62

ತೀರ್ಥಹಳ್ಳಿ : ತಾಲೂಕಿನಾದ್ಯಂತ ವ್ಯಾಪಕವಾಗಿ ಮಳೆ ಸುರಿಯುತ್ತಿರುವ ಹಾಗೂ ಶೀತ ವಾತಾವರಣ ಹಿನ್ನೆಲೆಯಲ್ಲಿ ಮುಂಜಾಗ್ರತಾ ದೃಷ್ಟಿಯಿಂದ ತೀರ್ಥಹಳ್ಳಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು. ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ದಿನಾಂಕ 18.08.2025 ರ ಸೋಮವಾರ ರಜೆ ಘೋಷಿಸಿದೆ.

ಸದರಿ ರಜಾ ಅವಧಿಯ ಶೈಕ್ಷಣಿಕ ಪಠ್ಯಗಳನ್ನು ಮುಂದಿನ ರಜೆಯ ದಿನಗಳಲ್ಲಿ ಸರಿ ಹೊಂದಿಸಿಕೊಳ್ಳಲು ಸಂಬಂಧಿತ ಶಾಲಾ ಮುಖ್ಯಸ್ಥರುಗಳಿಗೆ ತಹಶೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿ ಆದೇಶಿಸಿದ್ದಾರೆ.

