ಬೆಳಗಾವಿ : ನಗರದ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ ಬಿಸಿಎ ವ್ಯಾಸಂಗ ಮಾಡುತ್ತಿದ್ದ ಶಿಲ್ಪ ಎನ್ನುವ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನ ಚಿಕ್ಕಮಲ್ಲೂರು ಗ್ರಾಮದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಚಿಕ್ಕಮಲ್ಲೂರು ಗ್ರಾಮದ ಶಿಲ್ಪಾ ಬೆಳಗಾವಿಯಲ್ಲಿ ಬಿಸಿಎ ಓದುತ್ತಿದ್ದಳು ನಗರದ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ ವಾಸಿಸುತ್ತಿದ್ದಳು ನವೀನ್ ಎಂಬ ಯುವಕನನ್ನು ಶಿಲ್ಪಾ ಪ್ರೀತಿಸುತ್ತಿದ್ದಳು. ನವೀನ್ ಶಿಗ್ಗಾವಿಯ ಫರ್ನಿಚರ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ.ಇದೇ ಸಮಯದಲ್ಲಿ ನಿರಂತರವಾಗಿ ಶಿಲ್ಪಾಗೆ ನವೀನ್ ಕೆಲಸ ಮಾಡುತ್ತಿದ್ದ ಅಂಗಡಿ ಮಾಲೀಕ ರಂಜಾನ್ ನದಾಫ್ ಎನ್ನುವ ಮುಸ್ಲಿಂ ವ್ಯಕ್ತಿ ಕರೆ ಮಾಡಿ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ.
ಕಳೆದ ಮೂರು ವರ್ಷಗಳಿಂದ ಶಿಲ್ಪಾ ಮತ್ತು ನವೀನ ಪರಸ್ಪರ ಪ್ರೀತಿಸುತ್ತಿದ್ದರು ಇದೇ ವೇಳೆ ರಂಜಾನ್ ನದಾಫ್ ಎಂಬ ಮುಸ್ಲಿಂ ವ್ಯಕ್ತಿ ಕರೆ ಮಾಡಿ ಶಿಲ್ಪಾಗೆ ಕಿರುಕುಳ ನೀಡಿದ್ದಾನೆ ಎನ್ನುವ ಅಂಶ ಈಗ ಬಹಿರಂಗವಾಗಿದೆ ಇದರಿಂದ ನೂಂದ ಯುವತಿ ಹಾಸ್ಟೆಲ್ ಅಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.