Wednesday, April 30, 2025
Google search engine
Homeಶಿವಮೊಗ್ಗಆರೋಗ್ಯಸರ್ಕಾರಿ ಆಸ್ಪತ್ರೆ ವೈದ್ಯರು ಖಾಸಗಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುವಂತಿಲ್ಲ ಶರಣ್ ಪ್ರಕಾಶ್ ಪಾಟೀಲ್ ಕಟ್ಟುನಿಟ್ಟಿನ...

ಸರ್ಕಾರಿ ಆಸ್ಪತ್ರೆ ವೈದ್ಯರು ಖಾಸಗಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುವಂತಿಲ್ಲ ಶರಣ್ ಪ್ರಕಾಶ್ ಪಾಟೀಲ್ ಕಟ್ಟುನಿಟ್ಟಿನ ಸೂಚನೆ..!

ಬೆಂಗಳೂರು:ವಿಧಾನಪರಿಷತ್‍ನಲ್ಲಿ ಇಂದು ಕಾಂಗ್ರೆಸ್ ನ್ ವಿಧಾನ ಪರಿಷತ್ ಸದಸ್ಯೆ ಬಲ್ಕಿಶ್ ಬಾನು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಶರಣ್ ಪ್ರಕಾಶ್ ಪಾಟೀಲ್ ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯ ನಿರ್ವಹಿಸುವ ವೈದ್ಯರು ತಮ್ಮ ಕರ್ತವ್ಯದ ಸಂದರ್ಭದಲ್ಲೇ ಬೇರೆ ಕಡೆ ಕರ್ತವ್ಯ ನಿರ್ವಹಿಸುತ್ತಾರೆ ಎಂಬ ಆರೋಪ ಪ್ರಬಲವಾಗಿ ಕೇಳಿ ಬರುತ್ತಿದೆ.ಇದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮವನ್ನು ತೆಗೆದುಕೊಳ್ಳಲಾಗಿದ್ದು.

ಬೆಳಿಗ್ಗೆ 9 ಗಂಟೆಗೆ ಕರ್ತವ್ಯಕ್ಕೆ ಹಾಜರಾದರೆ ಸಂಜೆ 4 ಗಂಟೆವರೆಗೂ ಸರ್ಕಾರಿ ಆಸ್ಪತ್ರೆಗಳಲ್ಲೇ ಕರ್ತವ್ಯ ನಿರ್ವಹಿಸಬೇಕೆಂದು ಸೂಚಿಸಲಾಗಿದೆ ಎಂದರು.

ಸಮಯ ದುರ್ಬಳಕೆ ತಡೆಗಟ್ಟಲು ಕ್ರಮ:

ಈ ಮೊದಲು 2 ಗಂಟೆಗಳ ನಂತರ 1 ಗಂಟೆ ಕಾರ್ಯ ನಿರ್ವಹಿಸಲು ಅವಕಾಶ ನೀಡಲಾಗಿತ್ತು. ಆದರೆ ವೈದ್ಯರು 1 ಗಂಟೆ ಮುಂಚಿತವಾಗಿ ಹೋಗುವುದು ಇಲ್ಲವೇ 1 ಗಂಟೆ ತಡವಾಗಿ ಬರುತ್ತಿದ್ದಾರೆಂಬ ಆರೋಪ ಕೇಳಿಬರುತ್ತಿದೆ. ಈ ವ್ಯವಸ್ಥೆಯನ್ನು ದುರ್ಬಳಕೆ ಮಾಡುತ್ತಿದ್ದು, ಇದನ್ನು ತಡೆಗಟ್ಟಲು ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಡಾ. ಶರಣ್‌ ಪ್ರಕಾಶ್‌ ಪಾಟೀಲ್‌ ಸಮರ್ಥನೆ ಮಾಡಿಕೊಂಡರು.

ಉಲ್ಲಂಘನೆ ಮಾಡಿದರೆ ಶಿಸ್ತು ಕ್ರಮದ ಎಚ್ಚರಿಕೆ :

ಈಗಾಗಲೇ ಎಲ್ಲಾ ಸರ್ಕಾರಿ ಆಸ್ಪತ್ರೆಗಳ ಮುಖ್ಯಸ್ಥರಿಗೆ ಅಧಿಸೂಚನೆ ಮೂಲಕ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಸೂಚಿಸಲಾಗಿದೆ. ಒಂದು ವೇಳೆ ಯಾರಾದರೂ ಉಲ್ಲಂಘನೆ ಮಾಡಿರುವುದು ಕಂಡುಬಂದರೆ ಶಿಸ್ತುಕ್ರಮ ಜರುಗಿಸುವುದಾಗಿ ಸಚಿವರು ಎಚ್ಚರಿಸಿದರು.

ಇನ್ನು ಮುಂದೆ ವೈದ್ಯರು ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾದ ವೇಳೆ ನಾಲ್ಕು ಬಾರಿ ಬಯೋಮೆಟ್ರಿಕ್‍ಗೆ ತಮ್ಮ ಹಸ್ತಮುದ್ರೆ ಹಾಕಬೇಕು. ಬೆಳಗ್ಗೆ 9 ಗಂಟೆ, ಮಧ್ಯಾಹ್ನ 2, 3 ಮತ್ತು 4 ಗಂಟೆಗೆ ಕಡ್ಡಾಯವಾಗಿ ಹಾಕಲೇಬೇಕು. ಇದರ ಆಧಾರಿತವಾಗಿಯೇ ಸಂಬಳವನ್ನು ನೀಡಲಾಗುವುದು. ಈ ಕುರಿತು ಮುಖ್ಯಸ್ಥರ ಜೊತೆಯೂ ಚರ್ಚೆ ಮಾಡಲಾಗಿದೆ. ರೋಗಿಗಳಿಗೆ ಸಕಾಲಕ್ಕೆ ಸರಿಯಾಗಿ ಚಿಕಿತ್ಸೆ ನೀಡುವುದು ಸರ್ಕಾರದ ಮೊದಲ ಆದ್ಯತೆ ಎಂದು ಸಚಿವರು ಹೇಳಿದರು.

ಜಿಲ್ಲಾಸ್ಪತ್ರೆಗಳಲ್ಲಿ ಡಿಎಚ್‍ಒ, ಪ್ರಾಧ್ಯಾಪಕರು, ಸಹಾಯಕ ಪ್ರಾಧ್ಯಾಪಕರು ಕರ್ತವ್ಯ ನಿರ್ವಹಿಸುತ್ತಾರೆ. ನಾವು ಎನ್‍ಎಂಸಿ ಜಾರಿಗೆ ತಂದಿರುವ ಮಾರ್ಗಸೂಚಿಗಳ ಮೂಲಕವೇ ಕಾರ್ಯ ನಿರ್ವಹಿಸುವಂತೆ ಸೂಚನೆ ಕೊಡಲಾಗಿದೆ. ಕೆಲವು ಆಸ್ಪತ್ರೆಗಳಲ್ಲಿ ಸಣ್ಣಪುಟ್ಟ ಸಮಸ್ಯೆಗಳಿದ್ದರೆ ಸರಿಪಡಿಸಲಾಗುವುದು ಎಂದು ಸಚಿವರು ಆಶ್ವಾಸನೆ ನೀಡಿದರು.

ಪ್ರತಿಯೊಂದು ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಒಪಿಡಿ ವ್ಯವಸ್ಥೆಯನ್ನು ಕಡ್ಡಾಯ ಮಾಡಲಾಗಿದೆ. ಅಗತ್ಯವಿರುವ ರೋಗಿಗಳಿಗೆ ಒಪಿಡಿ ನೀಡಬೇಕೆಂದು ಸೂಚನೆ ಕೊಡಲಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ದಿನದಿಂದ ದಿನಕ್ಕೆ ಉತ್ತಮವಾದ ವೈದ್ಯಕೀಯ ಸೌಲಭ್ಯ ಸಿಗುತ್ತಿದೆ. ಎಲ್ಲಿಯೂ ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಶಿವಮೊಗ್ಗ ಮೇಗನ್ ಗೆ ಖುದ್ದು ಬೇಟಿ :

ಶಿವಮೊಗ್ಗ ಜಿಲ್ಲೆಯ ಮೆಗಾನ್ ಆಸ್ಪತ್ರೆಯಲ್ಲಿ ಕೆಲವು ಸಣ್ಣಪುಟ್ಟ ಸಮಸ್ಯೆಗಳನ್ನು ಸದಸ್ಯರು ನನ್ನ ಗಮನಕ್ಕೆ ತಂದಿದ್ದಾರೆ. ಖುದ್ದು ನಾನೇ ಸ್ಥಳಕ್ಕೆ ಭೇಟಿ ನೀಡಿ ಪರಿಹರಿಸುತ್ತೇನೆ ಎಂದರು.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...