
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ
ದಿನಾಂಕ 10 /01/ 2025 ಹಾಗೂ 11/01/2025 ರಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
ಜಿಲ್ಲೆಯ 262 ಗ್ರಾಮ ಪಂಚಾಯತ್, 7 ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ಉಪ ವಿಭಾಗಗಳು ಸೇರಿ 2 ಸಾವಿರಕ್ಕೂ ಹೆಚ್ಚು ಅಧಿಕಾರಿಗಳು,ನೌಕರರು ಹಾಗೂ ಸಿಬ್ಬಂದಿಗಳಿಗೆ ಎರಡು ದಿನದ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಶಿವಮೊಗ್ಗದಲ್ಲಿ ಜರುಗಿತು .
50ಕ್ಕೂ ಹೆಚ್ಚು ವಿಭಾಗದಲ್ಲಿ ಕ್ರೀಡಾಕೂಟಗಳನ್ನು ಆಯೋಜಿಸಿದ್ದು, 10 ಕ್ಕೂ ಹೆಚ್ಚು ಗುಂಪು ಕ್ರೀಡೆ, 45 ವೈಯಕ್ತಿಕ ಕ್ರೀಡೆಗಳು 2 ದಿನದಲ್ಲಿ ನಡೆಯಿತು.

ನೆಹರು ಹೊರಂಗಣ ಹಾಗೂ ಒಳಾಂಗಣ ಕ್ರೀಡಾಂಗಣ ಮತ್ತು JNNCE ಕ್ರೀಡಾಂಗಣದಲ್ಲಿ ನಡೆದ ಈ ಕ್ರೀಡಾಕೂಟಕ್ಕೆ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಹೇಮಂತ್ ಏನ್ ಇವರು ಚಾಲನೆ ನೀಡಿದರು. 2 ದಿನ ಸಂಜೆ RDPR ನೌಕರರು ಹಾಗೂ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಅತ್ಯಂತ ಯಶಸ್ವಿಯಾಗಿ ಜರುಗಿತು.
ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ ಎಸ್ ಷಡಾಕ್ಷರಿ ಭಾಗವಹಿಸಿದ್ದರು. ಇಡೀ ಕ್ರೀಡಾಕೂಟದಲ್ಲಿ ಶ್ರೀಮತಿ ಶೈಲಾ ಎನ್ ಕಾರ್ಯನಿರ್ವಾಹಕ ಅಧಿಕಾರಿಗಳು ತಾಲೂಕು ಪಂಚಾಯತ್ ತೀರ್ಥಹಳ್ಳಿ ಇವರ ನೇತೃತ್ವದ RDPR ತೀರ್ಥಹಳ್ಳಿ 140 ಅಂಕಗಳೊಂದಿಗೆ ಸಮಗ್ರ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿತು.
137 ಅಂಕದೊಂದಿಗೆ ಕಳೆದ ಬಾರಿಯ ಸಮಗ್ರ ಪ್ರಶಸ್ತಿಯನ್ನು ಪಡೆದ ಹೊಸನಗರ ತಾಲೂಕು ಎರಡನೇ ಸ್ಥಾನಕ್ಕೆ ತೃಪ್ತಿ ಪಡಬೇಕಾಯಿತು.