Tuesday, April 29, 2025
Google search engine
Homeಬೆಂಗಳೂರುಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಬದ್ಧ ಸಚಿವ ಮಧು ಬಂಗಾರಪ್ಪ..!

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಬದ್ಧ ಸಚಿವ ಮಧು ಬಂಗಾರಪ್ಪ..!

ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಎಸ್ ಮಧು ಬಂಗಾರಪ್ಪನವರು ವಿಕಾಸಸೌಧದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಗೆ ಸಂಬಂಧಿಸಿದಂತೆ ಅಲ್ಲಿನ “*ಶೈಕ್ಷಣಿಕ ಅಭಿವೃದ್ಧಿ ವಿಷಯಗಳ ಕುರಿತು*” ಸಚಿವರು, ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರೊಂದಿಗೆ ಸಭೆ ನಡೆಸಿದರು.

ಸಭೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಶಾಸಕರು, ವಿಧಾನಪರಿಷತ್ ಸದಸ್ಯರೊಂದಿಗೆ ತಮ್ಮ ಕ್ಷೇತ್ರದಲ್ಲಿನ ಸಮಸ್ಯೆಗಳು ಹಾಗೂ ಅಭಿವೃದ್ಧಿ ವಿಷಯಗಳ ಕುರಿತು ದೀರ್ಘಕಾಲ ಚರ್ಚಿಸಲಾಯಿತು. ಅಲ್ಲಿನ ಪ್ರಮುಖ ಬೇಡಿಕೆಗಳಾದ ಶಿಕ್ಷಕರ ಕೊರತೆ ನೀಗಿಸುವುದು, ನೂತನ ಶಾಲಾ ಕೊಠಡಿಗಳ ಮಂಜೂರು, ಶಿಕ್ಷಕರಿಗೆ ತರಬೇತಿ, ಶೌಚಾಲಯ ಸ್ಥಾಪನೆ, ಕೊಠಡಿ ದುರಸ್ತಿ, ನೂತನ ಕೆ.ಪಿ.ಎಸ್ ಶಾಲೆಗಳನ್ನು ಮಂಜೂರು, ನೂತನ ತಾಲೂಕುಗಳಿಗೆ ಬಿ.ಇ.ಒ ಕಚೇರಿಗಳನ್ನು ಆರಂಭಿಸುವುದು ಹಾಗೂ ಮಕ್ಕಳ ಹಾಜರಾತಿ ಹೆಚ್ಚಳ ಸೇರಿದಂತೆ ಇನ್ನೂ ಅನೇಕ ವಿಚಾರಗಳ ಕುರಿತು ಮಾಹಿತಿ ಪಡೆಯಲಾಯಿತು.

ಶೀಘ್ರವೇ ಆಗಬೇಕಿರುವ ಎಲ್ಲಾ ಕಾರ್ಯಗಳ ಬಗ್ಗೆ ಕೂಡಲೇ ಗಮನಹರಿಸಂತೆ ಅಧಿಕಾರಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸೂಚಿಸಿದರು.ಈಗಾಗಲೇ ನಮ್ಮ ಸರ್ಕಾರವು ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ವಿಶೇಷ ಕಾಳಜಿವಹಿಸಿದೆ. ಜೊತೆಗೆ ಹೆಚ್ಚಿನ ಅನುದಾನ ನೀಡುವ ಮೂಲಕ ಅಭಿವೃದ್ಧಿಗೆ ಬದ್ಧವಾಗಿದೆ. ಮುಂದಿನ ದಿನಗಳಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಆಗಮಿಸಿ, ಅಲ್ಲಿನ ಸಮಸ್ಯೆಗಳ ನಿವಾರಣೆಗೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳನ್ನೊಳಗೊಂಡ ಸಭೆ ನಡೆಸಿಲಾಗುವುದು ಎಂದು ಭರವಸೆ ನೀಡಿದರು.

ಈ ವೇಳೆ ಸಚಿವ ಸಂಪುಟ ಸದಸ್ಯರಾದ ಡಾ. ಶರಣ ಪ್ರಕಾಶ್ ಪಾಟೀಲ್, ರಹೀಂಖಾನ್, ಶರಣಬಸಪ್ಪಗೌಡ ದರ್ಶನಾಪುರ, ಕೆ.ಕೆ.ಆರ್‌.ಡಿ.ಬಿ ಅಧ್ಯಕ್ಷರಾದ ಅಜಯ್ ಸಿಂಗ್, ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶ್ರೀಮತಿ ರಶ್ಮಿ ಮಹೇಶ್, ಆಯುಕ್ತರಾದ ತ್ರಿಲೋಕ ಚಂದ್ರ ಸೇರಿದಂತೆ ಈ ಭಾಗದ ಶಾಸಕರುಗಳು ಹಾಗೂ ಪರಿಷತ್ ಸದಸ್ಯರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...