ವಕ್ಫ್ ಕಾಯ್ದೆ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೊಡಿದ್ದು ಮೇ 20ಕ್ಕೆ ಮುಂದಿನ ವಿಚಾರಣೆ ನಡೆಯಲಿದೆ.
ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ವಕ್ಫ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಗುರುತಿಸಿರುವ ಮೂರು ವಿಷಯಗಳಾದ ಕೇಂದ್ರ ವಕ್ಫ್ ಮಂಡಳಿ ಮತ್ತು ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರನ್ನು ಸೇರಿಸುವುದು ಮತ್ತು ವಕ್ಫ್ ಆಸ್ತಿಗಳ ಡಿನೋಟಿಫಿಕೇಶನ್ ಸೇರಿದಂತೆ ವಕ್ಫ್ ಕಾಯ್ದೆಯ ಪ್ರಮುಖ ನಿಬಂಧನೆಗಳನ್ನು ಸದ್ಯಕ್ಕೆ ಜಾರಿಗೆ ತರಲಾಗುವುದಿಲ್ಲ ಮತ್ತು ಯಥಾಸ್ಥಿತಿ ಮುಂದುವರಿಯುತ್ತದೆ ಎಂದು ಕೇಂದ್ರ ಸರ್ಕಾರದ ಪರವಾಗಿ ನ್ಯಾಯಲಯಕ್ಕೆ ಭರವಸೆ ನೀಡಿದರು.