
ಬೆಂಗಳೂರು: ಪೊಲೀಸರಿಗೆ ಕೈಗೆ ಸಿಗದೇ ತಲೆಮರೆಸಿಕೊಂಡು ಓಡಾಡುತ್ತಿದ್ದ ರೌಡಿಶೀಟರ್ ಕಾಲಿಗೆ ಇಂದು ಮುಂಜಾನೆ ಗುಂಡೇಟು ಬಿದ್ದಿದೆ ನಗರದ ಹೊರವಲಯದಲ್ಲಿ ಇಂದು ಮುಂಜಾನೆ ತಲೆಮರೆಸಿಕೊಂಡಿದ್ದ ರೌಡಿಶೀಟರ್ ಗ್ಯಾಂಗ್ ಹಿಂದೆ ಬಿದ್ದಿದ್ದ ಪೊಲೀಸರು ಬಂಧಿಸಲು ಹೋದ ಸಂದರ್ಭದಲ್ಲಿ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ತಪ್ಪಿಸಿಕೊಂಡು ಹೋಗಲು ಪ್ರಯತ್ನಿಸಿದಾಗ ಪೊಲೀಸರು ಫೈರಿಂಗ್ ಮಾಡಿದ್ದಾರೆ.
ರೌಡಿಶೀಟರ್ ಬೆಸ್ತಮಾನಹಳ್ಳಿ ಲೋಕೇಶ್ ಅಲಿಯಾಸ್ ಲೋಕಿ ಕಾಲಿಗೆ ಗುಂಡು ಹಾರಿಸಿದ ಜಿಗಣಿ ಇನ್ಸ್‌ಪೆಕ್ಟರ್ ಮಂಜುನಾಥ್ ಲೋಕಿ ಮೇಲೆ ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಮಾಯಸಂದ್ರ ಬಳಿ ಕಾಲಿಗೆ ಫೈರಿಂಗ್ ಮಾಡಿದ್ದಾರೆ. ಆರೋಪಿ ಲೋಕಿಯನ್ನು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಪೊಲೀಸರು ಲೋಕಿಯನ್ನು ಹಿಡಿಯಲು ಪ್ರಯತ್ನಿಸಿದಾಗ ಅವರ ಮೇಲೆಯೇ ಹಲ್ಲೆ ಮಾಡಲು ಯತ್ನಿಸಿ ಸಿಬ್ಬಂದಿ ಚನ್ನಬಸವ ನಾಯಕ್ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಜಿಗಣಿ ಪೊಲೀಸ್ ಇನ್ಸ್‌ಪೆಕ್ಟರ್ ಮಂಜುನಾಥ್ ಫೈರಿಂಗ್ ಮಾಡಿದ್ದಾರೆ.