Wednesday, April 30, 2025
Google search engine
Homeರಾಜ್ಯಅಗಲಿದ ಹಿರಿಯ ಕಾಂಗ್ರೆಸ್‌ ನಾಯಕ ಆಸ್ಕರ್‌ ಗೆ ಕೆಪಿಸಿಸಿ ಆತ್ಮೀಯ ವಿದಾಯ – ಡಿಕೆಶಿ ಮುಂದಾಳತ್ವಕ್ಕೆ...

ಅಗಲಿದ ಹಿರಿಯ ಕಾಂಗ್ರೆಸ್‌ ನಾಯಕ ಆಸ್ಕರ್‌ ಗೆ ಕೆಪಿಸಿಸಿ ಆತ್ಮೀಯ ವಿದಾಯ – ಡಿಕೆಶಿ ಮುಂದಾಳತ್ವಕ್ಕೆ ಶ್ಲಾಘನೆ ಕುಟುಂಬಸ್ಥರಿಂದ ಕೃತಜ್ಞತೆ…

ಬೆಂಗಳೂರು ಸೆಪ್ಟೆಂಬರ್‌ 20: ರಾಜಕೀಯ ನಾಯಕರು ನಿಧನರಾದಾಗ ಅವರ ಕುರಿತು ಒಂದಷ್ಟು ಗುಣಗಾನ ಮಾಡಿ, ಸಂತಾಪ ಸೂಚಿಸಿ ತಮ್ಮ ಕೆಲಸ ಆಲ್ಲಿಗೆ ಮುಗಿದಿದೆ ಎಂದುಕೊಳ್ಳುವುದು ಬಹುತೇಕ ರಾಜಕೀಯ ನಾಯಕರು ಯೋಚಿಸುವ ರೀತಿ. ಇದು ಇತ್ತೀಚಿನ ದಿನಗಳಲ್ಲಿ ಎಲ್ಲಾ ರಾಜಕೀಯ ಪಕ್ಷಗಳಲ್ಲಿ ನಡೆದುಕೊಂಡು ಬರುತ್ತಿರುವ ವಾಡಿಕೆಯೂ ಹೌದು.

ಆದರೆ, ಇದಕ್ಕೆ ವ್ಯತಿರಿಕ್ತವಾಗಿ, ನಿಧನರಾದ ಒಬ್ಬ ನಾಯಕರಿಗೆ ಪಕ್ಷದಿಂದ ಯಾವ ರೀತಿ ಗೌರವ ಸಲ್ಲಿಸಬಹುದು ಎಂಬುದು ಕೇಂದ್ರದ ಮಾಜಿ ಸಚಿವ, ರಾಜ್ಯಸಭೆ ಸದಸ್ಯರಾಗಿದ್ದ ಆಸ್ಕರ್ ಫರ್ನಾಂಡೀಸ್ ಅವರ ವಿಚಾರದಲ್ಲಿ ಸಾಬೀತಾಗಿದೆ. ಆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರೇ ಮುಂದೆ ನಿಂತಿ ಅಂತಿಮ ವಿಧಿ-ವಿಧಾನಗಳಿಗೆ ಬೇಕಾದ ಏರ್ಪಾಟುಗಳನ್ನು ಮಾಡುವ ಮೂಲಕ ಅಗಲಿದ ನಾಯಕನಿಗೆ ಗೌರವ ಸಲ್ಲಿಸಿದ್ದಾರೆ.

ಸುಮಾರು ಎರಡು ತಿಂಗಳ ಸುದೀರ್ಘ ಚಿಕಿತ್ಸೆ ನಡವೆ ಸೆ. 9ರಂದು ಮಂಗಳೂರಿನ ಎನೆಪೋಯಾ ಆಸ್ಪತ್ರೆಯಲ್ಲಿ ನಿಧನರಾದ ಆಸ್ಕರ್ ಫರ್ನಾಂಡೀಸ್ ಅವರ ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡೆದುಕೊಂಡ ರೀತಿ ಆಸ್ಕರ್ ಕುಟುಂಬಸ್ಥರಿಂದ ಸಾಕಷ್ಟು ಮೆಚ್ಚುಗೆಗೆ ಪಾತ್ರವಾಗಿದೆ.

ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದ ಆಸ್ಕರ್ ಫರ್ನಾಂಡೀಸ್ ಅವರ ಪಾರ್ಥೀವ ಶರೀರವನ್ನು ಅವರ ಹುಟ್ಟೂರಿಗೆ ಕೊಂಡೊಯ್ಯಲಾಗಿತ್ತು. ಆಸ್ಕರ್ ನಿಧನದ ಮಾಹಿತಿ ತಿಳಿಯುತ್ತಿದ್ದಂತೆ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರಿನಲ್ಲಿ ಶ್ರದ್ಧಾಂಜಲಿ ಸಭೆ ನಡೆಸಿ ಅಲ್ಲಿಂದ ನೇರವಾಗಿ ಉಡುಪಿಗೆ ತೆರಳಿ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದರು. ಅಷ್ಟೇ ಅಲ್ಲ, ಆಸ್ಕರ್ ಅವರಿಗೆ ಪಕ್ಷದ ವತಿಯಿಂದ ಸಕಲ ರೀತಿಯಲ್ಲಿ ಗೌರವ ಸಲ್ಲಿಸಲಾಗುವುದು. ಆದ್ದರಿಂದ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಮತ್ತು ಅಂತ್ಯಕ್ರಿಯೆಗೆ ಬೆಂಗಳೂರಿನಲ್ಲಿ ವ್ಯವಸ್ಥೆ ಮಾಡಲಾಗುವುದು ಎಂದು ಕುಟುಂಬಸ್ಥರಿಗೆ ತಿಳಿಸಿದರು.

ಬೆಂಗಳೂರಿಗೆ ವಾಪಸಾದ ಬಳಿಕ ತಮ್ಮ ರಾಜಕೀಯ ಕೆಲಸಗಳ ಜತೆಗೆ ಆಸ್ಕರ್ ಅವರ ಅಂತಿಮ ದರ್ಶನ ಮತ್ತು ಅಂತ್ಯಕ್ರಿಯೆಗೆ ಬೇಕಾದ ಸಿದ್ಧತೆಗಳ ಉಸ್ತುವಾರಿ ನೋಡಿಕೊಂಡರು. ಉಡುಪಿಯಿಂದ ಪಾರ್ಥೀವ ಶರೀರವನ್ನು ಏರಿ ಲಿಫ್ಟ್ ಮಾಡಿಸಲು ವ್ಯವಸ್ಥೆ ಮಾಡಿದರು.

ಅದರಂತೆ ಆಸ್ಕರ್ ಫರ್ನಾಂಡೀಸ್ ಅವರ ಪಾರ್ಥೀವ ಶರೀರವನ್ನು ಅವರ ಹುಟ್ಟೂರಿನಿಂದ ಮಂಗಳೂರು ಮೂಲಕ ಬೆಂಗಳೂರಿಗೆ ಏರ್ ಲಿಫ್ಟ್ ಮಾಡಿಸಿ ಕೆಪಿಸಿಸಿ ಕಚೇರಿಗೆ ಕರೆತರಲಾಯಿತು. ಅಲ್ಲಿ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಶಿಸ್ತುಬದ್ಧ ವ್ಯವಸ್ಥೆ ಮಾಡಲಾಗಿತ್ತು. ಕೊರೋನಾ ಮಾರ್ಗಸೂಚಿ ಪಾಲಿಸಲು ಆದ್ಯತೆ ನೀಡಲಾಯಿತು.

ಈ ಮಧ್ಯೆ ಆಸ್ಕರ್ ಅವರ ಅಂತಿಮ ದರ್ಶನಕ್ಕೆ ರಾಜ್ಯಕ್ಕೆ ಆಗಮಿಸಿದ್ದ ಪಕ್ಷದ ಹಿರಿಯ ನಾಯಕ ರಾಹುಲ್ ಗಾಂಧಿ ಅವರನ್ನು ಬರಮಾಡಿಕೊಂಡು ಅವರನ್ನು ಆಸ್ಕರ್ ಅವರ ಕುಟುಂಬ ಸದಸ್ಯರ ಬಳಿ ಕರೆದೊಯ್ದು ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿಸಿದರು. ಆಸ್ಕರ್ ಪತ್ನಿ, ಪುತ್ರಿ, ಮೊಮ್ಮಕ್ಕಳ ಜತೆ ಸೌಜನ್ಯದ ಮಾತುಕತೆ ನಡೆಸಿದರು.

ಇದಾದ ಬಳಿಕ ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜು ಬಳಿ ಇರುವ ಸೇಂಟ್ ಪ್ಯಾಟ್ರಿಕ್ಸ್ ಚರ್ಚ್ ನಲ್ಲಿ ಆಸ್ಕರ್ ಅವರ ಪಾರ್ಥೀವ ಶರೀರಕ್ಕೆ ಕ್ರೈಸ್ತ ಸಂಪ್ರದಾಯದಂತೆ ಪ್ರಾರ್ಥನೆ ಸಲ್ಲಿಸಲಾಯಿತು. ಚರ್ಚ್ ಆವರಣದಲ್ಲಿ ಪಾರ್ಥೀವ ಶರೀರವನ್ನು ಇರಿಸಿ, ಸಕಲ ಸರ್ಕಾರಿ ಗೌರವಗಳನ್ನು ಅರ್ಪಿಸಲಾಯಿತು. ಮೃತರ ಗೌರವಾರ್ಥ ಗಾಳಿಯಲ್ಲಿ ಮೂರು ಸುತ್ತು ಕುಶಾಲತೋಪುಗಳನ್ನು ಹಾರಿಸಲಾಯಿತು.ನಂತರ ಹೊಸೂರು ರಸ್ತೆಯ ಸೇಂಟ್ ಪ್ಯಾಟ್ರಿಕ್ ಸ್ಮಶಾನದಲ್ಲಿ ಕ್ರೈಸ್ತ ಧಾರ್ಮಿಕ ವಿಧಿ ವಿಧಾನಗಳ ಮೂಲಕ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು. ಇದೆಲ್ಲದರ ಉಸ್ತುವಾರಿಯನ್ನು ಖುದ್ದು ಡಿ.ಕೆ.ಶಿವಕುಮಾರ್ ವಹಿಸಿಕೊಂಡಿದ್ದರು.

ಈ ಕುರಿತಂತೆ ಪ್ರತಿಕ್ರಿಯಿಸಿರುವ ಆಸ್ಕರ್ ಫರ್ನಾಂಡೀಸ್ ಅವರ ಕುಟುಂಬ ಸದಸ್ಯರು, “ಕಾಂಗ್ರೆಸ್ ಪಕ್ಷ ಮತ್ತು ಕೆಪಿಸಿಸಿ ಅಧ್ಯಕ್ಷರು ಆಸ್ಕರ್ ಅವರ ಬಗ್ಗೆ ಹೊಂದಿದ್ದ ಗೌರವಕ್ಕೆ ನಾವು ಆಭಾರಿಯಾಗಿದ್ದೇವೆ. ಅದರಲ್ಲೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಎಲ್ಲಾ ಸಂದರ್ಭದಲ್ಲೂ ನಮ್ಮೊಂದಿಗೆ ಇದ್ದು ಕುಟುಂಬ ಸದಸ್ಯರಂತೆ ನಮ್ಮ ನೆರವಿಗೆ ಬಂದಿದ್ದಾರೆ” ಎಂದು ಹೇಳಿದ್ದಾರೆ.

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305/7892830899..

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...