
ಹರಿಹರ:-ರಾಜ್ಯದಲ್ಲಿ ಹಿಂದಿ ದಿವಸ್ ಆಚರಣೆಯನ್ನು ವಿರೋಧಿಸಿ ಕನ್ನಡಪರ ಸಂಘಟನೆಯ ಕಾರ್ಯಕರ್ತರು ಇಂದು ಹರಿಹರದಲ್ಲಿ ಬೈಕ್ ರಾರ್ಲಿ ನಡೆಸಿದರು .
ತಾಲ್ಲೂಕು ಕೇಂದ್ರದಲ್ಲಿರುವ ವಿವಿಧ ಬ್ಯಾಂಕುಗಳಿಗೆ ತೆರಳಿ ಬ್ಯಾಂಕಿನಲ್ಲಿ ಕನ್ನಡಿಗರನ್ನು ನೇಮಿಸುವಂತೆ ಒತ್ತಾಯಿಸಿ ಬ್ಯಾಂಕ್ ವ್ಯವಸ್ಥಾಪಕರಿಗೆ ಆಗ್ರಹ ಪತ್ರ ನೀಡಿದ್ದರು .
ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ) ನಗರ ಘಟಕದ ಅಧ್ಯಕ್ಷ ರಮೇಶ ಮಾನೆ ಮಾತನಾಡಿ ಭಾರತದ ಒಕ್ಕೂಟ ಸರ್ಕಾರವು ಪ್ರತಿವರ್ಷ ಸೆಪ್ಟೆಂಬರ್ 14 ರಂದು ನಮ್ಮ ರಾಜ್ಯದ ತೆರಿಗೆ ಹಣದಲ್ಲಿ ಹಿಂದಿ ದಿವಸ್ ಆಚರಣೆಯನ್ನು ನಡೆಸುತ್ತ ಬಂದಿದ್ದಾರೆ .ಇದನ್ನು ಕರ್ನಾಟಕ ರಕ್ಷಣಾ ವೇದಿಕೆ ತೀವ್ರವಾಗಿ ವಿರೋಧಿಸುತ್ತದೆ .ಕರ್ನಾಟಕದಲ್ಲಿ ಕನ್ನಡವೇ ಆಡಳಿತ ಭಾಷೆ ,ಪ್ರತಿ ವ್ಯವಹಾರವೂ ಕನ್ನಡದಲ್ಲೇ ನಡೆಯಬೇಕು ಎಂದು ಒತ್ತಾಯಿಸುತ್ತೇನೆ ಎಂದರು .
ರಕ್ಷಣಾ ವೇದಿಕೆಯ ಗೌರವಾಧ್ಯಕ್ಷ ಮಾತನಾಡಿ ಹಿಂದಿ ದಿವಸ್ ಆಚರಣೆಯನ್ನು ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣ ನೇತೃತ್ವದಲ್ಲಿ ಕಳೆದ ಇಪ್ಪತ್ತು ವರ್ಷಗಳಿಂದ ತೀವ್ರವಾಗಿ ವಿರೋಧಿಸುತ್ತಾ ಬಂದಿದ್ದೇವೆ .ಈ ವರ್ಷವೂ ಸಹ ಹಿಂದಿ ದಿವಸ್ ಆಚರಣೆಯನ್ನು ವಿರೋಧಿಸುತ್ತೇವೆ .ರಾಜ್ಯಾದ್ಯಂತ ಇಂದು ತಾಲ್ಲೂಕು, ಹೋಬಳಿ ಮತ್ತು ಹಳ್ಳಿಗಳಲ್ಲಿ ಇರುವ ಎಲ್ಲಾ ರಾಷ್ಟ್ರೀಕೃತ ಮತ್ತು ಗ್ರಾಮೀಣ ಬ್ಯಾಂಕ್ ಗಳ ಮುಂಭಾಗ ಸಾವಿರಾರು ಪ್ರತಿಭಟನೆಗಳನ್ನು ನಡೆಸುತ್ತಿದ್ದು ಅದೇ ರೀತಿ ಬ್ಯಾಂಕ್ ಗಳ ಮುಂಭಾಗದಲ್ಲೂ ಸಹ ಪ್ರತಿಭಟನೆ ನಡೆಸುತ್ತಿದ್ದೇವೆ .ಬ್ಯಾಂಕುಗಳಲ್ಲಿ ಕನ್ನಡಿಗರಿಗೆ ಮೊದಲ ಆದ್ಯತೆಯನ್ನು ನೀಡಬೇಕು, ಕನ್ನಡದಲ್ಲೇ ಪತ್ರ ವ್ಯವಹಾರ ನಡೆಸಬೇಕು ಎಂದು ಈ ಸಂದರ್ಭದಲ್ಲಿ ಆಗ್ರಹಿಸಿದರು .
ರಕ್ಷಣಾ ವೇದಿಕೆಯ ಪ್ರಧಾನ ಕಾರ್ಯದರ್ಶಿ ಪ್ರಿಯತಮ್ ಬಾಬು ಮಾತನಾಡಿ ಬ್ಯಾಂಕುಗಳಲ್ಲಿ ಕನ್ನಡದಲ್ಲಿ ಸೇವೆ ನೀಡದಿರುವುದು ಹಿಂದಿ ಭಾಷೆಯಲ್ಲಿ ಮಾತನಾಡುವಂತೆ ಗ್ರಾಹಕರನ್ನು ಒತ್ತಾಯಿಸುವ ಅನೇಕ ಪ್ರಕರಣಗಳು ಇತ್ತೀಚಿನ ದಿನದಲ್ಲಿ ಅನೇಕ ಕಡೆಗಳಲ್ಲಿ ಕೇಳಿಬರುತ್ತಿದೆ .ಹರಿಹರ ತಾಲ್ಲೂಕಿನ ಲ್ಲಿರುವ ಬ್ಯಾಂಕುಗಳಲ್ಲೂ ಸಹ ಹಿಂದಿ ಭಾಷಿಕರನ್ನು ನೇಮಕ ಮಾಡಿ ಬಲವಂತವಾಗಿ ಗ್ರಾಹಕರಿಗೆ ಹಿಂದಿಯಲ್ಲಿ ಮಾತನಾಡುವಂತೆ ಒತ್ತಾಯಿಸುತ್ತಿದ್ದಾರೆ .ಈ ರೀತಿ ಒತ್ತಾಯಪೂರ್ವಕವಾಗಿ ಹಿಂದಿ ಮಾತನಾಡುವಂತೆ ಒತ್ತಾಯಿಸುವ ಪರಿಣಾಮ ಮುಂದಿನ ದಿನದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುವ ಸಾಧ್ಯತೆ ಹೆಚ್ಚಾಗಿದೆ .ಹಿಂದಿ ಹೇರಿಕೆ ಈ ಅನ್ಯಾಯಗಳನ್ನು ಗ್ರಾಹಕರ ಮೇಲೆ ಆಗುತ್ತಿರುವ ಹಿಂದಿ ಹೇರಿಕೆಯನ್ನು ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣ ತೀವ್ರವಾಗಿ ಖಂಡಿಸುತ್ತದೆ ಎಂದು ಹೇಳಿದರು .
ರಕ್ಷಣಾ ವೇದಿಕೆಯ ತಾಲ್ಲೂಕು ಘಟಕದ ಅಧ್ಯಕ್ಷ ಇಲಿಯಾಜ್ ಮಾತನಾಡಿ ಬ್ಯಾಂಕಿನ ಎಲ್ಲಾ ಸೇವೆಗಳೂ ಕನ್ನಡದಲ್ಲೇ ನೀಡಬೇಕು ಕನ್ನಡದಲ್ಲಿ ಬ್ಯಾಂಕಿನ ವ್ಯವಹಾರ ನಡೆಸಲು ಸುಲಭವಾಗುವಂತೆ ಕರ್ನಾಟಕದವರನ್ನೇ ಬ್ಯಾಂಕಿನ ಉದ್ಯೋಗಿಗಳನ್ನಾಗಿ ನೇಮಿಸಬೇಕು ಕನ್ನಡ ಬಾರದ ಸಿಬ್ಬಂದಿ ಗಳನ್ನು ಈ ಕೂಡಲೇ ಅವರ ಮಾತೃ ರಾಜ್ಯಗಳಿಗೆ ವರ್ಗಾವಣೆ ಮಾಡಬೇಕು .ಕರ್ನಾಟಕದ ಉದ್ಯೋಗಗಳು ಕನ್ನಡಿಗರಿಗೇ ಲಭಿಸಬೇಕು.ಬ್ಯಾಂಕಿನ ಚಲನ್ ಗಳು ,ಖಾತೆ ಪುಸ್ತಕ, ಮತ್ತು ಎಲ್ಲಾ ಅರ್ಜಿ ನಮೂನೆಗಳು ಕನ್ನಡದಲ್ಲೇ ಲಭ್ಯವಿರುವಂತೆ ಬ್ಯಾಂಕಿನ ವ್ಯವಸ್ಥಾಪಕರು ನೋಡಿಕೊಳ್ಳಬೇಕು.ಬ್ಯಾಂಕಿನ ನಾಮ ಫಲಕ ಸೂಚನಾ ಫಲಕಗಳಲ್ಲಿ ಶೇಕಡಾ ಅರುವತ್ತರಷ್ಟು ಭಾಗ ಕನ್ನಡ ಭಾಷೆಯನ್ನೇ ಬಳಸಬೇಕು .ಹಿಂದಿ ದಿವಸ್, ಹಿಂದಿ ಸಪ್ತಾಹ, ಹಿಂದಿ ಪಕ್ವಾಡ ಇತ್ಯಾದಿ ಭಾಷಾ ಒಕ್ಕೂಟ ವಿರೋಧಿ ಆಚರಣೆಗಳನ್ನು ಕೂಡಲೇ ನಿಲ್ಲಿಸಬೇಕು ಇನ್ನು ಮುಂದೆ ಈ ಆಚರಣೆಗಳು ನಮ್ಮ ರಾಜ್ಯದ ಬ್ಯಾಂಕಿನಲ್ಲಿ ನಡೆಯಬಾರದು ಎಂದು ಈ ಸಂದರ್ಭದಲ್ಲಿ ಆಗ್ರಹಿಸಿದರು.
ಈ ಪ್ರತಿಭಟನೆಯ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಹಾಗೂ ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣದ )ಎಲ್ಲ ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ …. ಶ್ರೀನಿವಾಸ್.. ಆರ್…
ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899…