ರಾಜ್ಯದಲ್ಲಿ ಜಾತಿಗಣಿತೀಯ ಅಂಕಿ ಅಂಶ ಸೋರಿಕೆ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧವೇ ಕಾಂಗ್ರೆಸ್ ನ ಹಿರಿಯ ಮುಖಂಡರುಗಳು ಕಿಡಿ ಕಾರುತ್ತಿದ್ದಾರೆ.
ಅದರಲ್ಲೂ ಪ್ರಬಲ ಸಮುದಾಯಗಳಾದ ಲಿಂಗಾಯಿತರು ಹಾಗೂ ಒಕ್ಕಲಿಗ ಸಮುದಾಯ ಈ ಜಾತಿಗಣತಿಯನ್ನು ಒಪ್ಪುತ್ತಿಲ್ಲ ಯಾವುದೇ ಕಾರಣಕ್ಕೂ ಈ ವರದಿಯನ್ನು ಸರ್ಕಾರ ಜಾರಿಗೆ ತರಬಾರದು ಎಂದು ಒಕ್ಕಲಿಗ ಸಮುದಾಯದ ಸಂಘಟನೆಗಳು ರಾಜಕೀಯ ನಾಯಕರುಗಳು ಪಟ್ಟು ಹಿಡಿದು ಕುಳಿತಿದ್ದಾರೆ.
ಹಲವು ಕಡೆ ಈಗಾಗಲೇ ಪ್ರತಿಭಟನೆಯ ಬಿಸಿ ಸರ್ಕಾರಕ್ಕೆ ತಾಗಿದೆ ಇನ್ನೂ ಇಂದು ಕೂಡ ಸಾಕಷ್ಟು ಪ್ರತಿಭಟನೆಗಳು ರಾಜ್ಯದಲ್ಲಿ ನಡೆಯುವ ಸಾಧ್ಯತೆ ಇದೆ .
ಸಿಎಂ ಸಿದ್ದರಾಮಯ್ಯ ವಿರುದ್ಧ ಶಾಮನೂರು ಶಿವಶಂಕರಪ್ಪ ಕಿಡಿ..!
ಕಾಂಗ್ರೆಸ್ಸಿನ ಹಿರಿಯ ಮುಖಂಡರು ಲಿಂಗಾಯಿತ ಸಮುದಾಯದ ಪ್ರಬಲ ನಾಯಕರದ ಶಾಮನೂರು ಶಿವಶಂಕರಪ್ಪನವರು ಜಾತಿಗಣತಿ ಜಾರಿಗೆ ವಿರೋಧ ವ್ಯಕ್ತಪಡಿಸಿದ್ದು ರಾಜ್ಯದಲ್ಲಿ ಪ್ರಬಲ ಸಮುದಾಯಗಳಾಗಿರುವ ಲಿಂಗಾಯಿತರು ಹಾಗೂ ಒಕ್ಕಲಿಗರನ್ನು ಎದುರು ಹಾಕಿಕೊಂಡು ರಾಜ್ಯಭಾರ ಮಾಡೋಕಾಗುತ್ತಾ..?! ಎಂದು ತಮ್ಮ ಪಕ್ಷದ ವಿರುದ್ಧವೇ ಕಿಡಿಕಾರಿದ್ದಾರೆ…
ರಘುರಾಜ್ ಹೆಚ್ ಕೆ…9449553305….