Thursday, May 1, 2025
Google search engine
Homeರಾಜ್ಯಅನಧಿಕೃತ ಮನೆಗೆ ಅಧಿಕೃತ ಚರಂಡಿ ವಿದ್ಯುತ್ ಸಂಪರ್ಕ ಒದಗಿಸಿದ ಮಹಾನಗರ ಪಾಲಿಕೆ..!

ಅನಧಿಕೃತ ಮನೆಗೆ ಅಧಿಕೃತ ಚರಂಡಿ ವಿದ್ಯುತ್ ಸಂಪರ್ಕ ಒದಗಿಸಿದ ಮಹಾನಗರ ಪಾಲಿಕೆ..!


ಶಿವಮೊಗ್ಗ : ನಗರದ ಬೊಮ್ಮನಕಟ್ಟೆಯ ಎಫ್ ಬ್ಲಾಕಿನ ಹಿಂಭಾಗದ ಅಂಚಿನಲ್ಲಿ ಮಹಾನಗರ ಪಾಲಿಕೆಯು ಒಂದಷ್ಟು ಸಿಎ ಸೈಟ್ ಮತ್ತು ಖರಾಬು ಜಾಗವನ್ನು ಬಿಟ್ಟಿದ್ದು ಈಗ ಈ ಪಾಲಿಕೆ ಜಾಗದಲ್ಲಿ ಕಾನೂನು ಬಾಹಿರ ಶೆಡ್ ಗಳು, 30×40 ಅಡಿ ನಿವೇಶನದಲ್ಲಿ ಅನಧಿಕೃತ ಮನೆಗಳು ನಿರ್ಮಾಣವಾಗಿವೆ.

ಈ ಕುರಿತು ಈಗಾಗಲೇ ಪಾಲಿಕೆ ಗಮನಕ್ಕೆ ತಂದರೂ ಇನ್ನೂ ಯಾವ ಕ್ರಮವಾಗಲಿಲ್ಲ ಎಂದು ಸ್ಥಳೀಯರು ದೂರಿದ್ದಾರೆ. ಅನಧೀಕೃತ ಕಟ್ಟಡಕ್ಕೆ ವಿದ್ಯುತ್ ಸಂಪರ್ಕವನ್ನೂ ನೀಡಲಾಗಿದೆ. ಇದು ಹೇಗೆ? ನಿನ್ನೆ ದಿನ ಓರ್ವರು ತಮ್ಮ ಅನಧೀಕೃತ ಮನೆಗೆ ಯುಜಿಡಿ ಸಂಪರ್ಕ ಕಲ್ಪಿಸಲು ಉತ್ತಮ ಗುಣ ಮಟ್ಟದ ಡಾಂಬರ್ ರಸ್ತೆ ಅಗೆದು ಹಾಳುಗೆಡವಿದ್ದಾರೆ.

ಇದರ ಬಗ್ಗೆ ಪಾಲಿಕೆಯ ಇಂಜಿನೀಯರ್ ವಿಷ್ಣು ದೀಕ್ಷಿತರಿಗೆ ತಿಳಿಸಲಾಗಿ ಅವರು ಸ್ಥಳಕ್ಕಾಗಮಿಸಿ ಇದೊಂದು ಮನೆಯವರು ಸಂಪರ್ಕ ಮಾಡಿಕೊಳ್ಳಲಿ. ಬೇರೆಯವರಿಗೆ ಅವಕಾಶ ಕೊಡುವುದಿಲ್ಲ ಎಂದು ಹೇಳಿದ್ದಾಗಿ ಸ್ಥಳೀಯರು ಹೇಳುತ್ತಾರೆ. ಪಾಲಿಕೆ ಪರವಾನಿಗೆ ಇದ್ದರೆ ತಮ್ಮದೇನೂ ಅಭ್ಯಂತರ ಇಲ್ಲ. ಆದರೆ ಪರವಾನಿಗೆ ತೋರಿಸಬೇಕು ಎಂದು ಸ್ಥಳೀಯರು ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.

ಪರವಾನಿಗೆ ಇಲ್ಲದ ಜಾಗದಲ್ಲಿ ಕಟ್ಟಿದ ಕಟ್ಟಡಕ್ಕೆ ಕಾನೂನು ಬಾಹಿರವಾಗಿ ಅಧಿಕಾರಿಗಳು ಹೇಗೆ ಸಮ್ಮತಿ ಸೂಚಿಸುತ್ತಾರೆ. ಇದರಲ್ಲಿ ಏನೋ ಗೋಲ್ ಮಾಲ್ ನಡೆದಿದೆ . ಅಧಿಕಾರಿಗಳು, ರಾಜಕೀಯ ವ್ಯಕ್ತಿಗಳು ಶಾಮೀಲಾಗಿದ್ದಾರೆ ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಅತಿಕ್ರಮಣದ ಕುರಿತು ಸಮಗ್ರ ತನಿಖೆ ಆಗಬೇಕೆಂದು ಅವರು ಆಗ್ರಹಿಸಿದ್ದಾರೆ.

ಮಹಾನಗರ ಪಾಲಿಕೆಯ ನೂತನ ಆಯುಕ್ತರು ಇತ್ತ ಗಮನ ಹರಿಸಬೇಕು.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...