ಫೆಂಗಲ್ ಚಂಡಮಾರುತವು ತಮಿಳುನಾಡು ಮತ್ತು ಪುದುಚೇರಿಯ ಕರಾವಳಿ ಭಾಗದಲ್ಲಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮಳೆ ಕಳೆದ ಎರಡು ದಿನದಿಂದ ರಾಜ್ಯದಲ್ಲಿ ನಿರಂತರವಾಗಿ ಸುರಿಯುತ್ತಿದೆ. ಇದರ ಎಫೆಕ್ಟ್ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 14 ಜಿಲ್ಲೆಗಳಿಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಈ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಈ ನಡುವೆ ಶಾಲಾ ಕಾಲೇಜುಗಳಿಗೆ ಅಂಗನವಾಡಿಗಳಿಗೆ ಕೂಡ ನಾಳೆ ನಾಡಿದ್ದು ರಜೆ ಘೋಷಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯಾದ್ಯಂತ ಯೆಲ್ಲೋ ಅಲರ್ಟ್ ಹಿನ್ನಲೆಯಲ್ಲಿ ಅಧಿಕ ಮಳೆ ಆಗುವ ಸಂಭವ ಇರುವ ಕಾರಣ ಪದವಿ, ಪದವಿ ಪೂರ್ವ ಕಾಲೇಜುಗಳು, 1ರಿಂದ10 ನೇ ತರಗತಿ ಮತ್ತು ಅಂಗನವಾಡಿ ಹಾಗೂ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಜಿಲ್ಲಾಧಿಕಾರಿಗಳ ಅನುಪಸ್ಥಿತಿಯಲ್ಲಿ ಪ್ರಭಾರಿ ಆಗಿರುವ ಜಿಲ್ಲಾ ಪಂಚಾಯತ್ ಸಿಇಒ ಹೇಂಮತ್ ಕುಮಾರ್ ಅಧಿಕ ಮಳೆ ಹಿನ್ನಲೆಯಲ್ಲಿ ರಜೆ ಘೋಷಿಸಿದ್ದಾರೆ. ಈ ಹಿನ್ನಲೆಯಲ್ಲಿ ಜಿಲ್ಲಾಡಳಿತ ಮಕ್ಕಳಿಗೆ ತೊಂದರೆಯಾಗದಂತೆ ಡಿ.3 ರಂದು ಇಂದು ಮಾತ್ರ ರಜೆ ಘೋಷಿಸಿದೆ. ಇಂದು ನೀಡಿದ ರಜೆಯನ್ನ ಮುಂದೆ ಬರುವ ಸಾರ್ವತ್ರಿಕ ರಜೆಗಳಲ್ಲಿ ಸರಿ ದೂಗಿಸಿಕೊಳ್ಳಲು ಸೂಚಿಸಲಾಗಿದೆ. ವಿಪತ್ತು ನಿರ್ವಹಣ ತುರ್ತು ಅಧಿಕೃತ ವಿಜ್ಞಾಪನೆಯಲ್ಲಿ ಡಿಸಿಯವರು ಸೂಚಿಸಿದ್ದಾರೆ.
ರಾಜ್ಯದ 14 ಜಿಲ್ಲೆಗಳಲ್ಲಿ ಡಿಸೆಂಬರ್ 2, 4 ಹಾಗೂ 4 ರಂದು ಭಾರೀ ಮಳೆಯಾಗಲಿರುವ ಕಾರಣ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈಗಾಗಲೇ ಚಿಕ್ಕಮಗಳೂರು, ಮೈಸೂರು ಹಾಗೂ ಚಿಕ್ಕಬಳ್ಳಾಪುರದಲ್ಲಿ ಶಾಲೆ ಹಾಗೂ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ.