ತೀವ್ರ ಕಾತುರದಿಂದ ಕಾಯುತ್ತಿದ್ದ ನಟ ದರ್ಶನ್ ಅಭಿಮಾನಿಗಳಿಗೆ ಹಾಗೂ ಕುಟುಂಬದವರಿಗೆ ಶುಭ ಸುದ್ದಿ ಒಂದು ಸಿಕ್ಕಿದ್ದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಜಾಮೀನು ಮಂಜುರಾಗಿದೆ.
ಹೈಕೋರ್ಟ್ ನಲ್ಲಿ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಏಕ ಸದಸ್ಯ ಪೀಠದಲ್ಲಿ ಮಂಗಳವಾರ ನಟ ದರ್ಶನ್ ಸಲ್ಲಿಸಿದ ಮಧ್ಯಂತರ ಜಾಮೀನು ಅರ್ಜಿಯ ವಿಚಾರಣೆ ನಡೆಸಲಾಗಿತ್ತು ತೀರ್ಪನ್ನು ಇಂದಿಗೆ ಕಾಯ್ದಿರಿಸಲಾಗಿತ್ತು.
ನಟ ದರ್ಶನ್ ಪರ ಖ್ಯಾತ ವಕೀಲರಾದ ಸಿ.ವಿ ನಾಗೇಶ್ ಪ್ರಬಲವಾದ ವಾದ ಮಂಡಿಸಿದ್ದರು. ದರ್ಶನ್ ಗೆ ಇರುವ ಬೆನ್ನು ನೋವಿನ ಸಮಸ್ಯೆಯನ್ನು ಮುಂದಿಟ್ಟುಕೊಂಡು ವಕೀಲರು ವಾದ ಮಂಡಿಸಿದ್ದರು.
ಡಿಕೆ ಶಿವಕುಮಾರ್ ಪ್ರಕರಣವನ್ನು ಎಳೆದು ತಂದ ಸಿವಿ ನಾಗೇಶ್..?!
ಇಂದಿನ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪ್ರಕರಣದಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಾಗ ಜಾಮೀನು ಮಂಜೂರು ಮಾಡಿದ್ದನ್ನು ಉಲ್ಲಂಘಿಸಿ ವಾದ ಮಂಡಿಸಿದರು. ಡಿಕೆ ಶಿವಕುಮಾರ್ ಅವರಿಗಿದ್ದ ಆರೋಗ್ಯ ಸಮಸ್ಯೆಗಿಂತ ಇದು ಬಹಳ ಗಂಭೀರವಾಗಿದ್ದು. ಬೆನ್ನು ಹುರಿಯ ಸಮಸ್ಯೆಯಿಂದ ಕಾಲು ಮರಗಟ್ಟುವಿಕೆ ಆಗುತ್ತಿದೆ. ಹೀಗೆ ಆದರೆ ಮುಂದೊಂದು ದಿನ ಬಹಳ ದೊಡ್ಡ ಸಮಸ್ಯೆಗೆ ಕಾರಣ ಆಗುತ್ತದೆ. ಡಿಸ್ಕ್ ನಲ್ಲಿ ಆದ ಸಮಸ್ಯೆಯಿಂದ ರಕ್ತ ಪರಿಚಲನೆ ಆಗುತ್ತಿಲ್ಲ. ಇದು ನಾರ್ಮಲ್ ಟ್ರೀಟ್ ಮೆಂಟ್ ಆಗಲ್ಲ, ಹೀಗಾಗಿ ಅವರಿಗೆ ಶಸ್ತ್ರಚಿಕಿತ್ಸೆಯ ಅಗತ್ಯವಿದೆ. ಆದ್ದರಿಂದ ಇದನ್ನು ಪರಿಗಣಿಸಿ ದರ್ಶನ್ ಗೆ ಜಾಮೀನು ನೀಡಬೇಕು ಎಂದು ಡಿಕೆ ಶಿವಕುಮಾರ್ ಪ್ರಕರಣವನ್ನು ಮುಂದಿಟ್ಟುಕೊಂಡು ವಾದ ಮಂಡಿಸಿದರು.
ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಾಲಯ ದರ್ಶನ್ ಒಬ್ಬ ವಿಚಾರಣಾಧೀನ ಕೈದಿ ಆತನಿಗೂ ಉತ್ತಮ ಆರೋಗ್ಯದ ಹಕ್ಕಿದೆ . ಚಿಕಿತ್ಸೆ ಪಡೆಯುವುದು ವ್ಯಕ್ತಿಯ ಮೂಲಭೂತ ಹಕ್ಕು ಎಂದು. ನೀವು ಎಲ್ಲಿ ಚಿಕಿತ್ಸೆ ಪಡೆಯಲು ಬಯಸುತ್ತೀರಾ ಎಂದು ನ್ಯಾಯಾಧೀಶರು ದರ್ಶನ್ ಪರ ವಕೀಲರಾದ ಸಿವಿ ನಾಗೇಶ್ ಗೆ ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಉತ್ತರಿಸಿದ ಸಿವಿ ನಾಗೇಶ್ ‘ ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತೇವೆ ಎಂದು ಹೇಳಿದ್ದಾರೆ.
ಪ್ರಸ್ತುತ ಬಳ್ಳಾರಿ ಜೈಲ್ ನಲ್ಲಿ ಇರುವ ದರ್ಶನ್ ಗೆ ಜಾಮೀನು ಮಂಜೂರಾಗಿದ್ದು ಈಗ ಮೈಸೂರಿನ ಅಪೋಲೋ ಆಸ್ಪತ್ರೆಗೆ ಶಿಫ್ಟ್ ಆಗುವ ಸಾಧ್ಯತೆ ಇದೆ.