ಬಾಂಗ್ಲಾದೇಶದ ಹಿಂದೂಗಳ ಮೇಲಿನ ದಬ್ಬಾಳಿಕೆ ದೌರ್ಜನ್ಯವನ್ನು ಖಂಡಿಸಿ ಹಾಗೂ ಇಸ್ಕಾನ್ ಮಂದಿರದ ಮುಖ್ಯಸ್ಥ ಚಿನ್ಮಯ್ ಕೃಷ್ಣದಾಸ್ ಪ್ರಭು ರವರ ಬಂಧನ ವಿರೋಧಿಸಿ ಹಿಂದೂ ಜೈಭೀಮ್ ಸೇನೆ ಸದಸ್ಯರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.
ಹಿಂದೂ ಜೈ ಭೀಮ್ ಸೇನೆಯ ಸಂಸ್ಥಾಪಕ ಅಧ್ಯಕ್ಷ ಚಂದ್ರಶೇಖರ್ ಜೀ ( ಕೋಟೆ ಶೇಕಿ) ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಹಿಂದೂ ಜೈ ಭೀಮ್ ಸೇನೆ ಸದಸ್ಯರು ಬಾಂಗ್ಲಾದೇಶದಲ್ಲಿ ಹಿಂದೂ ಸಮುದಾಯದವರಿಗೆ ರಕ್ಷಣೆ ಒದಗಿಸಬೇಕು ಹಾಗೂ ಇಸ್ಕಾನ್ ದೇವಸ್ಥಾನದ ಮುಖ್ಯಸ್ಥ ಚಿನ್ಮಯ ಕೃಷ್ಣದಾಸ್ ಪ್ರಭು ಅವರನ್ನು ಬೇಷರತ್ ಅಗಿ ಬಿಡುಗಡೆ ಮಾಡಿಸಲು ಭಾರತ ಸರ್ಕಾರ ಮಧ್ಯಪ್ರವೇಶಿಸಿ ಕ್ರಮಕೈಗೊಳ್ಳುವಂತೆ ರಾಷ್ಟ್ರಪತಿ ದ್ರೌಪದಿ ಮರ್ಮು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರಿಗೆ ಮನವಿ ಮಾಡಿ ಬರೆದ ಮನವಿಪತ್ರವನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಹಿಂದೂ ಜೈಭೀಮ್ ಸೇನೆಯ ರಾಜ್ಯಾಧ್ಯಕ್ಷರಾದ ಮಂಜುನಾಥ್, ಹಿಂದೂ ಮುಖಂಡರಾದ ಕೇಶವ ಜೀ ಹಾಗೂ ರಾಜ್ಯ ಪದಾಧಿಕಾರಿಗಳು ಭಾಗವಹಿಸಿದ್ದರು.