Wednesday, April 30, 2025
Google search engine
Homeಶಿವಮೊಗ್ಗಉಪ ಲೋಕಾಯುಕ್ತರಿಂದ ಬಾಲಕಿಯರ ಬಾಲ ಮಂದಿರಕ್ಕೆ ಭೇಟಿ..!

ಉಪ ಲೋಕಾಯುಕ್ತರಿಂದ ಬಾಲಕಿಯರ ಬಾಲ ಮಂದಿರಕ್ಕೆ ಭೇಟಿ..!

ಉಪ ಲೋಕಾಯುಕ್ತರಾದ ಕೆ.ಎನ್. ಫಣೀಂದ್ರ ರವರು ಬಾಲಕಿಯರ ಬಾಲ ಮಂದಿರಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿ, ಸೂಕ್ತ ಸಲಹೆ ಸೂಚನೆಗಳನ್ನು‌ನೀಡಿದರು.

ಅಡುಗೆ ಮನೆಗೆ ತೆರಳಿ, ಅಡುಗು ಮನೆ ಮೇಲ್ಚಾವಣೆ ಹಾಗೂ ಆಹಾರದ ಸುರಕ್ಷಿತ ತಪಾಸಣೆ ಮಾಡಿದರು. ಕೈ ತೊಳೆಯುವ ಸ್ಥಳ, ವಾಟರ್ ಫಿಲ್ಟರ್ , ಮಕ್ಕಳ ಮಲಗುವ ಕೊಠಡಿಯನ್ನು ಪರಿವೀಕ್ಷಿಸಿ ಹಾಳಾಗಿರುವ ಹಾಸಿಯನ್ನು ಹಾಗೂ ಮಂಚಗಳನ್ನು ಬದಲಾಯಿಸಬೇಕೆಂದು ನಿರ್ದೇಶನ ನೀಡಿದರು.ಹಾಸಿಗೆ, ಮಂಚಗಳ ಗುಣಮಟ್ಟ ಪರೀಕ್ಷಿಸಿ ಖರೀದಿಸಬೇಕು. ಹಾಳಾದ ಮಂಚಗಳನ್ನು ದುರಸ್ತಿಪಡಿಸಿ, ಹಾಳಾದ ಹಾಸಿಗೆಗಳನ್ನು ತೆಗೆದುಹಾಕಿ ಹೊಸದನ್ನು ಹಾಕಿಸುವಂತೆ ಸೂಚಿಸಿದರು.

ಕಿಟಕಿ‌ ಗಾಜು, ಮೆಶ್ ಸರಿಪಡಿಸಿ ಸ್ವಚ್ಚತೆಯನ್ನು ಇನ್ನು ಒಂದು ವಾರದೊಳಗೆ ಮಾಡಬೇಕು. ಇಲ್ಲವಾದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು. ಆವರಣದೊಳಗೆ ಹಂದಿಗಳ ಹಾವಳಿ ತಪ್ಪಿಸಿ, ಸ್ವಚ್ಚತೆ ಕಾಪಾಡಿ ಸೂಕ್ತ ಕ್ರಮ ವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಿಗೆ ಸೂಚಿಸಿದರು.

ಶೌಚಾಲಯ ವೀಕ್ಷಿಸಿದ ಅವರು ಒಡೆದ‌ ಕಿಟಕಿ ಬಾಗಿಲುಗಳನ್ನು ಸರಿಪಡಿಸಲು ಸೂಚಿಸಿದರು ತಿಂಡಿ ಇತರೆ ಸೌಲಭ್ಯಗಳು ಸರಿಯಾಗಿ ನೀಡುತ್ತಿದ್ದಾರಾ, ಕುಡಿಯುವ ನೀರಿನ ಸೌಲಭ್ಯ, ಬಿಸಿನೀರು, ಹೊಟ್ಟೆ ತುಂಬ ಗುಣಮಟ್ಟದ ಊಟ ಕೊಡುತ್ತಿದ್ದಾರಾ? ಎಂದು ಕೇಳಿದರು.

ಗ್ರಂಥಾಲಯಕ್ಕೆ ಬೇಕಾದ ಪುಸ್ತಕ ಗಳನ್ನು ಕೇಳಿರಿ. ಏನು ಸೌಕರ್ಯ, ಸೌಲಭ್ಯಗಳು ಬೇಕೆಂದು ಕೇಳಿದೆರು. ಸತ್ಪ್ರಜೆಗಳಾಗಬೇಕು. ಸೇವಾ ಮನೋಭಾವ ಬೆಳೆಸಿಕೊಂಡು, ಉತ್ತಮ‌ ಉದ್ಯೋಗ ಪಡೆದು‌, ದೇಶ ಸೇವೆ ಮಾಡುವಂತೆ ತಿಳಿಸಿದರು. ನಿಮ್ಮ ಪೀಳಿಗೆ ಚೆನ್ನಾಗಿದ್ದರೆ ದೇಶ ಅಭಿವೃದ್ಧಿ ಸಾಧ್ಯ. ಚೆನ್ನಾಗಿ ಓದಿರಿ. ನಿಮ್ಮ ಭವಿಷ್ಯ ಉಜ್ವಲವಾಗಿರಲಿ ಎಂದು ಹಾರೈಸಿದರು.

ಅನುದಾನದ ಅವಶ್ಯಕತೆ ಇದ್ದರೆ ಕೇಳಿ ಇಲಾಖೆಯ ಅಧಿಕಾರಿಗಳೊಂದಿಗೆ ಮಾತನಾಡುತ್ತೇನೆ. ತಮ್ಮ ಮನೆಯಂತೆ ಬಾಲಮಂದಿರವನ್ನು‌ ನೋಡಿಕೊಳ್ಳಬೇಕೆಂದು ತಿಳಿಸಿದರು. ನಂತರ ಸರ್ಕಾರಿ ವಿಶೇಷ ದತ್ತು ಸಂಸ್ಥೆಗೆ ಭೇಟಿಗೆ ನೀಡಿ, ಶಿವರಾತ್ರಿ ಹಬ್ಬದಂದು ಕೇಂದ್ರಕ್ಕೆ ದಾಖಲಾದ ಹೆಣ್ಣು ಮಗುವಿಗೆ ಉಪ ಲೋಕಾಯುಕ್ತರು ನಾಮಕರಣ ಮಾಡಿದರು.ರಾಜ್ಯ ಮಹಿಳಾ‌ ನಿಲಯಕ್ಕೆ ಭೇಟಿ ನೀಡಿ, ನಿವಾಸಿಗಳೊಂದಿಗೆ ಮಾತನಾಡಿ, ಕುಂದು ಕೊರತೆಗಳನ್ನು ಆಲಿಸಿದರು.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...