
ಹರಿಹರ:-ಇಂದು ಹರಿಹರ ತಾಲೂಕಿನ ಗುತ್ತೂರು ಗ್ರಾಮದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಕಾನೂನು ಮಾಪನ ಶಾಸ್ತ್ರ ಇಲಾಖೆ ಹಾಗೂ ಆಹಾರ ಸುರಕ್ಷತೆ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ “ಗ್ರಾಹಕ ಅದಾಲತ್ ” ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮದಲ್ಲಿ ಆಹಾರ ಇಲಾಖೆಯ ಶಿರಸ್ತೇದಾರ್ ರಮೇಶ್.ಯು.ಆರ್. ಇವರು ಗ್ರಾಹಕರ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ಅರಿವು ಮೂಡಿಸುವ ಬಗ್ಗೆ ಮಾತನಾಡುತ್ತಾ ಗ್ರಾಹಕರು ಯಾರಿಂದಲಾದರೂ ವಂಚನೆಗೆ ಒಳಪಟ್ಟಾಗ ಪರಿಹಾರವನ್ನು ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯಿಂದ ಹೇಗೆ ಪಡೆದುಕೊಳ್ಳಬಹುದು ಎಂಬುದರ ಬಗ್ಗೆ ಮಾಹಿತಿ ತಿಳಿಸಿಕೊಟ್ಟರು. ಕಾರ್ಯಕ್ರಮದಲ್ಲಿ ಗುತ್ತೂರು ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಜಯಲಕ್ಷ್ಮಿ, ಕಾನೂನು ಮಾಪನ ಶಾಸ್ತ್ರ ಇಲಾಖೆಯ ನಿರೀಕ್ಷಕ ಪರ್ವಿಜ್, ತಾಲೂಕು ಆಹಾರ ನಿರೀಕ್ಷಕ ಶಿವಕುಮಾರ್, ಹಿರಿಯ ಪತ್ರಕರ್ತ ಹನುಮಂತಪ್ಪ, ಗುತ್ತೂರು ಪ್ರಾ.ಕೃ.ಪತ್ತಿನ ಸಂಘದ ನಿರ್ದೇಶಕ ಜಗದೀಶ್, ಎಸ್.ಡಿ.ಎಂ.ಸಿ. ಅಧ್ಯಕ್ಷ ಉಮೇಶ್, ಪ್ರಾ.ಕೃ.ಪತ್ತಿನ. ಸಂಘದ ಕಾರ್ಯದರ್ಶಿ ಪರಶುರಾಮ್, ಗುತ್ತೂರು ಮಂಜಣ್ಣ, ಗುತ್ತೂರು ಚನ್ನವೀರಪ್ಪ ದೀಟೂರು ನಾಗಣ್ಣ, ಅಮರಾವತಿ ರಾಜಶೇಖರಯ್ಯ ಇವರಲ್ಲದೆ ನೂರಾರು ಗ್ರಾಮಸ್ಥರು ಭಾಗವಹಿಸಿದ್ದರು..
ವರದಿ.. ಶ್ರೀನಿವಾಸ್.. ಆರ್..
ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899…