ಶಿವಮೊಗ್ಗ: ಜಿಲ್ಲಾಧ್ಯಂತ ವ್ಯಾಪಕ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ನಾಳೆ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಅಂಗನವಾಡಿಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಿ ಆದೇಶಿಸಿದ್ದಾರೆ.
ಈ ಬಗ್ಗೆ ಪತ್ರಿಕೆ ಜೊತೆ ಮಾತನಾಡಿದ ಜಿಲ್ಲಾಧಿಕಾರಿ ಡಾಕ್ಟರ್ ಗುರುದತ್ ಹೆಗಡೆ ಅವರು ವ್ಯಾಪಕ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ಅಂಗನವಾಡಿಗಳಿಗೆ ಮಕ್ಕಳು ಬರಲು ಆಗದ ಪರಿಸ್ಥಿತಿಯಲ್ಲಿ ಇರುವುದರಿಂದ ನಾಳೆ ಶಿವಮೊಗ್ಗ ಜಿಲ್ಲಾಧ್ಯಂತ ಎಲ್ಲಾ ಶಾಲಾ-ಕಾಲೇಜುಗಳಿಗೆ ಹಾಗೂ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.