ಸಾಗರ ತಾಲೂಕಿನ ಕಾರ್ಗಲ್ ಸಮೀಪದ ಕಂಚಿ ಕೈ ರಸ್ತೆಯಲ್ಲಿ ಎರಡು ಜನ ಬೈಕ್ ಸವಾರರಿಗೆ ದೆವ್ವ ಎದುರಾಗಿ ಒಬ್ಬರಿಗೆ ತುಂಬಾ ಸೀರಿಯಸ್ ಆಗಿ ಮಣಿಪಾಲ್ ಗೆ ಅಡ್ಮಿಟ್ ಆಗಿದ್ದು ಇನ್ನೊಬ್ಬರು ಶಿವಮೊಗ್ಗದ ಮೇಗನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಈ ಘಟನೆ ದಿನಾಂಕಃ 27-10-2024 ರಂದು ರಾತ್ರಿ ನಡೆದಿದೆ ಎಂದು ಒಂದು ಸುದ್ದಿ ಎಲ್ಲೆಡೆ ವೈರಲ್ ಆಗುತ್ತಿತ್ತು.
ಪೊಲೀಸ್ ಇಲಾಖೆಯ ಸ್ಪಷ್ಟನೆ :
ಈ ತರಹದ ಯಾವುದೇ ಘಟನೆಗಳು ನಡೆದಿಲ್ಲ ಇದೊಂದು ಸುಳ್ಳು ಸುದ್ದಿ ಇಂತಹ ಸುಳ್ಳು ಸುದ್ದಿಗಳನ್ನು ಹೊರಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವುದು, ಫಾರ್ವರ್ಡ್ ಮಾಡುವುದು, ಶೇರ್ ಮಾಡುವುದು ಕಾನೂನು ರೀತ್ಯಾ ಅಪರಾಧವಾಗಿದ್ದು, ಈ ರೀತಿ ಮಾಡುವುದು ಕಂಡುಬಂದಲ್ಲಿ, ಅಂತಹವರ ವಿರುದ್ಧ ಕಾನೂನು ರೀತ್ಯಾ ಕಠಿಣ ಕ್ರಮ ಕೈಗೊಳ್ಳಲಾಗುವುದು. ಎಂದು ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ತಿಳಿಸಿದ್ದಾರೆ.