
ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕುಂದಾದ್ರಿ ಸಮೀಪ ನಾಬಳ ಎಂಬ ಊರಿನ ಬಳಿ ನಡು ರಸ್ತೆಯಲ್ಲಿ ಕಾಡುಕೋಣ ಪ್ರತ್ಯಕ್ಷವಾಗಿದ್ದು. ಸ್ಥಳೀಯರು ಭಯದ ವಾತಾವರಣದಲ್ಲಿ ಜೀವಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಇತ್ತೀಚಿನ ದಿನಗಳಲ್ಲಿ ಮಲೆನಾಡಿನ ಭಾಗಗಳಲ್ಲಿ ಕಾಡು ಪ್ರಾಣಿಗಳ ಹಾವಳಿ ಮಿತಿಮೀರಿದ್ದು ಅದರಲ್ಲೂ ಕಾಡುಕೋಣ ಆನೆ ರೈತರು ಬೆಳೆದ ಬೆಳೆಗಳನ್ನು ಹಾನಿ ಮಾಡುತ್ತಿದ್ದು ಮಲೆನಾಡು ಭಾಗದ ರೈತರಿಗೆ ಇಂದು ಸಂಕಷ್ಟದ ಪರಿಸ್ಥಿತಿ ಎದುರಾಗಿದೆ.
ಇನ್ನು ಮೇಲಾದರೂ ಅರಣ್ಯ ಇಲಾಖೆಯವರು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವುದರ ಮೂಲಕ ಕಾಡಾನೆಗಳ ಹಾಗೂ ಕಾಡು ಕೋಣಗಳ ಹಾವಳಿಗೆ ಅಂತ್ಯ ಹಾಡಬೇಕಾಗಿದೆ ಎನ್ನುವುದು ನೊಂದ ರೈತರ ಅಳಲು…