
ಬೆಂಗಳೂರು :ಸೆಪ್ಟೆಂಬರ್ :24>ಅಕ್ಟೋಬರ್ 3 ರಿಂದ ಪಬ್ ಗಳನ್ನು ತೆರೆಯೋದಕ್ಕೆ ಅವಕಾಶ ನೀಡಲಾಗುತ್ತಿದೆ. 6 ರಿಂದ 12ನೇ ತರಗತಿಗಳನ್ನು ಶೇ.100 ಆರಂಭಿಸದೋಕ್ಕೂ ಅವಕಾಶ ನೀಡಲಾಗುತ್ತಿದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದು.
ಇಂದು ನಡೆದಂತ ಕೋವಿಡ್ ನಿಯಂತ್ರಣ ಸಭೆಯ ಬಳಿಕ ಮಾತನಾಡಿದಂತ ಅವರು, ರಾಜ್ಯದಲ್ಲಿ ಪ್ರಸ್ತುತ ಸರಾಸರಿ ಪಾಸಿಟಿವಿಟಿ ದರ ಶೇ.0.66 ಇದೆ. ಅಕ್ಟೋಬರ್ 1ರಿಂದ ಕೋವಿಡ್ ಪಾಸಿಟಿವಿಟಿ ದರ ಶೇ.1ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಶೇ.100ರಷ್ಟು ಸೀಟುಗಳ ಭರ್ತಿಗೆ ಅವಕಾಶ ನೀಡಲಾಗುವುದು. ಶೇ.1ಕ್ಕಿಂತ ಹೆಚ್ಚಾದರೆ ಶೇ.50ರಷ್ಟು ಭರ್ತಿಗೆ ಹಾಗೂ ಶೇ.2ಕ್ಕಿಂತ ಹೆಚ್ಚಾದರೆ ಚಿತ್ರಮಂದಿರ ಬಂದ್ ಮಾಡಲಾಗುವುದು. ಪಬ್ ಗಳಿಗೂ ಇದೇ ಮಾನದಂಡ ಅನುಸರಿಸಲಾಗುವುದು ಎಂದರು.
ಚಿತ್ರಮಂದಿರಗಳ ಪ್ರವೇಶಕ್ಕೆ ಒಂದು ದೋಸ್ ಕಡ್ಡಾಯ, ಗರ್ಭಿಣಿಯರಿಗೆ ಮಕ್ಕಳಿಗೆ ಇಲ್ಲ ಅವಕಾಶ:
ಇನ್ನು ಚಿತ್ರಮಂದಿರಗಳ ಪ್ರವೇಶಕ್ಕೆ ಕನಿಷ್ಠ ಒಂದು ಡೋಸ್ ಲಸಿಕೆ ಹಾಕಿಸಿಕೊಂಡವರಿಗೆ ಮಾತ್ರ ಪ್ರವೇಶ. ಗರ್ಭಿಣಿ ಮಹಿಳೆಯರು ಮತ್ತು ಮಕ್ಕಳಿಗೆ ಅವಕಾಶ ನೀಡದಿರಲು ತೀರ್ಮಾನಿಸಲಾಗಿದೆ ಎಂದರು.
ರಾತ್ರಿ ಕರ್ಫ್ಯೂ ನಿಗದಿ:
ರಾತ್ರಿ ಕರ್ಪ್ಯೂವನ್ನು ರಾತ್ರಿ 10 ರಿಂದ ಬೆಳಿಗ್ಗೆ 5ರವರೆಗೆ ನಿಗದಿ ಪಡಿಸಲಾಗುವುದು. ಆರರಿಂದ 12ನೇ ತರಗತಿವರೆಗೆ ಶೇ.100ರಷ್ಟು ಹಾಜರಾತಿಗೆ ಅವಕಾಶ ಕಲ್ಪಿಸಲಾಗುವುದು. ವಾರದಲ್ಲಿ ಐದು ದಿನ ಶಾಲಾ ಕಾಲೇಜುಗಳನ್ನು ನಡೆಸಲು ನಿರ್ಧರಿಸಲಾಯಿತು ಎಂದರು.
ದಸರಾಕ್ಕೆ ಹೊಸ ಮಾರ್ಗಸೂಚಿ ಗಡಿಭಾಗದಲ್ಲಿ ಹೆಚ್ಚಿನ ಜಾಗ್ರತೆ:
ದಸರಾ ಬಗ್ಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಲಾಗುವುದು. ಗಡಿ ಭಾಗದಲ್ಲಿ ಹೆಚ್ಚು ನಿಗಾವಹಿಸಲಾಗುವುದು. ಯಾದಗಿರಿ, ರಾಯಚೂರು, ಕಲಬುರ್ಗಿ ಹಾಗೂ ಮೈಸೂರು ಜಿಲ್ಲೆಯಲ್ಲಿ ಲಸಿಕೆ ಅಭಿಯಾನ ತೀವ್ರಗೊಳಿಸಲು, ಜನರಲ್ಲಿ ಅರಿವು ಮೂಡಿಸಲು ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲು ಸೂಚಿಸಲಾಗಿದೆ ಎಂದು ಇದೇ ಸಮಯದಲ್ಲಿ ತಿಳಿಸಿದರು.
ವರದಿ.. ರಘುರಾಜ್ ಹೆಚ್. ಕೆ..
ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305/7892830899…