Home ರಾಜ್ಯಶಿವಮೊಗ್ಗದ ಮೂವರು ಮಹಿಳೆಯರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ..!

ಶಿವಮೊಗ್ಗದ ಮೂವರು ಮಹಿಳೆಯರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ..!

by EDITOR NEWS WARRIORS
0 comments

 

ಬೆಂಗಳೂರು: ಸಾಹಿತಿಗಳಾದ ಶೂದ್ರ ಶ್ರೀನಿವಾಸ್, ಪ್ರತಿಭಾ ನಂದಕುಮಾರ್‌ ಸಹಿತ ಐವರನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿ 2024 ಗೌರವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಚಾಮರಾಜನಗರದ ಡಾ.ಎಂ.ಬಸವಣ್ಣ, ಬೆಂಗಳೂರಿನ ಶೂದ್ರ ಶ್ರೀನಿವಾಸ್‌, ಪ್ರತಿಭಾ ನಂದಕುಮಾರ್, ಕಲಬುರಗಿಯ ಡಾ.ಡಿ.ಬಿ.ನಾಯಕ್, ಮುಂಬೈಯ ಡಾ.ವಿಶ್ವನಾಥ ಕಾರ್ನಾಡ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಅಕಾಡೆಮಿ ಅಧ್ಯಕ್ಷ ಎಲ್.ಎನ್. ಮುಕುಂದರಾಜ್ ತಿಳಿಸಿದ್ದಾರೆ.

ಸಾಹಿತ್ಯಶ್ರೀ ಪ್ರಶಸ್ತಿಗೆ ಚಿಕ್ಕಮಗಳೂರಿನ ಡಾ.ಬಿ.ಎಂಪುಟ್ಟಯ್ಯ, ಬೆಂಗಳೂರು ಡಾ.ಕೆ.ವೈ. ನಾರಾಯಣಸ್ವಾಮಿ, ಕೋಲಾರದ ಪದ್ಮಾಲಯ ನಾಗರಾಜ್, ತುಮಕೂರಿನ ಬಿ.ಯು.ಸುಮಾ, ಶಿವಮೊಗ್ಗದ ಮಮತಾ ಸಾಗರ, ಶಿವಮೊಗ್ಗದಲ್ಲಿ ಸರಕಾರಿ ಕಾಲೇಜಿನ ಪ್ರಾಚಾರ್ಯೆಯಾಗಿರುವ ಸಬಿತಾ ಬನ್ನಾಡಿ, ಬಳ್ಳಾರಿಯ ಅಬ್ದುಲ್ ಹೈ ತೋರಣಗಲ್, ಅಕ್ಕಲಕೋಟೆಯ ಡಾ.ಗುರುಲಿಂಗಪ್ಪ ದಬಾಲೆ, ತೀರ್ಥಹಳ್ಳಿಯವರಾದ ಹಾಲಿ ಉತ್ತರಕನ್ನಡ ದ ಹೊನ್ನಾವರದ ಕವಲಕ್ಕಿಯಲ್ಲಿ ವೈದ್ಯೆಯಾಗಿರುವ ಡಾ!!.ಎಚ್.ಎಸ್. ಅನುಪಮಾ, ರಾಯಚೂರಿನ ಡಾ.ಅಮರೇಶ ಯತಗಲ್ ಅವರು ಆಯ್ಕೆಯಾಗಿದ್ದಾರೆ.

ಪ್ರಜಾವಾಣಿ ಪತ್ರಿಕೆಯ ಸುದ್ದಿ ಸಂಪಾದಕ ಸುದೇಶ ದೊಡ್ಡಪಾಳ್ಯ ಅವರ ‘ಈಶಾನ್ಯ ದಿಕ್ಕಿನಿಂದ’ ಕೃತಿಗೆ ವೈಚಾರಿಕ ಅಂಕಣ ಬರಹದ ಬಿ.ವಿ.ವೀರಭದ್ರಪ್ಪ ದತ್ತಿ ಬಹುಮಾನ ಲಭಿಸಿದೆ.

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...