Tuesday, April 29, 2025
Google search engine
Homeರಾಷ್ಟ್ರೀಯShivamogga: 13,000 ಸಾವಿರ ಅಡಿಯಿಂದ ಬಿದ್ದ ಹೊಸನಗರದ ಏರ್ ಫೋರ್ಸ್ ಅಧಿಕಾರಿ ಆಗ್ರಾದಲ್ಲಿ ಸಾವು ಏನಿದು...

Shivamogga: 13,000 ಸಾವಿರ ಅಡಿಯಿಂದ ಬಿದ್ದ ಹೊಸನಗರದ ಏರ್ ಫೋರ್ಸ್ ಅಧಿಕಾರಿ ಆಗ್ರಾದಲ್ಲಿ ಸಾವು ಏನಿದು ಘಟನೆ..?!

ಶಿವಮೊಗ್ಗ : ಜಿಲ್ಲೆಯ ಹೊಸನಗರ ತಾಲೂಕಿನ ಪಟಗುಪ್ಪ ಬಳಿಯ ಸಂಕೂರು ನಿವಾಸಿ ಮಂಜುನಾಥ್ ಜಿ ಎಸ್(36) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಏರ್ ಫೋರ್ಸ್ ಅಧಿಕಾರಿಯಾಗಿದ್ದ ಮಂಜುನಾಥ್ ಸ್ಟೈನ್ ಡೈವಿಂಗ್ ವೇಳೆಯಲ್ಲಿ ಪ್ಯಾರಚೂಟ್ ನಿಷ್ಕ್ರಿಯವಾಗಿ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.

ಏನಿದು ಘಟನೆ..?!

ಆಗ್ರಾದ ಪ್ಯಾರಾ ಟ್ರೈನಿಂಗ್ ಸ್ಕೂಲ್ ನಲ್ಲಿ ವಾರಂಟ್ ಆಫಿಸರ್ ಹಾಗೂ ಪ್ಯಾರಾ ಜಂಪ್ ಇನಸ್ಟ್ರಕ್ಟರ್ ಆಗಿ ಕಾರ್ಯ ನಿರ್ವಹಿಸುತಿದ್ದ ಮಂಜುನಾಥ್ ಶುಕ್ರವಾರ ಬೆಳಿಗ್ಗೆ 9.30ಕ್ಕೆ ಸ್ಕೈ ಡೈವಿಂಗ್ ಮಾಡುವಾಗ ಪ್ಯಾರಾಚೂಟ್ ನಿಷ್ಕ್ರಿಯವಾದ ಕಾರಣ ನಿಯಂತ್ರಣ ಕಳೆದುಕೊಂಡು ಸುಮಾರು 13 ಸಾವಿರ ಅಡಿ ಮೇಲಿಂದ ಕೆಳಗೆ ಬಿದ್ದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಘಟನೆಯ ನಂತರ ಮಧ್ಯಾಹ್ನ 2.30 ಗೆ ಮೃತದೇಹ ಡ್ರಾಫಿಂಗ್ ಝೋನ್ ಮಲ್ಪುರ ಬಳಿ ಪತ್ತೆಯಾಗಿದ್ದು ಆಗ್ರಾದಲ್ಲಿರುವ ಪ್ಯಾರಾಟ್ರೂಪರ್ ತರಬೇತಿ ಕೇಂದ್ರದಲ್ಲಿ ಸ್ಕೈಡೈವಿಂಗ್ ವೇಳೆ ಹಾರಿದ 12 ಜನರಲ್ಲಿ ಮಂಜುನಾಥ್ ಜಿ ಎಸ್ ಸುರಕ್ಷಿತವಾಗಿ ಕೆಳಕ್ಕೆ ಇಳಿದಿರಲಿಲ್ಲ. ಅವರಿಗಾಗಿ ಹುಡುಕಾಟ ನಡೆಸಿದಾಗ, ಅವರು ತೀವ್ರ ಗಂಭೀರವಾದ ಸ್ಥಿತಿಯಲ್ಲಿ ಗೋದಿಯ ಹೊಲದಲ್ಲಿ ಪತ್ತೆಯಾಗಿದ್ದು. ಅವರನ್ನ ಸ್ಥಳೀಯ ಆಸ್ಪತ್ರೆಗೆ ಕರದೊಯ್ಯಲಾಯ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಹುಟ್ಟೂರಿನಲ್ಲಿ ಅಂತಿಮ ವಿಧಿ ವಿಧಾನ :

ಸಂಕೂರಿನಲ್ಲಿ ತಂದೆ ತಾಯಿ ಹಾಗೂ ತಮ್ಮ , ತಂಗಿ ಇದ್ದು 2019 ರಲ್ಲಿ ಅಸ್ಸಾಂ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದರು .ಮಂಜುನಾಥ್ ಜಿ ಎಸ್ ಮೃತದೇಹ ಆಗ್ರಾದಲ್ಲಿದ್ದು ಇಂದು ಸಂಜೆ ಹುಟ್ಟೂರಾದ ಹೊಸನಗರ ತಾಲೂಕಿನ ಸಂಕೂರು ಗ್ರಾಮಕ್ಕೆ ಬರಲಿದ್ದು ಅಂತಿಮ ವಿಧಿ ವಿಧಾನಗಳನ್ನು ಸರ್ಕಾರಿ ಗೌರವಗಳೊಂದಿಗೆ ನಡೆಸಲು ಎಲ್ಲಾ ಪೂರ್ವ ತಯಾರಿಯನ್ನು ನಡೆಸಲಾಗುತ್ತಿದೆ.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...