ಶಿವಮೊಗ್ಗ: ಆಯನೂರು ಗೇಟ್ ಬಳಿ ಸ್ಮಾರ್ಟ್ ಸಿಟಿ ವತಿಯಿಂದ ನಿರ್ಮಾಣವಾದ ಫುಟ್ಬಾತ್ ಮಳೆಗೆ ಕಿತ್ತು ಹೋಗಿದ್ದು ಸ್ಮಾರ್ಟ್ ಸಿಟಿ ಅಧಿಕಾರಿಗಳು ಇತ್ತ ಗಮನಹರಿಸಬೇಕು ಎನ್ನುವುದು ಸ್ಥಳೀಯರ ಮನವಿ.
ಸ್ಮಾರ್ಟ್ ಸಿಟಿ ವತಿಯಿಂದ ನಡೆದ ಕಾಮಗಾರಿಗಳ ಬಗ್ಗೆ ಸಾಕಷ್ಟು ಆಕ್ಷೇಪಣೆಗಳು ಕೇಳಿ ಬರುತ್ತಿದ್ದು ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.
ಈ ನಡುವೆ ಅಲ್ಲಲ್ಲಿ ಇಂತ ಪ್ರಕರಣಗಳು ಸಂಭವಿಸುತ್ತಿದ್ದು ಸಂಬಂಧಪಟ್ಟ ಸ್ಮಾರ್ಟ್ ಸಿಟಿ ಅಧಿಕಾರಿಗಳು ಕೂಡಲೇ ಗಮನಹರಿಸುತ್ತಿದ್ದಾರೆ.
ಆಯನೂರು ಗೇಟ್ ಬಳಿ ಸ್ಮಾರ್ಟ್ ಸಿಟಿ ವತಿಯಿಂದ ನಿರ್ಮಾಣವಾದ ಫುಟ್ಬಾತ್ ಕಾಮಗಾರಿ ಸರಿಪಡಿಸಬೇಕು ಎನ್ನುವುದು ಸ್ಥಳೀಯರ ಒತ್ತಾಯವಾಗಿದೆ.