ಇಂದು ಬೆಳಗಿನಜಾವ 6 ಗಂಟೆ ವೇಳೆಗೆ ಭೀಕರ ಅಪಘಾತ ಸಂಭವಿಸಿದ್ದು ಎದುರಿಗೆ ಬಂದ ನಾಯಿಯನ್ನು ತಪ್ಪಿಸಲು ಹೋಗಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ವಿಧಾನ ಪರಿಷತ್ ಸದಸ್ಯಚೆನ್ನರಾಜ ಹಟ್ಟಿಹೊಳಿ ಅವರಿಗೆ ಅಪಘಾತ ಸಂಭವಿಸಿದ್ದು ಪ್ರಾಣಾಪಾಯದಿಂದ ಪಾರಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿ ಆಸ್ಪತ್ರೆಗೆ ಸೇರಿಸಲಾಗಿದೆ.
ಹೇಗೆ ನಡೆಯಿತು ಘಟನೆ..?!
ನಿನ್ನೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಮುಗಿಸಿ ನಿನ್ನೆ ತಡರಾತ್ರಿ ಬೆಂಗಳೂರಿನಿಂದ ಬೆಳಗಾವಿಗೆ ಹೊರಟ್ಟಿದ್ದ ಲಕ್ಷ್ಮೀ ಹೆಬ್ಬಾಳಕರ್ ರಸ್ತೆ ಮಾರ್ಗದ ಮೂಲಕ ಬರುತ್ತಿದ್ದರು. ಅಂಬಡಗಟ್ಟಿ ಗ್ರಾಮದ ಬಳಿ ಅಡ್ಡಬಂದ ನಾಯಿ ತಪ್ಪಿಸಲು ಹೋಗಿ ಮರಕ್ಕೆ ಕಾರು ಡಿಕ್ಕಿಯಾಗಿದೆ.ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆನ್ನು, ಮುಖಕ್ಕೆ ಸಣ್ಣಪುಟ್ಟ ಗಾಯವಾಗಿದ್ದು, ಎಂಎಲ್ಸಿ ಚೆನ್ನರಾಜ ಹಟ್ಟಿಹೊಳಿ ತಲೆಗೆ ಗಾಯಯಾಗಿದೆ.