Wednesday, April 30, 2025
Google search engine
Homeಕಾಂಗ್ರೆಸ್ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆ...!

ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆ…!

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ಬೃಹತ್ ಸಭೆಯಲ್ಲಿ ಭಾಗವಹಿಸಿ “ಪಕ್ಷದ ಸಂಘಟನೆ ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾರ್ಯಕರ್ತರು ಒಗ್ಗಟ್ಟಿನಿಂದ ಹೋರಾಡಿ ಚುನಾವಣೆ ಗೆಲ್ಲುವ” ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಮಹಾನಗರ ಪಾಲಿಕೆಯ ಅಧಿಕಾರವನ್ನು ಹಿಡಿಯುತ್ತ ಎಲ್ಲ ಮುಖಂಡರು ಹಾಗೂ ಕಾರ್ಯಕರ್ತರು ಒಗ್ಗಟ್ಟಿನಿಂದ ಹೋರಾಡಬೇಕು ಪಕ್ಷ ಹಾಗೂ ನಾನು ವೈಯಕ್ತಿಕವಾಗಿ ನಿಮ್ಮ ಗೆಲುವಿಗೆ ಜೊತೆಯಲ್ಲಿ ಇರುತ್ತೇನೆ ಪಕ್ಷದ ಗ್ಯಾರಂಟಿ ಕಾರ್ಯಕ್ರಮದ ಜೊತೆಗೆ ಮಹಾನಗರದ ಅಭಿವೃದ್ಧಿಗೆ ಸರ್ಕಾರ ಕೈಗೊಂಡಿರುವ ಕಾರ್ಯಕ್ರಮಗಳನ್ನು ಮನೆಮನೆಗೆ ತಲುಪಿಸುವಂತಹ ಕಾರ್ಯಕರ್ತರು ಶ್ರಮಿಸಬೇಕು ಎಂದು ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪನವರು ಕಾರ್ಯಕರ್ತರಲ್ಲಿ ವಿನಂತಿಸಿದರು.ಕಾರ್ಯಕರ್ತರೇ ನಮ್ಮ ಪಕ್ಷದ ಜೀವಾಳ….ನಮ್ಮ ಪಕ್ಷದ ಕಾರ್ಯಕರ್ತರು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದ ಹಾಗೆಯೇ ಮುಂಬರುವ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ತಮ್ಮ ತಮ್ಮ ಬೂತ್ ಮಟ್ಟದಲ್ಲಿ ನಾವೆಲ್ಲರೂ ಒಗ್ಗಟ್ಟಾಗಿ ಮುಂದಿನ ದಿನಗಳಲ್ಲಿ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು.

ಕಾಂಗ್ರೆಸ್ ಪಕ್ಷ ಶಿಸ್ತಿನ ಪಕ್ಷ ಆಗಿರುವುದರಿಂದ ಮುಂದಿನ ದಿನಗಳಲ್ಲಿ ಗ್ರಾ.ಪಂ, ತಾ.ಪಂ, ಜಿ.ಪಂ, ಪ.ಪಂ, ನಗರಸಭೆ, ಪುರಸಭೆ, ಮಹಾನಗರ ಪಾಲಿಕೆಗಳಿಗೆ ಪಕ್ಷ ಯಾರಿಗೆ ಟಿಕೆಟ್ ನೀಡಿದರು ಬೆಂಬಲಿಸಅವರನ್ನು ಬೆಂಬಲಿಸಿ, ಹೆಚ್ಚಿನ ಅಂತರದಲ್ಲಿ ಗೆಲ್ಲಿಸಬೇಕು.ಪ್ರತಿಯೊಬ್ಬ ಕಾರ್ಯಕರ್ತರು ಪಕ್ಷ ಸಂಘಟನೆಯಲ್ಲಿ ನಿರಂತರವಾಗಿರಬೇಕು. ಪಕ್ಷದ ಚೌಕಟ್ಟಿನಲ್ಲಿ ಒಗ್ಗಟ್ಟಾಗಿ ಪಕ್ಷವನ್ನು ಇನ್ನಷ್ಟು ಸಂಘಟಿಸಿ ಬಲಿಷ್ಟಪಡಿಸಬೇಕು ಇವತ್ತು ರಾಜ್ಯದಲ್ಲಿ ಅಧಿಕಾರಿಕ ಬರಲು ಕಾರ್ಯಕರ್ತರ ಶ್ರಮ ಅನನ್ಯ ನಿಮ್ಮ ಶ್ರಮ ವ್ಯರ್ಥವಾಗಲು ಬಿಡುವುದಿಲ್ಲ ಮುಂದಿನ ಚುನಾವಣೆಗಳು ಕಾರ್ಯಕರ್ತರ ಚುನಾವಣೆ ನಮ್ಮೆಲ್ಲರ ಹೊಣೆ ಸಾಕಷ್ಟಿದ್ದು ನಿಮ್ಮೆಲ್ಲರ ಗೆಲುವಿಗೆ ಒಗ್ಗಟ್ಟಿನಿಂದ ಶ್ರಮಿಸುತ್ತೇವೆ ಎಂದು ನುಡಿದರು. ಈ ಸಂದರ್ಭದಲ್ಲಿ ಚುನಾವಣೆಗೆ ಬೇಕಾದ ಪೂರ್ವ ತಯಾರಿಗಳ ಬಗ್ಗೆ ಕಾರ್ಯಕರ್ತರು ಹಾಗೂ ಮುಖಂಡರ ಮಾರ್ಗದರ್ಶನ ಹಾಗೂ ಸಲಹೆಗಳನ್ನು ಪಡೆಯಲಾಯಿತು.

ಈ ವೇಳೆ ಜಿಲ್ಲಾಧ್ಯಕ್ಷರಾದ ಆರ್ ಪ್ರಸನ್ನ ಕುಮಾರ್ ಎಚ್ ಎಮ್ ಚಂದ್ರಶೇಖರಪ್ಪ ಇಸ್ಮಾಯಿಲ್ ಖಾನ್ ಹೆಚ್ಎಸ್ ಸುಂದರೇಶ್ ಎಂ ಶ್ರೀಕಾಂತ್ ಹೆಚ್ ಸಿ ಯೋಗೇಶ್ ಎನ್ ರಮೇಶ್ ಎನ್ ರವಿಕುಮಾರ್ ಎಸ್ ಕೆ ಮರಿಯಪ್ಪ ಚಂದ್ರ ಭೂಪಾಲ್ ಕಲೀಮ್ ಪಾಷಾ ಶಿವಕುಮಾರ್ ವಿವಿಧ ವಿಭಾಗಗಳ ಅಧ್ಯಕ್ಷರುಗಳು ಪಕ್ಷದ ಮುಖಂಡರು ಕಾರ್ಯಕರ್ತರು, ಜನಪ್ರತಿನಿಧಿಗಳು, ಮಹಿಳಾ ಮುಖಂಡರು ಹಾಗೂ ಯುವ ಕಾಂಗ್ರೆಸ್ ಮುಖಂಡರುಗಳು, ಪದಾಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...