
ಶಿವಮೊಗ್ಗದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ತಲೆಗೆ ಗಂಭೀರ ಗಾಯಗೊಂಡು ನಗರದ ನಾರಾಯಣ ಹೃದಯಾಲಯದಲ್ಲಿ ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಶಾ ಕಾರ್ಯಕರ್ತೆ ರೇಖಾ ಅವರನ್ನು ಸಂಸದರಾದ ಬಿ.ವೈ.ರಾಘವೇಂದ್ರ ಅವರು ಹಾಗೂ ವಿಧಾನ ಪರಿಷತ್ ಶಾಸಕರಾದ ಡಾ.ಧನಂಜಯ ಸರ್ಜಿ ಅವರು ಭೇಟಿಯಾಗಿ ಆರೋಗ್ಯದ ಬಗ್ಗೆ ವಿಚಾರಿಸಿ ಧೈರ್ಯ ತುಂಬಿದರು.
ಈ ವೇಳೆ ನಾರಾಯಣ ಹೃದಯಾಲಯದ ಸ್ಪೆಷಲಿಟಿ ಡೈರೆಕ್ಟರ್ ವರ್ಗೀಸ್, ನಾನ್ ಮೆಡಿಕಲ್ ವಿಭಾಗದ ಮುಖ್ಯಸ್ಥರಾದ ಶ್ರೀಕಾಂತ್ ಹೆಗಡೆ ಮತ್ತಿತರರು ಹಾಜರಿದ್ದರು.