ಶೃಂಗೇರಿ ; ಕ್ಷೇತ್ರದ ಮಾಜಿ ಶಾಸಕರು ಕಾಂಗ್ರೆಸ್ಸಿನ ಹಿರಿಯ ಮುಖಂಡರಾದ ಮಾಜಿ ಸಚಿವ ಬೇಗಾನೆ ರಾಮಯ್ಯ ಅವರು ಇಂದು ನಿಧನರಾಗಿದ್ದಾರೆ.
ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಸಚಿವ ರಾಮಯ್ಯ ಕಳೆದ ಒಂದು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದರು ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಸುಮಾರು 1,45 ರ ಸುಮಾರಿಗೆ ನಿಧನರಾಗಿದ್ದಾರೆ.
1978 ರಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಶಾಸಕರಾಗಿ ಗ್ರಾಮೀಣ ಅಭಿವೃದ್ಧಿ ಹಾಗೂ ಗ್ರಾಮೀಣ ನೀರು ಪೂರೈಕೆ ಸಚಿವರಾಗಿ ಸೇವೆ ಸಲ್ಲಿಸಿದ ಬೇಗನೆ ರಾಮಯ್ಯ ದಿವಂಗತ ಮಾಜಿ ಪ್ರಧಾನ ಮಂತ್ರಿ ಇಂದಿರಾ ಗಾಂಧಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು.
ಶೃಂಗೇರಿ ಕ್ಷೇತ್ರದ ನರಸಿಂಹರಾಜಪುರದಿಂದ ವಿದ್ಯಾರ್ಥಿ ದೆಸೆಯಿಂದಲೇ 1972ರಲ್ಲಿ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದ ಬೇಗಾನೆ ರಾಮಯ್ಯ ಶಾಸಕರಾಗಿ ಸಚಿವರಾಗಿ ಗುರುತಿಸಿಕೊಂಡಿದ್ದರು ಇವರ ನಿಧನಕ್ಕೆ ಜಿಲ್ಲಾ ಕಾಂಗ್ರೆಸ್ ನ ಅಧ್ಯಕ್ಷರು ಕಾಡ ಅಧ್ಯಕ್ಷರಾದ ಅಂಶುಮಂತ್, ಶೃಂಗೇರಿ ಶಾಸಕರಾದ ರಾಜೇಗೌಡ, ಕುಟುಂಬವಲಯ, ಸ್ನೇಹಿತರ ಒಳಗೊಂಡಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ನಾಳೆ ಅಂತ್ಯ ಸಂಸ್ಕಾರ ಮಧ್ಯಾಹ್ನ 3 ಗಂಟೆಗೆ ಶಿವಮೊಗ್ಗದ ಗಾಜನೂರಿನ ಸೀತಾ ಫಾರಂ ಹೊಸಹಳ್ಳಿಯಲ್ಲಿ ನೆರವೇರಿಸಲು ಕುಟುಂಬದವರು ನಿಶ್ಚಯಿಸಿದ್ದು ಬೆಂಗಳೂರಿನಲ್ಲಿ ಅಂತಿಮ ದರ್ಶನದ ಅವಕಾಶವನ್ನು ಈ ದಿನ ಸಂಜೆ 5:30ವರೆಗೆ ಆಫ್ಟರ್ ಸಿಎಂ ಹಾಸ್ಪಿಟಲ್ ಕೊಡಿಗೆಹಳ್ಳಿ ಗೇಟ್ ಬಳ್ಳಾರಿ ರಸ್ತೆ ಬೆಂಗಳೂರು ಇಲ್ಲಿ ಕಲ್ಪಿಸಲಾಗಿದೆ .