
ತೀರ್ಥಹಳ್ಳಿ : ತಾಲೂಕಿನ ಮೇಲಿನಕುರುವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾನಿ ಸಮೀಪ ಮನೆಯೊಂದರ ಬೀಗ ಒಡೆದು ಕಳ್ಳತನ ಮಾಡಲು ಪ್ರಯತ್ನ ಪಟ್ಟ ಕಳ್ಳನನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.
ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳತನ ಮಾಡಲು ಮೂರು ಜನರು ಬಂದು ಮೇಲಿನ ಕುರುವಳ್ಳಿ ಮೇಳಿಗೆ ರಸ್ತೆಯ ವಾಟರ್ ಟ್ಯಾಂಕ್ ಸಮೀಪ ಕಳ್ಳತನಕ್ಕೆ ಪ್ರಯತ್ನ ಪಟ್ಟಿದ್ದಾರೆ. ದೇವಯ್ಯ ಎಂಬುವರ ಕುಟುಂಬದವರು ಮನೆಗೆ ಬೀಗ ಹಾಕಿ ಕಾಶಿಯಾತ್ರೆಗೆ ಹೋಗಿದ್ದು ವಿಷಯ ತಿಳಿದು ಕಳ್ಳರು ಮನೆಗೆ ಬಂದು ಬೀಗ ಒಡೆದು ಕಳ್ಳತನಕ್ಕೆ ಪ್ರಯತ್ನಿಸಿದ್ದಾರೆ. ವಿಷಯ ತಿಳಿದ ಗ್ರಾಮಸ್ಥರು ಸೇರಿ ಮೂವರಲ್ಲಿ ಒಬ್ಬನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.