Wednesday, April 30, 2025
Google search engine
Homeರಾಜ್ಯಬಿಬಿಎಂಪಿ ವ್ಯಾಪ್ತಿಯಲ್ಲಿ ಎಲ್‌ಇಡಿ ಬೀದಿ ದೀಪಗಳ ಅಳವಡಿಕೆಗೆ ಜನಪ್ರತಿನಿಧಿಗಳ ಅಡ್ಡಗಾಲು 847 ಕೋಟಿ ರೂಪಾಯಿಗಳ ತೆರಿಗೆ...

ಬಿಬಿಎಂಪಿ ವ್ಯಾಪ್ತಿಯಲ್ಲಿ ಎಲ್‌ಇಡಿ ಬೀದಿ ದೀಪಗಳ ಅಳವಡಿಕೆಗೆ ಜನಪ್ರತಿನಿಧಿಗಳ ಅಡ್ಡಗಾಲು 847 ಕೋಟಿ ರೂಪಾಯಿಗಳ ತೆರಿಗೆ ಹಣ ನಷ್ಟ – ತಕ್ಷಣ ಮುಖ್ಯಮಂತ್ರಿಗಳ ಮಧ್ಯ ಪ್ರವೇಶಕ್ಕೆ ಆಪ್‌ ಆಗ್ರಹ..

  • ಮೂರು ವರ್ಷದಲ್ಲಿ 847 ಕೋಟಿ ರೂಪಾಯಿಗಳ ನಷ್ಟ
  • ಮೂರು ವರ್ಷದಲ್ಲಿ ಮೂರು ಪಕ್ಷಗಳ ಜನಪ್ರತಿನಿಧಿಗಳೇ ಇದಕ್ಕೆ ಹೊಣೆ
  • ಈ ನಷ್ಟವವನ್ನು ತುಂಬಿಕೊಡುವವರು ಯಾರು

ಬೆಂಗಳೂರು ಸೆಪ್ಟೆಂಬರ್‌ 24: ಪ್ರತಿವರ್ಷ ಕೊಟ್ಯಾಂತರ ರೂಪಾಯಿಗಳಷ್ಟು ತೆರಿಗೆ ಹಣವನ್ನು ಉಳಿಸುವ ಉದ್ದೇಶದಿಂದ ಜಾರಿಗೊಳಿಸಲಾಗಿದ್ದ ಬೀದಿ ದೀಪಗಳಿಗೆ ಎಲ್‌ಇಡಿ ಬಲ್ಬ್‌ ಅಳವಡಿಕೆ ಕಾರ್ಯಕ್ಕೆ ನಗರದ ಸಚಿವರು ಹಾಗೂ ಜನಪ್ರತಿನಿಧಿಗಳು ಅಡ್ಡಗಾಲು ಹಾಕುತ್ತಿದ್ದಾರೆ. ಇದರಿಂದ ಮೂರು ವರ್ಷಗಳಲ್ಲಿ ಸುಮಾರು 847 ಕೋಟಿ ರೂಪಾಯಿಗಳ ನಷ್ಟವಾಗಿದ್ದು, ಜನರ ತೆರಿಗೆ ಹಣ ಅನಗತ್ಯ ವ್ಯವಯವಾಗುವುದನ್ನು ನಿವಾರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಕೂಡಲೇ ಮಧ್ಯ ಪ್ರವೇಶಿಸಬೇಕು ಎಂದು ಆಮ್‌ ಆದ್ಮಿ ಪಕ್ಷದ ಬೆಂಗಳೂರು ಘಟಕದ ಅಧ್ಯಕ್ಷ ಮೋಹನ್‌ ದಾಸರಿ ಆಗ್ರಹಿಸಿದ್ದಾರೆ.

ನಗರದ ಪ್ರೆಸ್‌ಕ್ಲಬ್‌ ನಲ್ಲಿಂದು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಬಿಎಂಪಿ ವ್ಯಾಪ್ತಿಯಲ್ಲಿ ಎಲ್‌ಇಡಿ ಬಲ್ಬ್‌ ಗಳ ಅಳವಡಿಕೆಗೆ ಷಹಾಪೋರ್ಜಿ ಪಲ್ಲೊಂಜಿ, ಎಸ್‌ಎಮ್‌ಎಸ್‌ ಇನ್ಪ್ರಾಸ್ಟ್ರಕ್ಚರ್‌ ಮತ್ತು ಸಮುದ್ರ ಎಲೆಕ್ಟ್ರಾನಿಕ್‌ ಸಿಸ್ಟಮ್ಸ್‌ – ಈ ಮೂರು ಕಂಪನಿಗಳ ಕನ್ಸೋರ್ಷಿಯಮ್‌ ಗೆ 2018 ರಲ್ಲಿ ಟೆಂಡರ್‌ ನೀಡಲಾಗಿತ್ತು. ನಗರದಲ್ಲಿ ಬೀದಿ ದೀಪಗಳ ವಿದ್ಯುತ್‌ ಬಳಕೆಯ ಬಗ್ಗೆ ಅಧ್ಯಯನ ಮಾಡುವ ಉದ್ದೇಶದಿಂದ ಪಿಡಬ್ಲೂಸಿ ಸಂಸ್ಥೆಯನ್ನೂ ನೇಮಿಸಲಾಗಿತ್ತು. ಈ ಸಂಸ್ಥೆಯ ವತಿಯಿಂದ ನಡೆಸಲಾದ ಅಧ್ಯಯನದಲ್ಲಿ ಬಿಬಿಎಂಪಿ ಪ್ರತಿವರ್ಷ ತನ್ನ 4.85 ಲಕ್ಷ ಬೀದಿದೀಪಗಳ ನಿರ್ವಹಣೆಗೆ 240 ಕೋಟಿ ರೂಪಾಯಿಗಳನ್ನು ವ್ಯಯಿಸುತ್ತಿದೆ. ಅದರಲ್ಲಿ ಸುಮಾರು 200 ಕೋಟಿ ರೂಪಾಯಿಗಳನ್ನು ಬೆಸ್ಕಾಂಗೆ ನೀಡಲಾಗುತ್ತಿದೆ. ವರ್ಷಪೂರ್ತಿ ಬೀದಿದೀಪಗಳನ್ನು ಸರಿಯಾಗಿ ನಿರ್ವಹಣೆ ಮಾಡಿದಲ್ಲಿ ಈ ವೆಚ್ಚ ಸುಮಾರು 330 ಕೋಟಿಗಳಿಗೆ ತಲುಪುತ್ತದೆ ಎನ್ನುವುದನ್ನ ಸ್ಥಳೀಯ ಆಡಳಿತ ಅಂದಾಜು ಕೂಡಾ ಮಾಡಿದೆ.

ಜಾಗತಿಕ ಟೆಂಡರ್‌ ಕರೆಯುವ ಮೂಲಕ ಬಿಬಿಎಂಪಿ ವ್ಯಾಪ್ತಿಯಲ್ಲಿ ಈ ವೆಚ್ಚವನ್ನು 233 ಕೋಟಿ ರೂಪಾಯಿಗಳಿಗೆ ಇಳಿಸುವ ಅಂದಾಜು ಮಾಡಲಾಗಿತ್ತು. ಈ ಉಳಿತಾಯ ಎಲ್‌ಇಡಿ ವಿದ್ಯುತ್‌ ದೀಪಗಳ ಅಳವಡಿಕೆಯಿಂದಾಗುವ ವಿದ್ಯುತ್‌ ಬಳಕೆಯಲ್ಲಿನ ಇಳಿಕೆಯಿಂದ ಸಾಧ್ಯವಾಗುತ್ತಿತ್ತು. ವಿದ್ಯುತ್‌ ಬಳಕೆಯ ಪ್ರಮಾಣ 290 ಕೋಟಿ ರೂಪಾಯಿಗಳಿಂದ 33 ಕೋಟಿ ರೂಪಾಯಿಗಳಿಗೆ ಇಳಿಕೆಯಾಗುತ್ತಿತ್ತು. 5 ಲಕ್ಷ ಎಲ್‌ಇಡಿ ವಿದ್ಯುತ್‌ ದೀಪಗಳನ್ನು ಅಳವಡಿಸಿ ಅವುಗಳ ಸಮರ್ಪಕ ನಿರ್ವಹಣೆಯಿಂದ ಶೇಕಡಾ 85.50% ರಷ್ಟು ವಿದ್ಯುತ್‌ ಬಳಕೆಯನ್ನು ಕಡಿಮೆ ಮಾಡುವ ಮೂಲಕ ಈ ಕನ್ಸೋರ್ಷಿಯಮ್‌ ಸುಮಾರು 175 ಕೋಟಿ ರೂಪಾಯಿಗಳನ್ನು ಆದಾಯ ಪಡೆದುಕೊಳ್ಳುತ್ತಿತ್ತು.

ಆದರೆ, ಇಂತಹ ಉತ್ತಮ ಯೋಜನೆ ಕಾರ್ಯಗತಗೊಳಿಸುವಲ್ಲಿ ಅನಗತ್ಯ ವಿಳಂಬವಾಗುತ್ತಿದೆ. ಇದಕ್ಕೆ ನಮ್ಮ ರಾಜಕೀಯ ವ್ಯವಸ್ಥೆಯ ದುಷ್ಟ ಶಕ್ತಿಗಳ ಕಾರಣ. ಸೆಪ್ಟೆಂಬರ್‌ 9 ರಂದು ಯಶವಂತಪುರದಲ್ಲಿ ಎಲ್‌ ಇಡಿ ಬೀದಿದೀಪಗಳನ್ನು ಅಳವಡಿಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದ ನೌಕರರ ಮೇಲೆ ನಗರದ ಕೆಲ ಸಚಿವರು ಹಾಗೂ ಮಾಜಿ ಕಾರ್ಪೋರೇಟರ್‌ ಅವರ ಬೆಂಬಲಿಗರು ಹಲ್ಲೆ ಮಾಡಿದ್ದಾರೆ. ಅಲ್ಲದೆ, ಪ್ರತಿನಿತ್ಯ ಅವರ ಕಾರ್ಯಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ವಿಶ್ವವಿಖ್ಯಾತ ಬೆಂಗಳೂರು ನಗರದಲ್ಲೇ ಇಂತಹ ಕ್ರಾಂತಿಕಾರಿ ಯೋಜನೆಯನ್ನು ಜಾರಿಗೊಳಿಸಲು ಸಾಧ್ಯವಾಗುತ್ತಿಲ್ಲ ಎನ್ನುವುದು ವಿಷಾಧನೀಯ. ಕಳೆದ ಮೂರು ವರ್ಷಗಳಲ್ಲಿ ಈ ಯೋಜನೆ ಕಾರ್ಯಗತವಾಗಿದ್ದರೆ ಸುಮಾರು 847 ಕೋಟಿ ರೂಪಾಯಿಗಳ ಉಳಿತಾಯ ಆಗುತ್ತಿತ್ತು. ಆದರೆ ರಾಜಕೀಯ ಪ್ರತಿನಿಧಿಗಳ ದುಷ್ಟ ಮನಸ್ಥಿತಿಯಿಂದ ಇದು ಸಾಧ್ಯವಾಗಿಲ್ಲ. ಈ ನಷ್ಟವನ್ನು ಕಳೆದ ಮೂರು ವರ್ಷಗಳಲ್ಲಿ ಬಿಬಿಎಂಪಿ ಆಡಳಿತ ನಡೆಸಿದ ಜೆಸಿಬಿ ಪಕ್ಷಗಳಿಂದ ವಸೂಲು ಮಾಡಿಕೊಳ್ಳಬೇಕು ಎಂದು ಮೋಹನ್‌ ದಾಸರಿ ಆಗ್ರಹಿಸಿದರು.

ನಗರದ ಜನತೆಯ ಕೋಟ್ಯಾಂತರ ರೂಪಾಯಿ ಹಣವನ್ನು ಉಳಿಸುವಂತಹ ಯೋಜನೆಗೆ ಅಡ್ಡಗಾಲು ಹಾಕುವ ಮೂಲಕ ರಾಜಕಾರಣಿಗಳು ಅಭಿವೃದ್ದಿಯ ಪರವಲ್ಲ ಎನ್ನುವ ಧೋರಣೆಯನ್ನು ತೋರಿಸಿದ್ದಾರೆ. ಮಾನ್ಯ ಮುಖ್ಯಮಂತ್ರಿಗಳು ಈ ಕೂಡಲೇ ಮಧ್ಯ ಪ್ರವೇಶಿಸಿಬೇಕು ಹಾಗೂ ಬೀದಿ ದೀಪಗಳ ಎಲ್‌ಇಡಿ ಅಳವಡಿಕೆಗೆ ಯಾವುದೇ ತೊಂದರೆ ಆಗದಂತೆ ಕ್ರಮವಹಿಸಬೇಕು ಎಂದು ಅವರು ಆಗ್ರಹಿಸಿದರು.

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305/7892830899..

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...