Tuesday, May 6, 2025
Google search engine
Homeರಾಜ್ಯBig news :ಮಾಜಿ ಡಿಸಿಎಂ ಈಶ್ವರಪ್ಪ ನವರಿಂದ ನಿರೀಕ್ಷಣಾ ಜಾಮೀನಿಗೆ ಅರ್ಜಿ..! ಕಾರಣವೇನು..?!

Big news :ಮಾಜಿ ಡಿಸಿಎಂ ಈಶ್ವರಪ್ಪ ನವರಿಂದ ನಿರೀಕ್ಷಣಾ ಜಾಮೀನಿಗೆ ಅರ್ಜಿ..! ಕಾರಣವೇನು..?!

ಮಾಜಿ ಡಿಸಿಎಂ ಈಶ್ವರಪ್ಪ ನವರಿಗೆ ಬಂಧನದ ಭೀತಿ ಎದುರಾಯಿತಾ..?! ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ ಮಾಜಿ ಡಿಸಿಎಂ ಈಶ್ವರಪ್ಪ ಆದರೆ ಎದುರುದಾರರಾದ ಲೋಕಾಯುಕ್ತ ಪೊಲೀಸ್ ಹಾಗೂ ದೂರದಾರರಾದ ವಕೀಲ ವಿನೋದ್ ರವರಿಗೆ ತಕರಾರು ಅರ್ಜಿ ಸಲ್ಲಿಸಲು ನೋಟಿಸ್ ನೀಡಿದ ನ್ಯಾಯಾಲಯ ಕುತೂಹಲ ಘಟ್ಟ ತಲುಪಿದ ಪ್ರಕರಣ…

ಏನಿದು ಪ್ರಕರಣ…!

ಶಿವಮೊಗ್ಗ: 2012 ರಲ್ಲಿ ಮಾಜಿ ಉಪಮುಖ್ಯಮಂತ್ರಿ ಈಶ್ವರಪ್ಪ ವಿರುದ್ಧ ಶಿವಮೊಗ್ಗದ ವಕೀಲರಾದ ವಿನೋದ್ ಬಿ ಯವರು ಅಕ್ರಮ ಆಸ್ತಿ ಗಳಿಕೆ ಆರೋಪದಡಿ ದೂರು ದಾಖಲಿಸಿದ್ದರು.ಶಿವಮೊಗ್ಗ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿದ್ದರು ಆದರೆ ಇದಕ್ಕೆ ಈಶ್ವರಪ್ಪ ತಡೆಯಾಜ್ಞೆ ಪಡೆದಿದ್ದರು ಈ ಪ್ರಕರಣ 3 ಬಾರಿ ಉಚ್ಚ ನ್ಯಾಯಾಲಯದ ಮೆಟ್ಟಲೇರಿತ್ತು ಅಂತಿಮವಾಗಿ 2021 ರಲ್ಲಿ ನ್ಯಾಯಮೂರ್ತಿ ಮೈಕೆಲ್ ಡಿಕುನ್ನ ಪ್ರಕರಣದ ವಿಚಾರಣೆಗೆ ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಆದೇಶಿಸಿದ್ದರು. ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ರವರು ಭ್ರಷ್ಟಾಚಾರ ಪ್ರತಿಬಂಧಕ ಕಾಯಿದೆ 13(1) (d) (e) ಅಡಿಯಲ್ಲಿ 3 ತಿಂಗಳ ಒಳಗಾಗಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಶಿವಮೊಗ್ಗ ಲೋಕಾಯುಕ್ತ Dysp ಯವರಿಗೆ ಆದೇಶಿಸಿದ್ದರು.

ಪ್ರಕರಣ ತನಿಖೆ ಹಂತದಲ್ಲಿ ಇರುವಾಗಲೇ ಈಶ್ವರಪ್ಪನವರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿರುವುದು ತೀವ್ರ ಕುತೂಹಲ ಮೂಡಿಸಿದ್ದು ಪ್ರಕರಣಕ್ಕೆ ಇಡಿ ಎಂಟ್ರಿ ಆಗುವ ಸಾಧ್ಯತೆ ಇರುವುದರಿಂದ ಮಾಜಿ ಡಿಸಿಎಂ ಗೆ ಬಂಧನದ ಭೀತಿ ಕಾಡ್ತಾ ಇದಿಯಾ..?! ಎನ್ನುವ ಪ್ರಶ್ನೆ ಎದುರಾಗಿದೆ…

ರಘುರಾಜ್ ಹೆಚ್.ಕೆ..9449553305…

RELATED ARTICLES
- Advertisment -
Google search engine

Most Popular

Recent Comments

Latest news
Big news :ಮಾಜಿ ಡಿಸಿಎಂ ಈಶ್ವರಪ್ಪ ನವರಿಂದ ನಿರೀಕ್ಷಣಾ ಜಾಮೀನಿಗೆ ಅರ್ಜಿ..! ಕಾರಣವೇನು..?! ಕೆಲಕಾಲ ಕಾರ್ಯದ ಒತ್ತಡದಿಂದ ಮುಕ್ತರಾಗಿ ಸಂತಸದ ದಿನ ಕಳೆಯಲು ಸೂಕ್ತ ವಾತಾವರಣ ನಿರ್ಮಿಸುತ್ತಿರುವುದು ಉತ್ತಮ ಬೆಳವಣಿಗೆ ಜ... Shivamogga breaking:ಪೊಲೀಸರಿಂದ ಆರೋಪಿ ಕಾಲಿಗೆ ಗುಂಡೇಟು..! Shivamogga breaking:ಪಾಲಿಕೆಯ ನಿಷ್ಕ್ರಿಯ ಆಯುಕ್ತೆ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ ಸಾಧ್ಯತೆ..?! 8 ಜನ ಅಧಿಕಾರಿ... ಬೀದಿ ನಾಯಿಗಳ ಸಂತಾನ ಹರಣಕ್ಕೆ ದಿನಾಂಕ ಫಿಕ್ಸ್..! ಇಬ್ಬರು ಮಹಿಳೆಯರು ನಾಪತ್ತೆ..! ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..!