
ದಾವಣಗೆರೆ>>ಪ್ರಸಕ್ತ ಸಾಲಿನಲ್ಲಿ ಹರಿಹರದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಕೌಶಾಲ್ಯಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆ, ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆ (ಎಸ್‍ಸಿಪಿ-ಟಿಎಸ್‍ಪಿ) ಮೂಲಕ ನಿರುದ್ಯೋಗಿ ಯುವಕ, ಯುವತಿಯರಿಗಾಗಿ ವಿವಿಧ ತರಬೇತಿ ಒದಗಿಸಲು ಅರ್ಜಿ ಆಹ್ವಾನಿಸಲಾಗಿದೆ.
18 ರಿಂದ 35 ವರ್ಷದೊಳಗಿನ ಎಸ್.ಎಸ್.ಎಲ್.ಸಿ. ಐ.ಟಿ.ಐ, ಡಿಪ್ಲೋಮಾ, ಬಿ.ಇ ಪಾಸ್ ಆಗಿರುವ ಅಭ್ಯರ್ಥಿಗಳಿಗೆ ಡೊಮೆಸ್ಟಿಕ್ ಡಾಟಾ ಎಂಟ್ರಿ ಆಪರೇಟರ್, ಸಿ.ಎನ್.ಸಿ, ಆಪರೇಟರ್ ಟರ್ನಿಂಗ್, ಸಿ.ಎನ್.ಸಿ ಪ್ರೋಗ್ರಾಮರ್, ಕನ್‍ವೆನ್‍ಷನಲ್ ಟರ್ನಿಂಗ್ ಮಷಿನ್ ಆಪರೇಟರ್, ಮಿಲ್ಲಿಂಗ್ ಮಷಿನ್ ಆಪರೇಟರ್, ಸರ್ಫೇಸ್ ಗ್ರೈಂಡಿಂಗ್ ಮಷಿನ್ ಆಪರೇಟರ್, ಡಿಸೈನರ್ ಮೆಕಾನಿಕಲ್, ಪ್ರೊಡಕ್ಷನ್ ಇಂಜಿನಿಯರಿಂಗ್ ತರಬೇತಿ ಉಚಿತವಾಗಿ ನೀಡಲಾಗುವುದು.
ತರಬೇತಿಯ ಅವಧಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಶಿಷ್ಯವೇತನ ನೀಡಲಾಗುವುದು. ತರಬೇತಿ ಮುಗಿದ ನಂತರ ಉದ್ಯೋಗಾವಕಾಶಕ್ಕೆ ಮಾರ್ಗದರ್ಶನ ಒದಗಿಸಲಾಗುವುದು. ಅರ್ಜಿ ಸಲ್ಲಿಸಲು ಸೆ.24 ಕೊನೆಯ ದಿನವಾಗಿರುತ್ತದೆ. ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ವಿವರಗಳಿಗೆ ಪ್ರಾಂಶುಪಾಲರು, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, 22 ಸಿ ಮತ್ತು ಡಿ, ಕೆಐಎಡಿಬಿ, ಇಂಡಸ್ಟ್ರಿಯಲ್ ಏರಿಯ ಹರ್ಲಾಪುರ, ಕೆಎಸ್‍ಆರ್‍ಟಿಸಿ ಡಿಪೋ ಹತ್ತಿರ ಹರಿಹರ, ದೂ.ಸಂ. 08192-243937, 296840, 9916908111, 8884488202, 8711913947 ಕ್ಕೆ ಸಂಪರ್ಕಿಸಬಹುದು ಎಂದು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899…