ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಸರ್ಕಾರಿ ಬಸ್ ನಿಲ್ದಾಣದ ಹತ್ತಿರ ಸುಮಾರು 60 ವರ್ಷ ವಯಸ್ಸಿನ ಯಶೋದಮ್ಮ ಎಂಬ ಮಹಿಳೆಯು ಸುಸ್ತಾಗಿ ಮಲಗಿದ್ದು, ಸಾರ್ವಜನಿಕರ ಸಹಾಯದಿಂದ ಆಂಬ್ಯುಲೆನ್ಸ್ ಮೂಲಕ ಆಕೆಯನ್ನು ನಗರದ ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದ್ದು, ಅ.21 ರಂದು ಚಿಕಿತ್ಸೆ ಫಲಕಾರಿಯಾಗಿದೆ ಮೃತಪಟ್ಟಿರುತ್ತಾರೆ.
ಶವವನ್ನು ಮೆಗ್ಗಾನ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಈಕೆಯ ವಿಳಾಸ ಹಾಗೂ ವಾರಸ್ಸುದಾರರ ಬಗ್ಗೆ ಯಾವುದೇ ಸುಳಿವು ಇರುವುದಿಲ್ಲ.ಈಕೆಯ ಚಹರೆ 5.1 ಅಡಿ ಎತ್ತರ, ಕೋಲುಮುಖ, ಸಾಧಾರಣ ಮೈಕಟ್ಟು ಹೊಂದಿದ್ದು, ಬಲಭುಜದ ಮೇಲೆ ರಾಗಿಕಾಳು ಗಾತ್ರದ ಕಪ್ಪು ಮಚ್ಚೆ ಇರುತ್ತದೆ. ತಲೆಯಲ್ಲಿ 8 ಇಂಚು ಉದ್ದದ ಕಪ್ಪು ಬಿಳಿ ಕೂದಲು ಇರುತ್ತದೆ.ಈ ಮಹಿಳೆಯ ವಾರಸ್ಸುದಾರರು ಪತ್ತೆಯಾದಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆ ದೂ.ಸಂ.: 08182-261414 /9916882544ಗಳಿಗೆ ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.——-