Home ಶಿವಮೊಗ್ಗShivamogga: ಜಿಲ್ಲೆಯಲ್ಲಿ ಇದೆ ಮೊದಲ ಬಾರಿಗೆ ಡಿಸೆಂಬರ್ 29 ಪತ್ರಿಕಾ ವಿತರಕರ ಉತ್ಸವ-2024..!

Shivamogga: ಜಿಲ್ಲೆಯಲ್ಲಿ ಇದೆ ಮೊದಲ ಬಾರಿಗೆ ಡಿಸೆಂಬರ್ 29 ಪತ್ರಿಕಾ ವಿತರಕರ ಉತ್ಸವ-2024..!

by EDITOR NEWS WARRIORS
0 comments

ನಗರದಲ್ಲಿ ಇದೇ ಮೊದಲ ಬಾರಿಗೆ ಪತ್ರಿಕಾ ವಿತರಕರ ಉತ್ಸವ-೨೦೨೪ ಕಾರ್ಯಕ್ರಮವು ಡಿ.೨೯ಕ್ಕೆ ನೆಹರು ರಸ್ತೆಯ ಗಾಂಧಿ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕೂಟದ ಜಿಲ್ಲಾಧ್ಯಕ್ಷರಾದ ಎನ್.ಮಾಲತೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಪತ್ರಿಕೆ ವಿತರಕರ ಸಂಘಟಿತರಾಗಿ ಮಲೆನಾಡಿನ ಹೆಬ್ಬಾಗಿಲಿನಲ್ಲಿ ಒಂದು ಹೊಸ ರೀತಿಯಲ್ಲಿ ಕ್ರೀಡಾಕೂಟ ಮತ್ತು ಹಲವು ಹಿರಿಯ ಪತ್ರಿಕಾ ವಿತರಕರಿಗೆ ಸನ್ಮಾನಿಸಿ ಗೌರವಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮವು ಅಂದು ಬೆಳಿಗ್ಗೆ ೧೦ ಗಂಟೆಗೆ ಆರಂಭವಾಗಿ ಸಂಜೆ ೬ ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕರಾದ ಚನ್ನಬಸಪ್ಪನವರು ಉದ್ಘಾಟಿಸಲಿದ್ದಾರೆ.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಧನಂಜಯ ಸರ್ಜಿ, ಡಿ.ಎಸ್.ಅರುಣ್, ವಿಧಾನ ಪರಿಷತ್ ಮಾಜಿ ಸದಸ್ಯರಾದ ರುದ್ರೆಗೌಡರು, ವಾರ್ತಾಧಿಕಾರಿ ಮಾರುತಿ ಹಾಗೂ ಹಿರಿಯ ಪತ್ರಕರ್ತರು, ಸಂಪಾದಕರು ಉಪಸ್ಥಿತರಿರುವರು.ಈ ಎಲ್ಲಾ ಕಾರ್ಯಕ್ರಮದಲ್ಲಿ ಪತ್ರಿಕಾ ವಿತರಕರು ಕುಟುಂಬ ಸಮೇತರಾಗಿ ಭಾಗವಹಿಸಿ ಕ್ರೀಡೆಯಲ್ಲಿ ಭಾಗವಹಿಸಿ ಗೆಲುವು ಸಾಧಿಸಿ ಉತ್ತಮ ಆಕರ್ಷಕ ಬಹುಮಾನ ಗೆಲ್ಲಬಹುದು, ಹಾಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಯೊಬ್ಬ ಪತ್ರಿಕಾ ವಿತರಕರು ಭಾಗವಹಿಸಿ ಕಾರ್ಯಕ್ರಮದ ಯಶಸ್ವಿಗೆ ಪಾತ್ರರಾಗಬೇಕಾಗಿ ಮನವಿ ಮಾಡಿದ್ದಾರೆ.

ಕಾರ್ಯಕ್ರಮದಲ್ಲಿ ಅರ್ಥಪಂಡಿತ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್, ಮಾಜಿ ಮುಖ್ಯಮಂತ್ರಿ ಎಸ್.ಎಮ್.ಕೃಷ್ಣ, ಹಾಗೂ ವೀರಮರಣ ಹೊಂದಿದ ವೀರ ಸೈನಿಕರಿಗೆ ೫ ನಿಮಿಷ ಮೌನ ಆಚರಿಸಿ ಶ್ರದ್ಧಾಂಜಲಿ ಅರ್ಪಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...