ಶಿವಮೊಗ್ಗ ಮಹಾನಗರ ಪಾಲಿಕೆಯು ಮೇ 05 ರಿಂದ ಬೀದಿನಾಯಿಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿ, ರೇಬಿಸ್ ವಿರುದ್ಧ ಲಸಿಕೆ ಹಾಗೂ ಕಿವಿಗೆ ಗುರುತು ಮಾಡಿ ಕಾರ್ಯಾಚರಣೆ ಪೂರ್ಣವಾದ ಬಳಿಕ ಅವುಗಳನ್ನು ಹಿಡಿದ ಸ್ಥಳಗಳಲ್ಲಿ ಬಿಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಈ ಶಸ್ತ್ರಚಿಕಿತ್ಸೆಯು ಮಾನವೀಯ ಹಾಗೂ ವೈಜ್ಞಾನಿಕ ರೀತಿಯಲ್ಲಿ ಶ್ವಾನಗಳ ಸಂತತಿಯನ್ನು ನಿಯಂತ್ರಣದಲ್ಲಿಡುವುದು, ಪ್ರಾಣಿಜನ್ಯ ರೋಗಗಳಾದ ರೇಬಿಸ್, ಲೆಪ್ಪೋಸ್ಟೈರಾ ಇತ್ಯಾದಿ ರೋಗಗಳಿಂದ ಸಾರ್ವಜನಿಕ ಆರೋಗ್ಯ ರಕ್ಷಣೆ ಮಾಡುವುದು ಹಾಗೂ ಬೀದಿನಾಯಿಗಳಿಂದ ಸಾರ್ವಜನಿಕರಿಗಾಗುವ ತೊಂದರೆಗಳಿಂದ ಮುಕ್ತಗೊಳಿಸುವ ಉದ್ದೇಶ ಹೊಂದಿದೆ.
ಈ ಶಸ್ತ್ರಚಿಕಿತ್ಸೆಯು ರಾಜೀವ್‌ಗಾಂಧಿ ಬಡಾವಣೆಯ ಮಹಾವೀರ್ ಗೋಶಾಲೆ ಪಕ್ಕ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ಪಾಲಿಕೆ ಸಹಾಯವಾಣಿ ಸಂ.: 18004257677 ನ್ನು ಸಂಪರ್ಕಿಸುವಂತೆ ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.