
ಶಿವಮೊಗ್ಗ : ಜಿಲ್ಲೆಯ ಸಾಗರ ತಾಲೂಕಿನ ಕುಗ್ವೆ ಗ್ರಾಮದ ನದಿ ಬಳಿ ಆತ್ಮಹತ್ಯೆ ಗೆ ಯತ್ನಿಸುತ್ತಿದ್ದ ಮಹಿಳೆ ಹಾಗೂ ಇಬ್ಬರು ಮಕ್ಕಳನ್ನು ಪೋಲೀಸರು ರಕ್ಷಿಸಿದ್ದು ಮೂರು ಜೀವಗಳ ಉಳುವಿಗೆ ಕಾರಣರಾಗಿದ್ದಾರೆ.
ಇಂದು ಮಧ್ಯಾಹ್ನ ಸಾಗರ ತಾಲೂಕಿನ ಕುಗ್ವೆ ಗ್ರಾಮದ ನದಿ ಬಳಿ ಮಹಿಳೆಯೊಬ್ಬರು ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಗೆ ಪ್ರಯತ್ನಿಸುತ್ತಿದ್ದಾರೆ ಎಂದು ಸಾರ್ವಜನಿಕರು 112-ERSS ಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ.
ಬಂದಂತಹ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ 112 ರ ಡಿಎಆರ್ ವಿಭಾಗದ ಸಿಬ್ಬಂದಿ ಶಿವರುದ್ರಯ್ಯ ಹಾಗೂ ಎಪಿಸಿ ಶಿವಾನಂದ್ ಕೂಡಲೇ ಸ್ಥಳಕ್ಕೆ ತೆರಳಿ ಆತ್ಮಹತ್ಯೆ ಗೆ ಯತ್ನಿಸುತ್ತಿದ್ದವರನ್ನು ತಡೆದು ಮಹಿಳೆ ಇಬ್ಬರು ಮಕ್ಕಳು ಸೇರಿದಂತೆ ಮೂರು ಜನರನ್ನು ರಕ್ಷಿಸಿದ್ದಾರೆ.
ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ .
ಪೊಲೀಸರ ಈ ಸಮಯಪ್ರಜ್ಞೆಗೆ ಸ್ಥಳೀಯರು ಕುಟುಂಬದವರು ಸೇರಿದಂತೆ ಎಸ್ಪಿ ಮಿಥುನ್ ಕುಮಾರ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.