ಶಿವಮೊಗ್ಗ: 2012 ರಲ್ಲಿ ಮಾಜಿ ಉಪಮುಖ್ಯಮಂತ್ರಿ ಈಶ್ವರಪ್ಪ ವಿರುದ್ಧ ಶಿವಮೊಗ್ಗದ ವಕೀಲರಾದ ವಿನೋದ್ ಬಿ ಯವರು ಅಕ್ರಮ ಆಸ್ತಿ ಗಳಿಕೆ ಆರೋಪದಡಿ ದೂರು ದಾಖಲಿಸಿದ್ದರು.
ಇದೀಗ ಪ್ರಕರಣ ತಿರುವು ಪಡೆದುಕೊಂಡಿದ್ದು ಕೆ.ಎಸ್.ಈಶ್ವರಪ್ಪ ವಿರುದ್ಧ FIR ದಾಖಲಿಸಿ ತನಿಖೆ ನಡೆಸಲು ಬೆಂಗಳೂರಿನ ವಿಶೇಷ ನ್ಯಾಯಾಲಯ ಆದೇಶ ಮಾಡಿದೆ.

ಶಿವಮೊಗ್ಗ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿದ್ದರು ಆದರೆ ಇದಕ್ಕೆ ಈಶ್ವರಪ್ಪ ತಡೆಯಾಜ್ಞೆ ಪಡೆದಿದ್ದರು ಈ ಪ್ರಕರಣ 3 ಬಾರಿ ಉಚ್ಚ ನ್ಯಾಯಾಲಯದ ಮೆಟ್ಟಲೇರಿತ್ತು ಅಂತಿಮವಾಗಿ 2021 ರಲ್ಲಿ ನ್ಯಾಯಮೂರ್ತಿ ಮೈಕೆಲ್ ಡಿಕುನ್ನ ಪ್ರಕರಣದ ವಿಚಾರಣೆಗೆ ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಆದೇಶಿಸಿದ್ದರು. ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ರವರು ಭ್ರಷ್ಟಾಚಾರ ಪ್ರತಿಬಂಧಕ ಕಾಯಿದೆ 13(1) (d) (e) ಅಡಿಯಲ್ಲಿ FIR ದಾಖಲಿಸಿ 3 ತಿಂಗಳ ಒಳಗಾಗಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಇಂದು ಶಿವಮೊಗ್ಗ ಲೋಕಾಯುಕ್ತ Dysp ಯವರಿಗೆ ಆದೇಶಿಸಿದ್ದಾರೆ. 13 ವರ್ಷದ ವಕೀಲ ವಿನೋದ್ ರವರ ನಿರಂತರ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ.

ರಘುರಾಜ್ ಹೆಚ್ ಕೆ…9449553305….