಲ್ಲದೆ, ಮುಂದಿನ ವಿಚಾರಣೆಯವರೆಗೆ ಸಮಾಧಾನವಾಗಿರಿ. ಅರ್ಜಿದಾರರಿಗೆ ಯಾವುದೇ ತೊಂದರೆ ಮಾಡುವುದಕ್ಕೆ ಮುಂದಾಗಬೇಡಿ ಎಂದು ಸೂಚಿಸಿ  ವಿಚಾರಣೆ ಮುಂದೂಡಿದೆ.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...