ಶಿವಮೊಗ್ಗ: ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಕೂಡ ಶಿವಮೊಗ್ಗ ಜಿಲ್ಲಾಧ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ಅಂಗನವಾಡಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ನಿನ್ನೆ ಹೊಸನಗರ ತಾಲೂಕು ಹಾಗೂ ತೀರ್ಥಹಳ್ಳಿ ತಾಲೂಕುಗಳಿಗೆ ಮಾತ್ರ ರಜೆ ಘೋಷಿಸಲಾಗಿತ್ತು ಆದರೆ ನಿರಂತರ ಮಳೆ ಬರುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾಧ್ಯಂತ ಇಂದು ಸತತವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಯ ಕಾರಣ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ ಪ್ರಾಥಮಿಕ, ಹಿರಿಯ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವಕಾಲೇಜು, ಪದವಿ ಹಾಗೂ ಸ್ನಾತಕೋತ್ತರ ಪದವಿ ಕಾಲೇಜುಗಳು, ಐಟಿಐ ಮತ್ತು ಡಿಪ್ಲೋಮೋ ಕಾಲೇಜುಗಳಿಗೆ ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಗುರುದತ್ ಹೆಗಡೆಯವರು ಆದೇಶ ಹೊರಡಿಸಿದ್ದಾರೆ