Friday, May 9, 2025
Google search engine
Homeರಾಜ್ಯಗಾಲಿ ಜನಾರ್ದನ ರೆಡ್ಡಿ ಕ್ಷೇತ್ರ‌ ಗಂಗಾವತಿ ಗೆ ಬೈ ಎಲೆಕ್ಷನ್..!

ಗಾಲಿ ಜನಾರ್ದನ ರೆಡ್ಡಿ ಕ್ಷೇತ್ರ‌ ಗಂಗಾವತಿ ಗೆ ಬೈ ಎಲೆಕ್ಷನ್..!

ಸಿಬಿಐ ವಿಶೇಷ ನ್ಯಾಯಾಲಯ ಓಬಳಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ, ಗಂಗಾವತಿ ಕ್ಷೇತ್ರದ ಶಾಸಕ ಜನಾರ್ದನ ರೆಡ್ಡಿಗೆ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಬೆನ್ನಲ್ಲೇ ಚಂಚಲಗೂಡ ಜೈಲಿನಲ್ಲಿರುವ ಜನಾರ್ದನ ರೆಡ್ಡಿಗೆ ಮತ್ತೊಂದು ಶಾಕ್ ಕಾದಿದೆ .

ಇದೀಗ ಗಂಗಾವತಿ ಕ್ಷೇತ್ರದಿಂದ ಶಾಸಕ ಸ್ಥಾನಕ್ಕೆ ಆಯ್ಕೆಯಾಗಿದ್ದ‌ ರೆಡ್ಡಿ ಅನರ್ಹರಗೊಂಡಿದ್ದಾರೆ. ಇದರಿಂದ ಗಂಗಾವತಿ ಕ್ಷೇತ್ರಕ್ಕೆ ಉಪಚುನಾವಣೆ ಎದುರಾಗಿದೆ.ಶಾಸಕ ಸ್ಥಾನದಿಂದ ಜನಾರ್ಧನ ರೆಡ್ಡಿ ಮುಂದಿನ 6 ವರ್ಷಗಳ ಅವಧಿಗೆ ಅನರ್ಹಗೊಳಿಸಲಾಗಿದೆ. ನಿಮಯದ ಪ್ರಕಾರ ಯಾವುದೇ ಶಾಸಕ ಅಥವಾ ಸಂಸದ 2 ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟು ಶಿಕ್ಷೆಗೆ ಗುರಿಯಾದರೆ ಶಾಸಕ ಸ್ಥಾನ ರದ್ದಾಗಲಿದೆ. ಅದರಂತೆ ಈಗ ರೆಡ್ಡಿ ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ.ಸಿಬಿಐ ಕೋರ್ಟ್ ತೀರ್ಪು ಪ್ರಕಟವಾದ ತಕ್ಷಣದಿಂದಲೇ ಜಾರಿಗೆ ಬರುವಂತೆ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಮುಂದಿನ 6 ವರ್ಷಗಳ ಕಾಲ ಅನರ್ಹಗೊಳಿಸಿ ಕರ್ನಾಟಕ ವಿಧಾನಸಭೆ ಆದೇಶ ಹೊರಡಿಸಿದೆ.

ಈ ಅನರ್ಹತೆ ಜನಾರ್ದನ ರೆಡ್ಡಿ ಶಿಕ್ಷೆ ಮುಗಿಸಿ ಬಿಡುಗಡೆಯಾಗುವವರೆಗೆ ಅಥವಾ ಈ ಶಿಕ್ಷೆಗೆ ಕೋರ್ಟ್ ತಡೆ ನೀಡುವವರೆಗೆ ಇರಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

RELATED ARTICLES
- Advertisment -
Google search engine

Most Popular

Latest news
ಗಾಲಿ ಜನಾರ್ದನ ರೆಡ್ಡಿ ಕ್ಷೇತ್ರ‌ ಗಂಗಾವತಿ ಗೆ ಬೈ ಎಲೆಕ್ಷನ್..! ತುಂಗಾನಗರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಅಪರಿಚಿತ ಶವ ಪತ್ತೆ..! Big news :ಮಾಜಿ ಡಿಸಿಎಂ ಈಶ್ವರಪ್ಪ ನವರಿಂದ ನಿರೀಕ್ಷಣಾ ಜಾಮೀನಿಗೆ ಅರ್ಜಿ..! ಕಾರಣವೇನು..?! ಕೆಲಕಾಲ ಕಾರ್ಯದ ಒತ್ತಡದಿಂದ ಮುಕ್ತರಾಗಿ ಸಂತಸದ ದಿನ ಕಳೆಯಲು ಸೂಕ್ತ ವಾತಾವರಣ ನಿರ್ಮಿಸುತ್ತಿರುವುದು ಉತ್ತಮ ಬೆಳವಣಿಗೆ ಜ... Shivamogga breaking:ಪೊಲೀಸರಿಂದ ಆರೋಪಿ ಕಾಲಿಗೆ ಗುಂಡೇಟು..! Shivamogga breaking:ಪಾಲಿಕೆಯ ನಿಷ್ಕ್ರಿಯ ಆಯುಕ್ತೆ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ ಸಾಧ್ಯತೆ..?! 8 ಜನ ಅಧಿಕಾರಿ... ಬೀದಿ ನಾಯಿಗಳ ಸಂತಾನ ಹರಣಕ್ಕೆ ದಿನಾಂಕ ಫಿಕ್ಸ್..! ಇಬ್ಬರು ಮಹಿಳೆಯರು ನಾಪತ್ತೆ..! ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..!