
ವರ್ಗಾವಣೆಗೊಂಡ ಸಂಘದ ಹಿರಿಯ ಉಪಾಧ್ಯಕ್ಷರಾದ ಸುಭಾಷ್ ಬಾಬು ಜಾಲಿಹಾಳ್ ರವರಿಗೆ ತೀರ್ಥಹಳ್ಳಿ ತಾಲ್ಲೂಕು ಸರ್ಕಾರಿ ನೌಕರರ ಸಂಘದವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಆತ್ಮೀಯವಾಗಿ ಬೀಳ್ಕೊಡಲಾಯಿತು.
ಸಂಘದ ಅಧ್ಯಕ್ಷ ಟಿ ವಿ ಸತೀಶ್ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷರಾದ ಸುಷ್ಮ ಎಸ್ ಪಿ, ಜಂಟಿ ಕಾರ್ಯದರ್ಶಿಗಳಾದ ಎಲ್ಲಪ್ಪ ಒಡ್ಡರ್, ಸತೀಶ್ ಟಿ ಆರ್, ಸಂಘಟನಾ ಕಾರ್ಯದರ್ಶಿ ರಮೇಶ್,ಕಂದಾಯ ಇಲಾಖಾ ನೌಕರರ ಸಂಘದ ಅಧ್ಯಕ್ಷ ಕಟ್ಟೆ ಮಂಜುನಾಥ್, ನಿರ್ದೇಶಕರಾದ ಗಣೇಶ್ ಮೂರ್ತಿ, ಸಂಘದ ನಿಕಟಪೂರ್ವ ಗೌರವಾಧ್ಯಕ್ಷ ಆರ್ ಎಂ ಧರ್ಮಕುಮಾರ್, ನಿಕಟಪೂರ್ವ ಉಪಾಧ್ಯಕ್ಷ ಹೆಚ್ ಆರ್ ಕೃಷ್ಣಮೂರ್ತಿ, ನಿಕಟಪೂರ್ವ ಜಂಟಿ ಕಾರ್ಯದರ್ಶಿ ಭಾಸ್ಕರ್, ಕಾಡಪ್ಪಗೌಡ,ಹನುಮಂತ ರೆಡ್ಡಿ ಮುಂತಾದವರು ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಸಂಘದ ಕಾರ್ಯದರ್ಶಿ ರಾಮು ಬಿ ಸ್ವಾಗತಿಸಿ,ನಿರೂಪಿಸಿದರು.ಖಜಾಂಚಿ ಹೆಚ್ ಸಿ ಪವಿತ್ರ ವಂದಿಸಿದರು.
ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305/7892830899..