ಭಾರತ ದೇಶದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಾಗರದ ಕಾರ್ಗಲ್ ನಿವಾಸಿ ಒಬ್ಬ ಅವಹೇಳನಕಾರಿ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು ಆತನನ್ನು ಸಾಗರದ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸುತ್ತಿದ್ದಾರೆ.

ಇತ್ತೀಚಿಗೆ ಭಾರತ ಪಾಕ್ ಯುದ್ಧ ಶುರುವಾಗಿ ಕದನ ವಿರಾಮದ ಬೆನ್ನಲ್ಲೇ ಮೋದಿ ವಿರುದ್ಧ ಸಾಕಷ್ಟು ಟೀಕೆ ಟಿಪ್ಪಣಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿರುವುದನ್ನು ಪೊಲೀಸ್ ಇಲಾಖೆ ತೀವ್ರ ನಿಗಾವಹಿಸಿ ಅಂಥವರ ವಿರುದ್ಧ ಕ್ರಮ ಕೈಗೊಳ್ಳುತ್ತಿದೆ.
ಇದೀಗ ಸಾಗರದಲ್ಲಿ ಕಾರ್ಗಲ್ ನಿವಾಸಿ ಒಬ್ಬ ಇದೇ ತರದ ಪೋಸ್ಟರ್ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು ಸಾಗರದ ದಕ್ಷ ಡಿವೈಎಸ್ಪಿ ಗೋಪಾಲಕೃಷ್ಣ ನಾಯ್ಕ್ ಅವರ ಆದೇಶದ ಮೇರೆಗೆ ಪೊಲೀಸರು ಆತನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದ್ದು ಈತನ ಮೇಲೆ ಎಫ್ ಐ ಆರ್ ಆಗುವ ಸಾಧ್ಯತೆ ಇದೆ.