Thursday, May 15, 2025
Google search engine
Homeರಾಜ್ಯಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್ ಗೌರವ ಸಂಭಾವನೆಯಲ್ಲಿ ಹೆಚ್ಚಳ..!

ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್ ಗೌರವ ಸಂಭಾವನೆಯಲ್ಲಿ ಹೆಚ್ಚಳ..!

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಅವರ ಬಹುದಿನದ ಬೇಡಿಕೆಯಂತೆ, ಈ ಎಲ್ಲಾ ಅತಿಥಿ ಬೋಧಕರ ಮಾಸಿಕ ಗೌರವಧನವನ್ನು ತಲಾ ₹2,000 ಗಳಷ್ಟು ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶವು ತಕ್ಷಣದಿಂದಲೇ ಜಾರಿಗೆ ಬರಲಿದ್ದು, ಮುಂದಿನ ಆದೇಶದವರೆಗೆ ಈ ಪರಿಷ್ಕೃತ ಗೌರವ ಸಂಭಾವನೆ ಜಾರಿಯಲ್ಲಿರಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈ ಹಿಂದೆ ಸರ್ಕಾರ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರಿಗೆ ₹10,000 ಹಾಗೂ ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ ₹10,500 ಗೌರವ ಸಂಭಾವನೆಯನ್ನು ನಿಗದಿಪಡಿಸಿತ್ತು. ಇದೀಗ, ಈ ಮೊತ್ತಕ್ಕೆ ಹೆಚ್ಚುವರಿಯಾಗಿ ₹2,000 ಗಳನ್ನು ಸೇರಿಸಲಾಗಿದ್ದು, ಪರಿಷ್ಕೃತ ಗೌರವ ಸಂಭಾವನೆಯು ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರಿಗೆ ₹12,000 ಹಾಗೂ ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ ₹12,500 ಆಗಲಿದೆ. ಅಂತೆಯೇ, ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೂ ₹2,000 ಗಳಷ್ಟು ಗೌರವಧನ ಹೆಚ್ಚಳವಾಗಲಿದೆ. ಈ ಹಿಂದೆ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ₹12,000 ನಿಗದಿಯಾಗಿತ್ತು. ಇಂದಿನ ಆದೇಶದಿಂದ ಪರಿಷ್ಕೃತ ಗೌರವ ಸಂಭಾವನೆಯು ಅತಿಥಿ ಉಪನ್ಯಾಸಕರಿಕೆ ₹14,000 ಆಗಲಿದೆ.

RELATED ARTICLES
- Advertisment -
Google search engine

Most Popular

Latest news
ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್ ಗೌರವ ಸಂಭಾವನೆಯಲ್ಲಿ ಹೆಚ್ಚಳ..! Big breaking news: ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಸಾಗರದಲ್ಲಿ ವ್ಯಕ್ತಿಯ ಬಂಧನ..! Big news: ವಕ್ಫ್ ಕಾಯ್ದೆ ವಿಚಾರಣೆ ಮತ್ತೆ ಮುಂದೂಡಿಕೆ..!ಕೇಂದ್ರ ಸರ್ಕಾರ ನ್ಯಾಯಾಲಯಕ್ಕೆ ನೀಡಿದ ಭರವಸೆಗಳೇನು..? ಪೊಲೀಸ್ ಸಬ್ ಇನ್ಸ್ಪೆಕ್ಟರ್ ತರಬೇತಿಗಾಗಿ ಅರ್ಜಿ ಆಹ್ವಾನ..! ತೀರ್ಥಹಳ್ಳಿ: ದ್ವಿತೀಯ ಪಿಯುಸಿಯಲ್ಲಿ ರಾಜ್ಯಕ್ಕೆ ಪ್ರಥಮ ರ್ಯಾಂಕ್ ಪಡೆದ ಕುಮಾರಿ ದೀಕ್ಷಾಗೆ ಮಾಮ್ಕೋಸ್ ವತಿಯಿಂದ ಪ್ರೋ... ಗಾಲಿ ಜನಾರ್ದನ ರೆಡ್ಡಿ ಕ್ಷೇತ್ರ‌ ಗಂಗಾವತಿ ಗೆ ಬೈ ಎಲೆಕ್ಷನ್..! ತುಂಗಾನಗರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಅಪರಿಚಿತ ಶವ ಪತ್ತೆ..! Big news :ಮಾಜಿ ಡಿಸಿಎಂ ಈಶ್ವರಪ್ಪ ನವರಿಂದ ನಿರೀಕ್ಷಣಾ ಜಾಮೀನಿಗೆ ಅರ್ಜಿ..! ಕಾರಣವೇನು..?! ಕೆಲಕಾಲ ಕಾರ್ಯದ ಒತ್ತಡದಿಂದ ಮುಕ್ತರಾಗಿ ಸಂತಸದ ದಿನ ಕಳೆಯಲು ಸೂಕ್ತ ವಾತಾವರಣ ನಿರ್ಮಿಸುತ್ತಿರುವುದು ಉತ್ತಮ ಬೆಳವಣಿಗೆ ಜ... Shivamogga breaking:ಪೊಲೀಸರಿಂದ ಆರೋಪಿ ಕಾಲಿಗೆ ಗುಂಡೇಟು..!