Wednesday, April 30, 2025
Google search engine
Homeರಾಜ್ಯShivamogga breaking : ಕೆರೆ ಒತ್ತುವರಿದಾರರಿಗೆ ಖಡಕ್ ವಾರ್ನಿಂಗ್ ನೀಡಿದ ಉಪಲೋಕಾಯುಕ್ತರು..!

Shivamogga breaking : ಕೆರೆ ಒತ್ತುವರಿದಾರರಿಗೆ ಖಡಕ್ ವಾರ್ನಿಂಗ್ ನೀಡಿದ ಉಪಲೋಕಾಯುಕ್ತರು..!

ಶಿವಮೊಗ್ಗ : ಕಳೆದ ಮೂರು ದಿನಗಳಿಂದ ಶಿವಮೊಗ್ಗ ಜಿಲ್ಲೆಯ ಪ್ರವಾಸದಲ್ಲಿರುವ ಉಪ ಲೋಕಾಯುಕ್ತರಾದ ನಿವೃತ್ತ ನ್ಯಾಯಮೂರ್ತಿ ಪಣಿಂದ್ರ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಧಿಕಾರಿಗಳಿಗೆ ಹಲವು ಸಲಹೆ ಸೂಚನೆಗಳನ್ನು ನೀಡಿ ಯಾವ ರೀತಿಯ ದೂರುಗಳನ್ನು ತೆಗೆದುಕೊಳ್ಳಬೇಕು ಅವುಗಳನ್ನು ಹೇಗೆ ಬಗೆಹರಿಸಬೇಕು ಆ ದೂರಗಳ ವಿರುದ್ಧ ಯಾವ ರೀತಿ ಕ್ರಮ ತೆಗೆದುಕೊಳ್ಳಬೇಕು ಸಾರ್ವಜನಿಕರು ದೂರುಗಳನ್ನು ನೀಡುವಾಗ ಏನೇನು ಸಲ್ಲಿಸಬೇಕು ಎನ್ನುವುದರ ಸಮಗ್ರ ಮಾಹಿತಿಯನ್ನು ಅಧಿಕಾರಿಗಳಿಗೆ ನೀಡಿದರು.

ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಉಪಲೋಕಾಯುಕ್ತರು ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸುತ್ತಾ ಶಿವಮೊಗ್ಗ ಜಿಲ್ಲೆಯಲ್ಲಿ ಅತಿ ಹೆಚ್ಚು ಕೆರೆಗಳಿದ್ದು ಅವುಗಳ ಉಳಿವಿಗಾಗಿ ಕಠಿಣ ಕ್ರಮ ತೆಗೆದುಕೊಳ್ಳಬೇಕು ಕೆಲವು ಕಡೆ ಕೆರೆ ಒತ್ತುವರಿ ಮಾಡಿ ಅಕ್ರಮ ಕಟ್ಟಡಗಳನ್ನು ಕಟ್ಟಿಕೊಂಡಿರುವುದು ಗಮನಕ್ಕೆ ಬಂದಿದೆ ಅಂತಹ ಕಟ್ಟಡಗಳ ವಿರುದ್ಧ ಕೆರೆ ಒತ್ತುವರಿದಾರರ ವಿರುದ್ಧ ಅಥವಾ ಹೊಸದಾಗಿ ಕೆರೆ ಒತ್ತುವರಿ ಮಾಡುತ್ತಿದ್ದರೆ ಅಂತಹ ಜಾಗಗಳ ಬಗ್ಗೆ ಸಮಗ್ರ ಮಾಹಿತಿಯನ್ನು ದೂರಿನ ಮೂಲಕ ನೀಡಿದರೆ ಯಾರ ಹೆಸರನ್ನು ಪ್ರಸ್ತಾಪಿಸದೆ ಸುಮೊಟೊ ಪ್ರಕರಣಗಳನ್ನು ದಾಖಲಿಸಿಕೊಂಡು ಸಮಗ್ರವಾಗಿ ತನಿಖೆ ನಡೆಸಿ ಆ ಒತ್ತುವರಿ ಜಾಗವನ್ನು ತೆರುಗೊಳಿಸಲಾಗುವುದು ಎನ್ನುವ ಖಡಕ್ ಸಂದೇಶವನ್ನು ಒತ್ತುವರಿದಾರರಿಗೆ ನೀಡಿದರು.

ಲೋಕಾಯುಕ್ತದಲ್ಲಿ ದಾಖಲಾದ ದೂರುಗಳಿಗೆ ನಂತರ ಶಿಕ್ಷೆಯ ಪ್ರಮಾಣ ಕಡಿಮೆಯಾಗುತ್ತಿದೆ ಎನ್ನುವ ಪ್ರಶ್ನೆಗೆ ಉತ್ತರಿಸುತ್ತಾ ಸಾಕಷ್ಟು ಪ್ರಕರಣಗಳಲ್ಲಿ ಈ ರೀತಿ ಆಗುತ್ತಿದೆ ಕೆಲವೇ ಪ್ರಕರಣಗಳಲ್ಲಿ ದೂರುಗಳು ದಾಖಲಾದ ನಂತರ ಆ ಪ್ರಕರಣಗಳಲ್ಲಿ ಸಂಬಂಧಪಟ್ಟವರ ವಿರುದ್ಧ ಶಿಕ್ಷೆಯಾಗುತ್ತಿದೆ ವಿನಃ ಸಾಕಷ್ಟು ಪ್ರಕರಣಗಳಲ್ಲಿ ಖುಲಾಸೆ ಆಗುತ್ತಿದ್ದಾರೆ ಇದರಲ್ಲಿ ಅಧಿಕಾರಿಗಳ ಲೋಪಗಳು ಹಾಗೂ ಯಾರು ದೂರನ್ನು ನೀಡುತ್ತಿದ್ದಾರೋ ಅವರೇ ಕೊನೆಗೆ ಹಿಂಜರಿಯುವುದು ಇಂತಹ ಲೋಪದೋಷಗಳಿಂದ ಈ ರೀತಿಯಾಗಿ ಶಿಕ್ಷೆಯ ಪ್ರಮಾಣ ಕಡಿಮೆಯಾಗುತ್ತಿದೆ ಮುಂದಿನ ದಿನಗಳಲ್ಲಿ ಈ ರೀತಿಯ ಲೋಪಗಳು ಆಗದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು ಎಂದು ಹೇಳಿದರು.

ಮತ್ತೆ ಬರುವುದಾಗಿ ಎಚ್ಚರಿಕೆ ನೀಡಿದ ಉಪ ಲೋಕಾಯುಕ್ತರು..!

ಜನವರಿ ಫೆಬ್ರವರಿ ತಿಂಗಳಲ್ಲಿ ಮತ್ತೆ ಶಿವಮೊಗ್ಗಕ್ಕೆ ಬಂದು ಒಂದಷ್ಟು ಕಚೇರಿಗಳಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ಇನ್ನಷ್ಟು ಸಮಸ್ಯೆಗಳ ಬಗ್ಗೆ ಪರಿಶೀಲಿಸುವುದಾಗಿ ಭರವಸೆ ನೀಡಿದರು.

ಈಗಾಗಲೇ 18 ಜಿಲ್ಲೆಗಳಿಗೆ ಪ್ರವಾಸ ಮಾಡಿದ್ದು ಸಾಕಷ್ಟು ಜಿಲ್ಲೆಗಳಲ್ಲಿ ಅನಿರೀಕ್ಷಿತವಾಗಿ ಕೆಲವು ಕಚೇರಿಗಳಿಗೆ ಭೇಟಿ ನೀಡಿದ್ದು ಹಲವು ಕ್ರಮಗಳನ್ನು ಕೈಗೊಂಡಿದ್ದು ಆದರೆ ಶಿವಮೊಗ್ಗ ಪ್ರವಾಸದಲ್ಲಿ ಯಾವುದೇ ಇಲಾಖೆಗಳಿಗೆ ಭೇಟಿ ನೀಡಲು ಆಗಲಿಲ್ಲ ಕೆಲವೊಂದು ಕಾರ್ಯಕ್ರಮಗಳು ಇದ್ದರಿಂದ ಅನಿವಾರ್ಯವಾಗಿ ಭೇಟಿ ನೀಡಲು ಆಗಲಿಲ್ಲ ಆದರೆ ಮುಂದಿನ ದಿನಗಳಲ್ಲಿ ಮತ್ತೆ ಭೇಟಿ ನೀಡುವುದಾಗಿ ಭರವಸೆ ನೀಡಿದರು.

ಮುಂದುವರೆದು ಮಾತನಾಡಿದ ಉಪ ಲೋಕಾಯುಕ್ತರು ಲೋಕಾಯುಕ್ತದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳನ್ನು ಸಿಬಿಐ ಈಡಿ ನಂತಹ ಸಂಸ್ಥೆಗಳಂತೆಯೇ ಲೋಕಾಯುಕ್ತ ಸಂಸ್ಥೆಗೂ ಕೂಡ ಬೇರೆ ರೀತಿಯ ಸಿಬ್ಬಂದಿಗಳನ್ನು ನಿಯೋಜಿಸಬೇಕು ಉದಾಹರಣೆಗೆ ಮಿಲ್ಟ್ರಿಯಲ್ಲಿ ಕಾರ್ಯನಿರ್ವಹಿಸಿ ನಿವೃತ್ತಿ ಆದವರನ್ನು ಅಥವಾ ಮಿಲ್ಟ್ರಿಯಲ್ಲಿ ಕಾರ್ಯನಿರ್ವಹಿಸಿ ನಿವೃತ್ತಿ ತೆಗೆದುಕೊಂಡಿರುವವರನ್ನು ಲೋಕಾಯುಕ್ತಕ್ಕೆ ನೇಮಿಸಿದರೆ ಒಳಿತು ಎನ್ನುವ ಮಾತನ್ನು ಹೇಳಿದರು.

ಈ ಸಂದರ್ಭದಲ್ಲಿ ಲೋಕಾಯುಕ್ತ ಶಿವಮೊಗ್ಗ ಅಧೀಕ್ಷಕರಾದ ಮಂಜುನಾಥ್ ಚೌಧರಿ ಒಳಗೊಂಡಂತೆ ಶಿವಮೊಗ್ಗ ಲೋಕಾಯುಕ್ತದ ಸಿಬ್ಬಂದಿಗಳು ಉಪಸ್ಥಿತರಿದ್ದರು.

ರಘುರಾಜ್ ಹೆಚ್.ಕೆ..9449553305..

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...