Home ಶಿವಮೊಗ್ಗಭ್ರಷ್ಟ ಗ್ರಾಮ ಪಂಚಾಯತ್ ಅಧ್ಯಕ್ಷ‌ನ‌ ಮನೆ ಮೇಲೆ ಲೋಕಾಯುಕ್ತ ದಾಳಿ..!

ಭ್ರಷ್ಟ ಗ್ರಾಮ ಪಂಚಾಯತ್ ಅಧ್ಯಕ್ಷ‌ನ‌ ಮನೆ ಮೇಲೆ ಲೋಕಾಯುಕ್ತ ದಾಳಿ..!

by EDITOR NEWS WARRIORS
0 comments

ಭದ್ರಾವತಿ: ತಾಲೂಕಿನ ಅಂತರಗಂಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ನಾಗೇಶ್.ಬಿ ರವರು ತಮ್ಮ ಬಲ್ಲ ಮೂಲಗಳ ಆದಾಯಕ್ಕಿಂತ ಹೆಚ್ಚು ಅಕ್ರಮ ಆಸ್ತಿ ಗಳಿಸಿರುತ್ತಾರೆಂಬ ದೂರಿನ ಹಿನ್ನೆಲೆಯಲ್ಲಿ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಕಲಂ 13(1)(ಬಿ) ಸಹಿತ 13(2) ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ-1988 (ತಿದ್ದುಪಡಿ ಕಾಯ್ದೆ-2018) ರೀತ್ಯಾ ಪ್ರಕರಣ ದಾಖಲಾಗಿರುತ್ತದೆ.

ಅಕ್ರಮ ಆಸ್ತಿಗಳಿಸಿರುವ ಪ್ರಕರಣದ ತನಿಖೆ ಕೈಗೊಂಡು ಇವರಿಗೆ ಸಂಬಂಧಿಸಿದ 5 ಸ್ಥಳಗಳಲ್ಲಿ ದಿ:19/07/2024 ರಂದು ಶಿವಮೊಗ್ಗ ಲೋಕಾಯುಕ್ತ ಅಧಿಕಾರಿಗಳು ಸ್ಥಳ ಶೋಧನೆ ಮಾಡಿದ್ದು, ನಾಗೇಶ್ ಬಿ. ರವರಿಗೆ ಸಂಬಂದಿಸಿದಂತೆ 2 ಖಾಲಿ ನಿವೇಶನಗಳು, 2 ಮನೆಗಳು, 5.14 ಎಕರೆ ಕೃಷಿ ಜಮೀನು , ಅಂದಾಜು ರೂ 12,80,000/- ಚಿನ್ನಾಭರಣ ಮತ್ತು ಬೆಳ್ಳಿ ವಸ್ತುಗಳು, ಅಂದಾಜು 1,76,000/- ಮೌಲ್ಯದ ವಾಹನಗಳು, ಅಂದಾಜು 7,00,000/- ಮೌಲ್ಯದ ಗೃಹಪಯೋಗಿ ವಸ್ತುಗಳು ಮತ್ತು ರೂ 5,71,640/- ಗಳು ನಗದು ಹಣ ಪತ್ತೆಯಾಗಿದ್ದು ಅಂದಾಜು ರೂ 1,33,87,826/- ಮೌಲ್ಯದ ಅಕ್ರಮ ಆಸ್ತಿ ಸಂಪಾದನೆ ಮಾಡಿರುವುದು ತನಿಖೆಯಿಂದ ಕಂಡು ಬಂದಿರುತ್ತದೆ. ಹಾಗೂ ಅವರ ಮನೆಯಲ್ಲಿ ಪತ್ತೆಯಾದ ನಗದು ರೂ 5,00,000/- ಗಳನ್ನು ತನಿಖೆ ಸಂಬಂದ ಅಮಾನತ್ತುಪಡಿಸಿಕೊಳ್ಳಲಾಗಿರುತ್ತದೆ.

ಈ ಪ್ರಕರಣವನ್ನು ಶಿವಮೊಗ್ಗದ ಪೊಲೀಸ್ ಅಧೀಕ್ಷಕರಾದ ಮಂಜುನಾಥ್ ಚೌದರಿ ಎಂ.ಹೆಚ್. ರವರು ದಾಖಲಿಸಿದ್ದು, ವೀರಬಸಪ್ಪ ಎಲ್ ಕುಸಲಾಪುರ ಪೊಲೀಸ್ ನಿರೀಕ್ಷಕರು, ಕ.ಲೋ ಶಿವಮೊಗ್ಗ ಇವರು ತನಿಖೆಯನ್ನು ಮುಂದುವರೆಸಿರುತ್ತಾರೆ.

ಈ ದಾಳಿ ಸಮಯಕ್ಕೆ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು, ಹಾಗೂ ಚಿತ್ರದುರ್ಗ, ಉಡುಪಿ ಮತ್ತು ಮಂಗಳೂರು ವಿಭಾಗದ ಲೋಕಾಯುಕ್ತ ಅಧಿಕಾರಿ, ಸಿಬ್ಬಂದಿಗಳು ಭಾಗಿಯಾಗಿರುತ್ತಾರೆ

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...