Tuesday, April 29, 2025
Google search engine
Homeರಾಜ್ಯಕರ್ನಾಟಕ ಪಬ್ಲಿಕ್ ಸ್ಕೂಲ್ ಬಗ್ಗೆ ಮಹತ್ವದ ಸಭೆ ನಡೆಸಿದ ಸಚಿವ ಮಧು ಬಂಗಾರಪ್ಪ..!

ಕರ್ನಾಟಕ ಪಬ್ಲಿಕ್ ಸ್ಕೂಲ್ ಬಗ್ಗೆ ಮಹತ್ವದ ಸಭೆ ನಡೆಸಿದ ಸಚಿವ ಮಧು ಬಂಗಾರಪ್ಪ..!

ಕರ್ನಾಟಕ ರಾಜ್ಯದಲ್ಲಿನ ಮಕ್ಕಳಿಗೆ ಪೂರ್ವ ಪ್ರಾಥಮಿಕದಿಂದ ಪದವಿ ಪೂರ್ವ ಹಂತದವರೆಗೂ ಒಂದೇ ಸೂರಿನಡಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಸದುದ್ದೇಶದಿಂದ ಕರ್ನಾಟಕ ಪಬ್ಲಿಕ್ ಶಾಲೆ (ಕೆ.ಪಿ.ಎಸ್) ಗಳನ್ನು ಈಗಾಗಲೇ ತೆರೆಯಲಾಗಿದ್ದು, ಅವುಗಳನ್ನು ಏಷಿಯನ್ ಡೆವಲಪ್ಮೆಂಟ್ ಬ್ಯಾಂಕ್ ನ ನೆರವಿನೊಂದಿಗೆ ವಿಸ್ತರಿಸುವ ಕುರಿತು ಇಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಎಸ್,ಮಧು ಬಂಗಾರಪ್ಪನವರು ವಿಧಾನಸೌಧದಲ್ಲಿ ಎ.ಡಿ.ಬಿ ಅಧಿಕಾರಿಗಳೊಂದಿಗೆ ಸಭೆ ನೆಡೆಸಿದರು.

ಕರ್ನಾಟಕ ಪಬ್ಲಿಕ್ ಶಾಲೆ (ಕೆ.ಪಿ.ಎಸ್) ಗಳಿಂದಾಗಿ ಗ್ರಾಮಿಣ ಭಾಗದ ಮಕ್ಕಳ ಶೈಕ್ಷಣಿಕ ವಿಕಾಸ ಹಾಗೂ ಕಲಿಕಾ ಸಾಮರ್ಥ್ಯ ಹೆಚ್ಚಿಸುವುದರ ಜೊತೆಗೆ ಮಕ್ಕಳು ಕಲಿಕೆಯಲ್ಲಿ ಹಿಂದುಳಿಯದಂತೆ ಎಚ್ಚರ ವಹಿಸಿಸುವ ಕುರಿತಂತೆ ಸಮಗ್ರವಾಗಿ ಚರ್ಚಿಸಿ, ಅಗತ್ಯ ಸಲಹೆ-ಸೂಚನೆಗಳನ್ನು ನೀಡಲಾಯಿತು.ಈ ವೇಳೆ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶ್ರೀಮತಿ ರಶ್ಮಿ ಮಹೇಶ್, ಆಯುಕ್ತರಾದ ಶ್ರೀ ತ್ರಿಲೋಕ ಚಂದ್ರ, ರಾಜ್ಯ ಯೋಜನಾ ನಿರ್ದೇಶಕರಾದ ಶ್ರೀ ಎಂ. ಕುರ್ಮರಾವ್, ಧಾರವಾಡ ವಿಭಾಗದ ಅಪರ ಆಯುಕ್ತರಾದ ಜಯಶ್ರೀ ಶಿಂತ್ರಿ ಹಾಗೂ ಕಲ್ಬುರ್ಗಿ ವಿಭಾಗದ ಅಪರ ಆಯುಕ್ತರಾದ ಡಾ.ಆಕಾಶ್ ಸೇರಿದಂತೆ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...