ಶಿವಮೊಗ್ಗ :; ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಅಕ್ರಮ ಬಡ್ಡಿ ಮೈಕ್ರೋ ಫೈನಾನ್ಸ್ ಗಳ ಹಾವಳಿ ಮಿತಿಮೀರಿದ್ದು ಶಿವಮೊಗ್ಗ ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಕಡೆ ಸಾಕಷ್ಟು ಜನ ಬಡ್ಡಿ ಕೋರರ ಕಾಟ ತಾಳಲಾರದೆ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ.
ಇದರ ನಿಯಂತ್ರಣಕ್ಕೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು ರಾಜ್ಯದ ಎಲ್ಲೆಡೆ ಅಕ್ರಮ ಬಡ್ಡಿಕೋರರ ಮನೆ ಹಾಗೂ ಕಚೇರಿಗಳ ಮೇಲೆ ಪೊಲೀಸ್ ಅಧಿಕಾರಿಗಳ ತಂಡ ನಿರಂತರ ದಾಳಿ ನಡೆಸುತ್ತಿದ್ದು ಬಡ್ಡಿ ಕೋರರನ್ನು ವಶಕ್ಕೆ ತೆಗೆದುಕೊಂಡು ಕೇಸ್ ದಾಖಲಿಸುತ್ತಿದ್ದಾರೆ.
ಶಿವಮೊಗ್ಗ ಜಿಲ್ಲೆಯಲ್ಲೂ ಪೊಲೀಸ್ ಅಧಿಕಾರಿಗಳಿಂದ ದಾಳಿ :
ಶಿವಮೊಗ್ಗ ಜಿಲ್ಲೆಯಲ್ಲೂ ಈ ದಂಧೆ ವ್ಯಾಪಕವಾಗಿ ಹರಡಿದ್ದು ಇಂದು ಅಧಿಕಾರಿಗಳ ತಂಡ ಎಸ್ ಪಿ ಮಿಥುನ್ ಕುಮಾರ್ ಅವರ ಮಾರ್ಗದರ್ಶನ ಮೇರೆಗೆ ಜಿಲ್ಲೆಯ ವಿವಿಧ ಕಡೆ ಅಕ್ರಮ ಬಡ್ಡಿಕೋರರ ಕಚೇರಿ ಹಾಗೆ ಮನೆಗಳ ಮೇಲೆ ದಾಳಿ ನಡೆಸುತ್ತಿದ್ದು ಇಂದು ಯಾರ ಯಾರ ಬಂಧನವಾಗುತ್ತದೆ ಎನ್ನುವುದನ್ನು ಕಾದು ನೋಡಬೇಕಾಗಿದೆ…
ರಘುರಾಜ್ ಹೆಚ್.ಕೆ..9449553305…