Home ಶಿವಮೊಗ್ಗಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಇರುವಕ್ಕಿ, ಕೃಷಿ ವಿಜ್ಞಾನಿಗಳ ಮಹಾವಿದ್ಯಾಲಯದ ವತಿಯಿಂದ ತಾಲೂಕು ಮಟ್ಟದ ಕೃಷಿ ಮೇಳ..!

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಇರುವಕ್ಕಿ, ಕೃಷಿ ವಿಜ್ಞಾನಿಗಳ ಮಹಾವಿದ್ಯಾಲಯದ ವತಿಯಿಂದ ತಾಲೂಕು ಮಟ್ಟದ ಕೃಷಿ ಮೇಳ..!

by EDITOR NEWS WARRIORS
0 comments

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಇರುವಕ್ಕಿ, ಕೃಷಿ ವಿಜ್ಞಾನಿಗಳ ಮಹಾವಿದ್ಯಾಲಯ, ಇರುವಕ್ಕಿ ವತಿಯಿಂದ “ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮ ೨೦೨೪-೨೫” ಯ ಅಡಿಯಲ್ಲಿ ಫೆಬ್ರುವರಿ 5 ರಂದು ಶಿಕಾರಿಪುರ ತಾಲ್ಲೂಕಿನ ನೆಲವಾಗಿಲು ಗ್ರಾಮದಲ್ಲಿ ಕೃಷಿ ಮೇಳವನ್ನು ಆಯೋಜಿಸಲಾಗಿದೆ.

ಕಾರ್ಯಕ್ರಮವನ್ನು ಉದ್ಘಾಟಿಸಲು ಮಧು ಬಂಗಾರಪ್ಪ, ಕರ್ನಾಟಕ ಸರ್ಕಾರದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ಆಗಮಿಸಲಿದ್ದಾರೆ. ಬೆಳೆ ಸಂಗ್ರಹಾಲಯದ ಉದ್ಘಾಟಕರಾಗಿ ಸಂಸದರಾದ ಬಿ.ವೈ. ರಾಘವೇಂದ್ರರವರು ನೆರವೇರಿಸಲಿದ್ದಾರೆ,

ವಸ್ತು ಪ್ರದರ್ಶನದ ಉದ್ಘಾಟನೆಯನ್ನು ವಿಧಾನಸಭಾ ಸದಸ್ಯರಾದ ಬಿ.ವೈ. ವಿಜಯೇಂದ್ರ ರವರು ಮಾಡಲಿದ್ದಾರೆ ಹಾಗೂ ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಜಗದೀಶ್ ರವರು ಮತ್ತು ವಿವಿಧ ಕೃಷಿ ಮತ್ತು ಅಭಿವೃದ್ಧಿ ಇಲಾಖೆಗಳಿಂದ ಅಧಿಕಾರಿಗಳು ಉಪಸ್ಥಿತರಿರುತ್ತಾರೆ.

ಈ ಕೃಷಿ ಮತ್ತು ಕಲೆಗಳ ಉತ್ಸವದಲ್ಲಿ ಹಲವು ವಿಶೇಷ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ ಹಾಗೂ ವಿಭಿನ್ನ ಕೃಷಿ ಮಳಿಗೆಗಳನ್ನು ಹಾಕುವುದಕ್ಕಾಗಿ ವ್ಯವಸ್ಥೆ ಮಾಡಲಾಗಿದೆ ಇದರಲ್ಲಿ ಕೃಷಿ, ತೋಟಗಾರಿಕೆ, ಪಶು ಸಂಗೋಪನೆ, ಜೇನು ಸಾಕಾಣಿಕೆ, ಮೌಲ್ಯವರ್ಧಿತ ಕೃಷಿ ಉತ್ಪನ್ನಗಳು, ಕೃಷಿ ಪರಿಕರಗಳು ಮತ್ತು ಯಂತ್ರೋಪಕರಣಗಳ ಮತ್ತು ಇನ್ನಿತರ ಪ್ರದರ್ಶನ ಏರ್ಪಡಿಸಲಾಗಿದೆ. ಸುಮಾರು 100 ಕ್ಕೂ ಹೆಚ್ಚು ಮಳಿಗೆಗಳು ಇರುತ್ತದೆ.ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ವಿಜ್ಞಾನಿಗಳು ರೈತರ ಜೊತೆ ಚರ್ಚಾಗೋಷ್ಠಿಯನ್ನು ಏರ್ಪಡಿಸಲಾಗಿದೆ.

ಈ ಕಾರ್ಯಕ್ರಮದಲ್ಲಿ ರೈತ ಮಹಿಳೆಯರಿಗೆ ಮತ್ತು ಪ್ರಗತಿಪರ ರೈತರಿಗೆ ಸನ್ಮಾನವನ್ನು ಏರ್ಪಡಿಸಲಾಗಿದೆ.ಎಲ್ಲಾ ರೈತ ಬಾಂಧವರು ತಮ್ಮ ಕುಟುಂಬದ ಸಮೇತ ಈ ಕಾರ್ಯಕ್ರಮಕ್ಕೆ ಆಗಮಿಸಿ ಉಪಯುಕ್ತ ಮಾಹಿತಿ ಪಡೆಯುವುದರ ಮೂಲಕ ಕೃಷಿ ಮೇಳವನ್ನು ಯಶಸ್ವಿಗೊಳಿಸಬೇಕಾಗಿ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ವಿನಂತಿಸಿದ್ದಾರೆ.

Related Articles

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...