
ಭಾರತದ ಮಾಜಿ ಪ್ರಧಾನ ಮಂತ್ರಿಗಳು ವಿಶ್ವ ಕಂಡ ಶ್ರೇಷ್ಠ ಅರ್ಥಶಾಸ್ತ್ರಜ್ಞರು ಆದ ಡಾ. ಮನಮೋಹನ್ ಸಿಂಗ್ ಇವರ ನಿಧನಕ್ಕೆ ರಾಜ್ಯ ಸರ್ಕಾರವು ತೀವು ಸಂತಾಪ ವ್ಯಕ್ತಪಡಿಸಿದ್ದು, ಗೌರವಾರ್ಥವಾಗಿ ಇಂದು ರಾಜ್ಯಾದ್ಯಂತ ಸಾರ್ವಜನಿಕ ಸರ್ಕಾರಿ ಕಚೇರಿಗಳಿಗೆ ಮತ್ತು ಎಲ್ಲಾ ಶಾಲಾ ಕಾಲೇಜುಗಳಿಗೆ ಹಾಗೂ ಸರ್ಕಾರಿ ಸ್ವಾಮ್ಯದ ಅಂಗ ಸಂಸ್ಥೆಗಳು ಒಳಗೊಂಡಂತೆ ಸಾರ್ವಜನಿಕ ರಜೆ ಘೋಷಿಸಿದೆ.
ಸರ್ಕಾರಿ ಗೌರವಗಳು :
ದಿನಾಂಕ:26.12.2024 ರಿಂದ ದಿನಾಂಕ:01.01.2025 ರವರೆಗೆ (ಎರಡು ದಿನಗಳು ಸೇರಿದಂತೆ) ಏಳು ದಿನಗಳು ರಾಜ್ಯಾದ್ಯಂತ ಶೋಕವನ್ನು ಆಚರಿಸಲಾಗುವುದು. ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ. ನಿಯಮಿತವಾಗಿ ಹಾರಿಸಲ್ಪಡುವ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುವುದು.ಸದರಿ ಆದೇಶವು ನೆಗೋಷಿಯಬಲ್ ಇನ್ಸುಮೆಂಟ್ ಆಕ್ಟ್ 1881 ರ ಪ್ರಕಾರವು ಕೂಡಾ ಸಾರ್ವಜನಿಕ ರಜೆಯೆಂದು ಘೋಷಿಸಲಾಗಿದೆ.
ಹೊಸ ವರ್ಷ ಸಂಭ್ರಮಾಚರಣೆಗೆ ಗೆ ಬೀಳುತ್ತಾ ಬ್ರೇಕ್..?!
ಇನ್ನೇನು ಕೆಲವೇ ದಿನಗಳಲ್ಲಿ ಹೊಸ ವರ್ಷ ಸಂಭ್ರಮಾಚರಣೆಗೆ ಸಕಲ ಸಿದ್ಧತೆ ನಡೆಯುತ್ತಿದ್ದು ಮನಮೋಹನ್ ಸಿಂಗ್ ನಿಧನ ಹಿನ್ನೆಲೆಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ಕೊಂಚ ಬ್ರೇಕ್ ಬೀಳುವ ಸಾಧ್ಯತೆ ಇದೆ. ಏಳು ದಿನಗಳು ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳನ್ನು ಮನೋರಂಜನಾ ಕಾರ್ಯಕ್ರಮಗಳನ್ನು ಬಹಿರಂಗವಾಗಿ ಆಚರಿಸುವಂತಿಲ್ಲ ಎನ್ನುವ ಆದೇಶವಿರುವುದರಿಂದ ಹೊಸ ವರ್ಷಕ್ಕೆ ಕೊಂಚ ಬ್ರೇಕ್ ಬೀಳುವ ಸಾಧ್ಯತೆ ಇದೆ.